ವಿಷಯಕ್ಕೆ ಹೋಗಿ

ಪ್ರತಿ ಚೀಲಕ್ಕೂ ಹೆಚ್ಚುವರಿ ರಾಗಿ ವಸೂಲಿ ಮಾಡುವಂತಿಲ್ಲ- ಹಮಾಲಿ ಖರ್ಚು ಎಂದು ಹಣ ಪಡೆಯುವಂತಿಲ್ಲ : ರೈತ ಸಂಘ ತಾಕೀತು

ಪ್ರತಿ ಚೀಲಕ್ಕೂ ಹೆಚ್ಚುವರಿ ರಾಗಿ ವಸೂಲಿ ಮಾಡುವಂತಿಲ್ಲ- ಹಮಾಲಿ ಖರ್ಚು ಎಂದು ಹಣ ಪಡೆಯುವಂತಿಲ್ಲ : ರೈತ ಸಂಘ ತಾಕೀತು


ಹುಳಿಯಾರು : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ತೆರೆಯಲಾಗಿರುವ ರಾಗಿ ಖರೀದಿ ಕೇಂದ್ರದಲ್ಲಿ ಪ್ರತಿ ಚೀಲಕ್ಕೂ ಸರ್ಕಾರ ನಿಗದಿಪಡಿಸಿದ ತೂಕದಷಟು ಮಾತ್ರವೇ ರಾಗಿ ತೂಕ ಮಾಡಬೇಕೆಂದು ಹಾಗೂ ಖರೀದಿ ಕೇಂದ್ರಗಳಲ್ಲಿ ಯಾವುದೇ ಅಕ್ರಮಗಳಿಗೂ ಅವಕಾಶ ಕೊಡದಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ಜರುಗಿತು.


ಹುಳಿಯಾರು ರಾಗಿಖರೀದಿ ಕೇಂದ್ರಕ್ಕೆ ಆಗಮಿಸಿದ ಸುಮಾರು 25ಕ್ಕೂ ಹೆಚ್ಚಿನ  ರೈತ ಸಂಘದ ಪದಾಧಿಕಾರಿಗಳು ಖರೀದಿ ಕೇಂದ್ರದಲ್ಲಿ ನಡೆಯುವ ಅಕ್ರಮಗಳ ಬಗ್ಗೆ ಧ್ವನಿ ಎತ್ತಿದರು.

ರಾಜ್ಯ ಸರ್ಕಾರ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕೇಂದ್ರ ತೆಗೆದು ರಾಗಿ ಖರೀದಿಸುತ್ತಿರುವುದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದಿಂದ ಖರೀದಿಸಲು ಮುಂದಾಗುತ್ತಿರುವುದು ಸರಿಯಷ್ಟೇ. ಪ್ರತಿ ಗೋಣಿಚೀಲದಲ್ಲಿ 50 ಕೆಜಿ ರಾಗಿ ಹಾಗೂ ಚೀಲದ ತೂಕ 650 ಗ್ರಾಂ ಸೇರಿ ರಾಗಿಯನ್ನು ಮಾತ್ರವೇ ಹೆಚ್ಚುವರಿ ಪಡೆಯಲು  ಪ್ರಕಟಣೆಯಲ್ಲಿ ತಿಳಿಸಿದ್ದರೂ ಸಹ ಇಲ್ಲಿನ ಸಿಬ್ಬಂದಿ 52 ಕೆಜಿ ರಾಗಿ ತರಬೇಕು ಎಂದು ರೈತರಿಗೆ ತಾಕೀತು ಮಾಡುತ್ತಿದ್ದು ಹೆಚ್ಚುವರಿಗಾಗಿ ವಸೂಲಿ ಮಾಡಲು ಹೊರಟಿರುವ ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದರು.


ಅಲ್ಲದೆ ಚೀಲವೊಂದಕ್ಕೆ ಹಮಾಲಿ ಖರ್ಚು ಎಂದು ಮೂವತ್ತರಿಂದ ನಲವತ್ತು ರೂಪಾಯಿ ಪಡೆಯುತ್ತಿದ್ದು, ಯಾವುದೇ ಕಾರಣಕ್ಕೂ ಇದನ್ನು ರೈತರಿಂದ ಪಡೆಯಬಾರದು.ಖರೀದಿ ಕೇಂದ್ರದಲ್ಲಿ ಹಮಾಲಿಗಳನ್ನು ನೇಮಿಸಿಕೊಳ್ಳುವುದು ಆಹಾರ ಮತ್ತು ನಾಗರಿಕ ಸರಬರಾಜು ನಿಗಮವಾಗಿದ್ದು ಇದಕ್ಕೆ ರೈತರಿಂದ ಹಣ ವಸೂಲಿ ಮಾಡುವುದು ಏಕೆಂದು ತಿಳಿಯುತ್ತಿಲ್ಲ ಎಂದರು. ರೈತರು ಹಮಾಲಿ ಖರ್ಚು ಎಂದು ಒಂದು ರೂಪಾಯಿ ಕೂಡ ಕೊಡಬಾರದು ಎಂದರು.


ರಾಗಿಚೀಲವನ್ನು ಎತ್ತಿ ಇಳಿಸಲು ಕಬ್ಬಿಣದ ಹುಕ್ ಬಳಸುತ್ತಿದ್ದು ಇದರಿಂದ ಚೀಲ ತೂತಾಗಿ ರಾಗಿ ಸುರಿಯಲು ಅವಕಾಶವಾಗುತ್ತದೆ. ಒಂದು ಚೀಲ ಎತ್ತಿ ಇಳಿಸಿ ತೂಕ ಮಾಡುವಷ್ಟರಲ್ಲಿ ಸುಮಾರು ರಾಗಿ ವ್ಯರ್ಥವಾಗಿ ಚೆಲ್ಲುತ್ತಿದ್ದು ಚೀಲ ಎತ್ತಲು ಹುಕ್ ಬಳಸಬಾರದು ಎಂದರು.

ರಾಗಿ ಹಾಕಲು ಬಂದ ರೈತರಿಗೆ ಸೂಕ್ತ ನೀರು-ನೆರಳಿನ ವ್ಯವಸ್ಥೆ ಮಾಡಬೇಕಿದ್ದರೂ ಸಹ ಹುಳಿಯಾರು ಎಪಿಎಂಸಿಯವರು ಇದಕ್ಕೂ ನಮಗೂ ಸಂಬಂಧವಿಲ್ಲ , ಖರೀದಿ ಕೇಂದ್ರಕ್ಕೆ ಜಾಗ ಕೊಡುವುದಷ್ಟೇ ನಮ್ಮ ಕೆಲಸ ಎನ್ನುತ್ತಾರೆ. ಬಂದ ನೂರಾರು ರೈತರಿಗೆ ಶೌಚಾಲಯದ ವ್ಯವಸ್ಥೆ ಸೇರಿದಂತೆ ನೀರು ನೆರಳು ವ್ಯವಸ್ಥೆ ಕಡ್ಡಾಯವಾಗಿ ಮಾಡಬೇಕು. ಇಲ್ಲಿರುವ ಶೌಚಾಲಯ ಗಿಡಗಂಟೆಯಿಂದ ಸುತ್ತುವರೆದಿದ್ದು ಈ ಬಗ್ಗೆ ಎಪಿಎಂಸಿ ಕಾರ್ಯದರ್ಶಿ ಗಮನ ಹರಿಸದಿರುವುದು ದುರಂತ ಎಂದರು.

ಈ ಸಂದರ್ಭದಲ್ಲಿ ತುಮಕೂರು ಜಿಲ್ಲಾ ರೈತ ಸಂಘದ ಅಧ್ಯಕ್ಷ ಧನಂಜಯರಾಧ್ಯ, ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಕಾರ್ಯದರ್ಶಿ ತೋಂಟಾರಾಧ್ಯ ,ತುರುವೇಕೆರೆ ತಾಲೂಕು ಅಧ್ಯಕ್ಷ ಗಂಗಾಧರಯ್ಯ, ಸೀತಾರಾಮಯ್ಯ, ಬಾಳೇಗೌಡ್ರು ,ಅರಳಿಕೆರೆ ಪ್ರಕಾಶ್, ಮರಳಪ್ಪ, ಜೈಪ್ರಕಾಶ್, ಚೇತನ್, ಬನಶಂಕ್ರಯ್ಯ, ಲೋಕೇಶ್, ಗಿರೀಶ್, ರಾಜಣ್ಣ, ಉಮೇಶ್, ಜುಂಜಣ್ಣ ಮತ್ತಿತರರಿದ್ದರು.



ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...

ಡಾ||ರಂಗನಾಥ್‌ಗೆ ಮುಖ್ಯಮಂತ್ರಿಗಳಿಂದ "ಶ್ರೇಷ್ಠ ವೈದ್ಯ ಪ್ರಶಸ್ತಿ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಇಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ 'ರಾಷ್ಟ್ರೀಯ ವೈದ್ಯರ ದಿನಾಚರಣೆ'ಯಲ್ಲಿ ಮುಖ್ಯಮಂತ್ರಿಗಳಿಂದ "ಶ್ರೇಷ್ಠ ವೈದ್ಯ ಪ್ರಶಸ್ತಿ"ಯನ್ನು ಡಾ||ರಂಗನಾಥ್ ರವರು ಪಡೆದರು. ಡಾ||ರಂಗನಾಥ್ ಅವರು ಸದ್ಯ ಹಾಸನ ಜಿಲ್ಲೆಯ ಕಣಕಟ್ಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಈ ಹಿಂದೆ ಹುಳಿಯಾರಿನಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಜನಪ್ರಿಯರಾಗಿದ್ದರು. ಈ ಸಂದರ್ಭದಲ್ಲಿ ಹುಳಿಯಾರಿನ ಕಿರಣ್ ಕೇಶವಪುರ ಹಾಗೂ ಸ್ನೇಹಿತರು ಪಾಲ್ಗೊಂಡಿದ್ದರು.