ಹುಳಿಯಾರು ಠಾಣೆಯಲ್ಲಿ ರಂಜಾನ್ ಶಾಂತಿಸಭೆ- ಶಾಂತಿಯುತವಾಗಿ ಹಬ್ಬ ಆಚರಿಸಲು ಪಿಎಸ್ಐ ಧರ್ಮಾಂಜಿ ಕರೆ ---------------------------- ಹುಳಿಯಾರು: ಮುಂಬರುವ ರಂಜಾನ್ ಹಾಗೂ ಯುಗಾದಿ ಹಬ್ಬದ ನಿಮಿತ್ತ ಪಟ್ಟಣದ ಪೋಲಿಸ್ ಠಾಣೆಯಲ್ಲಿ ಪಿಎಸೈ ಧರ್ಮಾಂಜಿ ಹಾಗೂ ಪಿಎಸ್ಐ ಜಗದೀಶ್ ರವರು ಸಮುದಾಯಗಳ ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರುಗಳ ಸಾರ್ವಜನಿಕರ ಶಾಂತಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪಿಎಸೈ ಧರ್ಮಾಂಜಿ ಹಬ್ಬದ ಆಚರಣೆಗಳಲ್ಲಿ ಯಾರೊಬ್ಬರಿಗೂ ತೊಂದರೆಯಾಗದಂತೆ ಜಾಗ್ರತೆ ವಹಿಸಬೇಕು, ರಂಜಾನ್ ಹಬ್ಬದ ಅಚರಣೆಗೆ ಎಲ್ಲರೂ ಸಹಕರಿಸಿ ಸೌಹಾರ್ದಯುತವಾಗಿ ನಡೆಯುವಂತೆ ನೋಡಿಕೊಳ್ಳಬೇಕು.ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಬೇಕು. ಎಲ್ಲರೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ, ಸಂಚಾರಕ್ಕೆ ಅಡಚಣೆ ಯಾಗದಂತೆ ನಡೆದುಕೊಳ್ಳಬೇಕು ಎಂದು ಮನವಿ ಮಾಡಿದರು. ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಬ್ಬದ ಸಮಯದಲ್ಲಿ ಹಿಂದೂ ಮುಸ್ಲಿಂ ಬಾಂಧವರಲ್ಲಿ ಯಾವುದೇ ಅಹಿತಕರ ಘಟನೆ ನಡೆಯದೆ ಪರಸ್ಪರ ಸೌಹಾರ್ದತೆಯಿಂದ ಆಚರಣೆ ಮಾಡುತ್ತ ಬಂದಿರುವುದು ಸಂತಸದ ವಿಷಯವಾಗಿದೆ ಎಂದರು.ಹಬ್ಬಗಳಲ್ಲಿ ಮೆರವಣಿಗೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳನ್ನು ಕೈಗೊಳ್ಳುವಾಗ ಠಾಣೆಯ ಗಮನಕ್ಕ...
📰 ಹುಳಿಯಾರು ಸೇರಿದಂತೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸ್ಥಳಿಯ ಸುದ್ದಿ ಸಮಾಚಾರದ ಬ್ಲಾಗ್........ ✍️ನರೇಂದ್ರಬಾಬು ಹುಳಿಯಾರು-📞9448760070