ಹುಳಿಯಾರು :ಯಾವುದೇ ಹಬ್ಬಗಳ ಆಚರಣೆ ಸಮಯದಲ್ಲಿ ಸಮಸ್ಯೆಯಾಗಬಾರದು. ಹಬ್ಬಗಳನ್ನು ಸಂತೋಷದಿಂದ ಆಚರಿಸಬೇಕೆ ಹೊರತು ಸಂಕಟದಿಂದ ಅಲ್ಲ ಎಂದು ಪಿಎಸ್ಐ ಧರ್ಮಾಂಜಿ ತಿಳಿ ಹೇಳಿದರು, ಹುಳಿಯಾರಿನ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಪ್ರಯುಕ್ತ ಕರೆಯಲಾಗಿದ್ದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು. ಹುಳಿಯಾರಿನಲ್ಲಿ ಮುಂಚಿನಿಂದಲೂ ಶಾಂತಿ ಪರಿಪಾಲನೆ ಆಗುತ್ತಿದ್ದು ಯಾವುದೇ ಸಮಸ್ಯೆಗೆ ಅವಕಾಶ ಕೊಡದಂತೆ ಎಲ್ಲರೂ ಸಹಕರಿಸಬೇಕು. ಮುಸ್ಲಿಂ ಸಮುದಾಯಕ್ಕೆ ಸೇರಿದ ದೊಡ್ಡ ಮಸೀದಿ, ಗಣಪತಿ ದೇವಸ್ಥಾನ, ಈಶ್ವರನ ದೇವಸ್ಥಾನ,ವೀರಭದ್ರ ಸ್ವಾಮಿ ದೇವಸ್ಥಾನ, ಅಯ್ಯಪ್ಪ ಸ್ವಾಮಿ ದೇವಸ್ಥಾನ ಈ ಎಲ್ಲಾ ದೇವಾಲಯಗಳೂ ಕೇವಲ 30 ಮೀಟರ್ ಅಂತರದಲ್ಲೇ ಇದ್ದು ,ಎಲ್ಲರೂ ಸೌಹಾರ್ದತೆಯಿಂದ ಹಬ್ಬಗಳನ್ನು ಆಚರಿಸಿಕೊಂಡು ಬರುತ್ತಿರುವುದು ಸಂತಸದ ವಿಚಾರ ಎಂದರು. ಹಬ್ಬಗಳ ಆಚರಣೆ ಸಮಯದಲ್ಲಿ ಕೆಲವೊಮ್ಮೆ ಸಣ್ಣಪುಟ್ಟ ಅಹಿತಕರ ಘಟನೆಗಳು ನಡೆದಲ್ಲಿ, ಅದನ್ನುಸಮಾಜದ ಹಿರಿಯರು ಬಗೆಹರಿಸಲು ಮುಂದಾಗಬೇಕೆ ಹೊರತು ಅದನ್ನು ಪ್ರಚೋದಿಸಿ ಸಮಸ್ಯೆ ಬಿಗಡಾಯಿಸಲು ಮುಂದಾಗಬಾರದು ಎಂದು ಮನವಿ ಮಾಡಿದರು. ಪ್ರತಿಯೊಂದು ಸಮುದಾಯದವರು ಹಬ್ಬಗಳನ್ನು ನೆಮ್ಮದಿಯಿಂದ ಆಚರಿಸಬೇಕೆಂಬುದು ಇಲಾಖೆಯ ಆಶಯವಾಗಿದ್ದು ಈ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು, ಸಮಾಜಘಾತಕ ಶಕ್ತಿಗಳ ಬಗ್ಗೆ ಕೂಡಲೇ ಇಲಾಖೆಗೆ ...
📰 ಹುಳಿಯಾರು ಸೇರಿದಂತೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸ್ಥಳಿಯ ಸುದ್ದಿ ಸಮಾಚಾರದ ಬ್ಲಾಗ್........ ✍️ನರೇಂದ್ರಬಾಬು ಹುಳಿಯಾರು-📞9448760070