ಸಮೀಪದ ಬೆಳಗುಲಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಬೆಳಗುಲಿ ಇವರ ಸಹಯೋಗದಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಲಾದ ಭಾರತ್ ನಿರ್ಮಾಣ ಸೇವಾ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ದಿ: 28-08-2024ರಂದು ಬೆಳಿಗ್ಗೆ 11-00 ಕ್ಕೆ ಹಮ್ಮಿಕೊಳ್ಳಲಾಗಿದೆ. ನೂತನ ಕಟ್ಟಡದ ಉದ್ಘಾಟನೆಯನ್ನು ಶಾಸಕರಾದ ಸಿ.ಬಿ.ಸುರೇಶ್‌ಬಾಬುರವರು ನೆರವೇರಿಸಲಿದ್ದು ರೈಲ್ವೇ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವರು ಹಾಗೂ ತುಮಕೂರು ಲೋಕಸಭಾ ಕ್ಷೇತ್ರದ ಸಂಸದರಾದ ವಿ.ಸೋಮಣ್ಣನವರು, ಗೃಹಸಚಿವರಾದ ಡಾ|| ಜಿ.ಪರಮೇಶ್ವರ್‌ರವರು,ಸಹಕಾರ ಸಚಿವರಾದ ಕೆ.ಎನ್.ರಾಜಣ್ಣನವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆರವರು,ಮಾನ್ಯ ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರರವರು ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ. ಬೆಳಗುಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎನ್.ರಾಮಯ್ಯನವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಎಸ್.ಆರ್.ಶ್ರೀನಿವಾಸ್,ರಾಜ್ಯ ಸಭಾ ಸದಸ್ಯರಾದ ಜಗ್ಗೇಶ್,ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ,ವಿಧಾನ ಪರಿಷತ್ ಸದಸ್ಯರರಾದ ...
📰 ಹುಳಿಯಾರು ಸೇರಿದಂತೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸ್ಥಳಿಯ ಸುದ್ದಿ ಸಮಾಚಾರದ ಬ್ಲಾಗ್........ ✍️ನರೇಂದ್ರಬಾಬು ಹುಳಿಯಾರು-📞9448760070