ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಡಿಸೆಂಬರ್, 2024 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...

ವಕೀಲರು ರಾಷ್ಟ್ರ ನಿರ್ಮಾತೃಗಳು & ಸಂವಿಧಾನ ರಕ್ಷಕರು.

ಪ್ರತಿ ವರ್ಷ ಡಿಸೆಂಬರ್ 3 ರಂದು ವಕೀಲರ ದಿನವನ್ನಾಗಿ ದೇಶಾದ್ಯಂತ ಆಚರಿಸಲಾಗುತ್ತದೆ ...ಪ್ರತಿಯೊಂದು ದೇಶದ ಸ್ವಾತಂತ್ರ್ಯ ಹೋರಾಟದ ನಾಯಕತ್ವದಿಂದ ಪ್ರಾರಂಭವಾಗಿ ಆಯಾ ದೇಶದ ಸಂವಿಧಾನ ರಚಿಸುವಲ್ಲಿ ಮತ್ತು ರಚಿಸಿದ ಸಂವಿಧಾನವನ್ನು ರಕ್ಷಿಸುವಲ್ಲಿ ವಕೀಲವೃಂದದ್ದೆ ಸಿಂಹಪಾಲು.ಇಂತಹ ಶ್ರೇಷ್ಠ ವೃತ್ತಿ ವರ್ಗವನ್ನು ಗೌರವಿಸುವ ಸಲುವಾಗಿ & ಡಾ. ಬಾಬು ರಾಜೇಂದ್ರ ಪ್ರಸಾದ್ ರವರ ಜನ್ಮ ದಿನದ ಸವಿನೆನಪಿಗಾಗಿ ಈ ದಿನವನ್ನ ವಕೀಲರ ದಿನವನ್ನಾಗಿ ಆಚರಿಸಲಾಗುತ್ತದೆ .               ಭಾರತದ ಸ್ವಾತಂತ್ರ್ಯ ಸಂಗ್ರಾಮದ ನಾಯಕತ್ವ ವಹಿಸಿದವರಲ್ಲಿ ಬಹುತೇಕ ಮಂದಿ ವಕೀಲರೇ ಆಗಿದ್ದರು ಅಥವಾ ಆಳವಾಗಿ ಕಾನೂನಿನ ಬಗ್ಗೆ ಅಧ್ಯಯನ ನಡೆಸಿದವರಾಗಿದ್ದರು.ಉದಾಹರಣೆಗೆ ಲಾಲ ಲಜಪತ್ ರಾಯ್,ಮಹಾತ್ಮ ಗಾಂಧಿ,ಬಾಬು ರಾಜೇಂದ್ರ ಪ್ರಸಾದ್, ಸರ್ದಾರ್ ವಲ್ಲಬ್ ಭಾಯಿ ಪಟೇಲ್,ದಾದಾ ಬಾಯಿ ನವರೋಜಿ,ಸುರೇಂದ್ರ ನಾಥ್ ಬ್ಯಾನರ್ಜಿ,ಮದನಮೋಹನ್ ಮಾಳವೀಯ,ಲೋಕಮಾನ್ಯ ಬಾಲಗಂಗಾಧರ ನಾಥ ತಿಲಕ್,ಸಿ.ರಾಜ್ ಗೋಪಾಲ ಚಾರಿ ಈಗೆ ಹಲವಾರು ಮಹಾನೀಯರು ಸ್ವಾತಂತ್ರ್ಯ ಹೋರಾಟದ ಮುಂದಾಳತ್ವ ವಹಿಸಿದ್ದರು... ಹಾಗೂ ಸ್ವಾತಂತ್ರ್ಯ ನಂತರದ ಸ್ವಾಭಿಮಾನಿ & ಸ್ವಾವಲಂಬಿ ಭಾರತ ನಿರ್ಮಾಣದ ಮಾರ್ಗದರ್ಶಿಯಾದ ನಮ್ಮ ಹೆಮ್ಮೆಯೆ ಸಂವಿಧಾನವನ್ನು ರಚಿಸುವಲ್ಲಿಯು ಕಾನೂನು ತಜ್ಞರ ಪಾತ್ರ ಅದ್ವಿತೀಯವಾದದ್ದು ಅದರಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್,ಬೆನಗಲ್...