ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಜುಲೈ, 2025 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಕರ್ನಾಟಕ ಗ್ರಾಮೀಣ ಬ್ಯಾಂಕ್ ಬಡವರ ಆಶಾಕಿರಣ: ವಿ. ಹೆಚ್. ರೇವಣ್ಣ

  ಕರ್ನಾಟಕ ಗ್ರಾಮೀಣ ಬ್ಯಾಂಕ್ ಬಡವರ ಆಶಾಕಿರಣ: ವಿ. ಹೆಚ್. ರೇವಣ್ಣ --------------------------- ಹುಳಿಯಾರು : ಕರ್ನಾಟಕ ಗ್ರಾಮೀಣ ಬ್ಯಾಂಕ್ ಗ್ರಾಮೀಣ ಪ್ರದೇಶದ ಬಡವರಿಗೆ ಆರ್ಥಿಕ ಸೌಲಭ್ಯಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಬೋರನಕಣಿವೆ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿ.ಹೆಚ್.ರೇವಣ್ಣ ಹೇಳಿದರು. ಆರ್ಥಿಕ ಸಾಕ್ಷರತಾ ಶಿಬಿರಕ್ಕೆ ಚಾಲನೆ : ಇತ್ತೀಚೆಗೆ ಆರ್ಥಿಕ ಸಾಕ್ಷರತಾ ಕೇಂದ್ರ ಚಿಕ್ಕನಾಯಕನಹಳ್ಳಿ ಹಾಗೂ ಕರ್ನಾಟಕ ಗ್ರಾಮೀಣ ಬ್ಯಾಂಕ್ ಹೊಯ್ಸಳಕಟ್ಟೆ ಶಾಖೆ ಜಂಟಿಯಾಗಿ ಆಯೋಜಿಸಿದ್ದ ಆರ್ಥಿಕ ಸಾಕ್ಷರತಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. "ಪ್ರತಿ ಹಳ್ಳಿಯ ಮೂಲೆ ಮೂಲೆಯಲ್ಲಿರುವ ಕಡುಬಡವರನ್ನು ಗುರುತಿಸಿ ಸಾಲ ನೀಡುತ್ತಿರುವ ಏಕೈಕ ಬ್ಯಾಂಕ್ ಕರ್ನಾಟಕ ಗ್ರಾಮೀಣ ಬ್ಯಾಂಕ್," ಎಂದು ಅವರು ಶ್ಲಾಘಿಸಿದರು.. ಬ್ಯಾಂಕಿಂಗ್ ಸೌಲಭ್ಯಗಳ ಕುರಿತು ಮಾಹಿತಿ : ಹೊಯ್ಸಳಕಟ್ಟೆ ಕರ್ನಾಟಕ ಗ್ರಾಮೀಣ ಬ್ಯಾಂಕಿನ ಸಹಾಯಕ ವ್ಯವಸ್ಥಾಪಕರಾದ ತಿರುಮಲೇಶ್ ಮಾತನಾಡಿ, "ನಮ್ಮ ಬ್ಯಾಂಕು ಬಡ ಜನರಿಗಾಗಿ ಜೀರೋ ಅಕೌಂಟ್/ಜನಧನ್ ಖಾತೆಗಳನ್ನು ತೆರೆಯುತ್ತಿದೆ. ಶಾಲಾ ಮಕ್ಕಳು ಹಾಗೂ ಪೋಷಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು," ಎಂದು ತಿಳಿಸಿದರು. ಆರ್ಥಿಕ ಸಾಕ್ಷರತಾ ಸಲಹೆಗಾರರಾದ ಆರ್. ಎಂ. ಕುಮಾರಸ್ವಾಮಿ ಮಾತನಾಡಿ, ಡಿಜಿಟಲ್ ಬ್ಯಾಂಕಿಂಗ್‌ನ ಮಹತ್ವವನ್ನು ವಿವರಿಸಿದರು. ಮೊ...

ಶೃಂಗೇರಿ ಜಗದ್ಗುರುಗಳಿಂದ ಶ್ರೀ ಮಹಾಲಕ್ಷ್ಮೀ ಮದ್ದರಲಕ್ಕಮ್ಮ ದೇವಸ್ಥಾನಕ್ಕೆ 2 ಲಕ್ಷ ರೂ. ದೇಣಿಗೆ

 ಶೃಂಗೇರಿ ಜಗದ್ಗುರುಗಳಿಂದ ಶ್ರೀ ಮಹಾಲಕ್ಷ್ಮೀ ಮದ್ದರಲಕ್ಕಮ್ಮ ದೇವಸ್ಥಾನಕ್ಕೆ 2 ಲಕ್ಷ ರೂ. ದೇಣಿಗೆ ----------------------- ಸುಮಾರು 750 ವರ್ಷಗಳ ಇತಿಹಾಸವಿರುವ ದೇವಿಯ ನೂತನ ದೇವಾಲಯ ನಿರ್ಮಾಣಕ್ಕೆ ಆಶೀರ್ವಾದ -------------------- ಹುಳಿಯಾರು : ಚಿಕ್ಕನಾಯಕನಹಳ್ಳಿ ಪಟ್ಟಣದ ಶುಕ್ರವಾರದ ಕೋಟೆಬಾಗಿಲು ಹೊಸಬೀದಿಯಲ್ಲಿರುವ ಶ್ರೀ ಮಹಾಲಕ್ಷ್ಮೀ ಮದ್ದರಲಕ್ಕಮ್ಮ ದೇವಿಯವರ ನೂತನ ದೇವಾಲಯ ನಿರ್ಮಾಣಕ್ಕೆ ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಭಾರತಿ ತೀರ್ಥ ಮಹಾ ಸ್ವಾಮೀಜಿ ಹಾಗೂ ಶ್ರೀ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ ಅವರು 2 ಲಕ್ಷ ರೂಪಾಯಿ ದೇಣಿಗೆಯ ಚೆಕ್ ಅನ್ನು ದೇವಾಲಯದ ಆಡಳಿತ ಮಂಡಳಿಗೆ ಹಸ್ತಾಂತರಿಸಿ ಆಶೀರ್ವದಿಸಿದ್ದಾರೆ. 750 ವರ್ಷಗಳ ಇತಿಹಾಸ : ಚಿಕ್ಕನಾಯಕನಹಳ್ಳಿ ಪಟ್ಟಣದ ಕೋಟೆಬಾಗಿಲು ಹೊಸಬೀದಿಯಲ್ಲಿ ನೆಲೆಸಿರುವ ಸುಮಾರು 750 ವರ್ಷಗಳ ಇತಿಹಾಸವಿರುವ ಶ್ರೀ ಮಹಾಲಕ್ಷ್ಮೀ ಮದ್ದರಲಕ್ಕಮ್ಮ ದೇವಿ, ಕಾರಣಿಕ ದೈವ ಧೂತರಾಯ ಸ್ವಾಮಿ, ನಾಗ ಪರಿವಾರ ದೇವತೆ, ಮುಖ್ಯಪ್ರಾಣ ಅಭಯಆಂಜನೇಯಸ್ವಾಮಿ, ಮತ್ತು ಮಹಾ ಶಕ್ತಿ ಗಣಪತಿ ದೇವರ ದೇವಾಲಯ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಅಮ್ಮನವರ ಅಪ್ಪಣೆಯಂತೆ ಕೇರಳ ಮಾದರಿಯಲ್ಲಿ ವಿನೂತನವಾಗಿ ದೇವಾಲಯ ನಿರ್ಮಿಸಲಾಗುತ್ತಿದ್ದು, ದೇವಾಲಯ ಜೀರ್ಣೋದ್ಧಾರ ಸಮಿತಿ, ಟ್ರಸ್ಟ್, ಸದ್ಭಕ್ತರು ಮತ್ತು ಗ್ರಾಮಸ್ಥರ ಸಹಕಾರದೊಂದಿಗೆ ಈಗಾಗಲೇ ಶೀಲಾಸ್ಥಾಪನೆ ಮತ್ತು ಷಡಾಧಾರ ಪ್...

ಚಿಕ್ಕನಾಯಕನಹಳ್ಳಿಯಲ್ಲಿ ಬಸ್ ನಿಲುಗಡೆ ಸಮಸ್ಯೆ: ಕೆಎಸ್‌ಆರ್‌ಟಿಸಿ ಬಸ್ಸುಗಳಿಗೆ ಖಾಸಗಿ ನಿಲ್ದಾಣ ಪ್ರವೇಶಿಸಲು ಸಾರ್ವಜನಿಕರ ಆಗ್ರಹ

ಚಿಕ್ಕನಾಯಕನಹಳ್ಳಿ : ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಕೆಎಸ್‌ಆರ್‌ಟಿಸಿ (KSRTC) ಬಸ್ ನಿಲ್ದಾಣ ಮತ್ತು ಖಾಸಗಿ ಬಸ್ ನಿಲ್ದಾಣ ಬೇರೆ ಬೇರೆಯಾಗಿರುವುದು ಪ್ರಯಾಣಿಕರಿಗೆ ತೀವ್ರ ಅನಾನುಕೂಲವನ್ನುಂಟುಮಾಡುತ್ತಿದೆ. ಅದರಲ್ಲೂ, ಕೆಎಸ್‌ಆರ್‌ಟಿಸಿ ಬಸ್ಸುಗಳು ಖಾಸಗಿ ಬಸ್ ನಿಲ್ದಾಣದ ಒಳಗೆ ಪ್ರವೇಶಿಸದೆ, ಅದರ ಪಕ್ಕದ ಹೆದ್ದಾರಿಯಲ್ಲೇ ನಿಂತು ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿರುವುದು ಮತ್ತು ಇಳಿಸುತ್ತಿರುವುದು ರಸ್ತೆಯಲ್ಲಿ ಓಡಾಡುವ ಇತರ ವಾಹನಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಇದು ಸಂಭಾವ್ಯ ಅಪಘಾತಗಳಿಗೆ ಕಾರಣವಾಗಬಹುದು ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಪಟ್ಟಣದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸುಗಳು ನಿಗದಿತ ಬಸ್ ನಿಲ್ದಾಣದಿಂದ ಮಾತ್ರ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತವೆ. ಉಳಿದಂತೆ, ಪ್ರಮುಖ ರಸ್ತೆಗಳಲ್ಲಿ ಮತ್ತು ಖಾಸಗಿ ಬಸ್ ನಿಲ್ದಾಣದ ಹೊರಗಡೆಯೇ ಬಸ್ಸುಗಳನ್ನು ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವುದು ಮತ್ತು ಇಳಿಸುವುದು ವಾಡಿಕೆಯಾಗಿದೆ. ಖಾಸಗಿ ಬಸ್ ನಿಲ್ದಾಣಕ್ಕೆ ಕೆಎಸ್‌ಆರ್‌ಟಿಸಿ ಬಸ್ಸುಗಳು ಪ್ರವೇಶಿಸದೆ, ಹೊರಗಡೆಯೇ ನಿಲ್ಲುವುದರಿಂದ ಸ್ಥಳೀಯರಿಗೆ ಹಲವು ಸಮಸ್ಯೆಗಳು ಎದುರಾಗಿವೆ. "ಖಾಸಗಿ ಬಸ್ ನಿಲ್ದಾಣಕ್ಕೆ ಬಸ್ಸುಗಳು ಒಳಗೆ ಬಾರದೆ ರಸ್ತೆಯಲ್ಲೇ ನಿಲ್ಲಿಸುವುದರಿಂದ ರಸ್ತೆ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಇದರಿಂದ ಅಪಘಾತಗಳ ಸಂಭವ ಹೆಚ್ಚಿದೆ...

ಚಿಕ್ಕನಾಯಕನಹಳ್ಳಿಯಲ್ಲಿ ಬಸ್ ನಿಲುಗಡೆ ಸಮಸ್ಯೆ: ಕೆಎಸ್‌ಆರ್‌ಟಿಸಿ ಬಸ್ಸುಗಳಿಗೆ ಖಾಸಗಿ ನಿಲ್ದಾಣ ಪ್ರವೇಶಿಸಲು ಸಾರ್ವಜನಿಕರ ಆಗ್ರಹ

ಚಿಕ್ಕನಾಯಕನಹಳ್ಳಿ : ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಕೆಎಸ್‌ಆರ್‌ಟಿಸಿ (KSRTC) ಬಸ್ ನಿಲ್ದಾಣ ಮತ್ತು ಖಾಸಗಿ ಬಸ್ ನಿಲ್ದಾಣ ಬೇರೆ ಬೇರೆಯಾಗಿರುವುದು ಪ್ರಯಾಣಿಕರಿಗೆ ತೀವ್ರ ಅನಾನುಕೂಲವನ್ನುಂಟುಮಾಡುತ್ತಿದೆ. ಅದರಲ್ಲೂ, ಕೆಎಸ್‌ಆರ್‌ಟಿಸಿ ಬಸ್ಸುಗಳು ಖಾಸಗಿ ಬಸ್ ನಿಲ್ದಾಣದ ಒಳಗೆ ಪ್ರವೇಶಿಸದೆ, ಅದರ ಪಕ್ಕದ ಹೆದ್ದಾರಿಯಲ್ಲೇ ನಿಂತು ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿರುವುದು ಮತ್ತು ಇಳಿಸುತ್ತಿರುವುದು ರಸ್ತೆಯಲ್ಲಿ ಓಡಾಡುವ ಇತರ ವಾಹನಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಇದು ಸಂಭಾವ್ಯ ಅಪಘಾತಗಳಿಗೆ ಕಾರಣವಾಗಬಹುದು ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಪಟ್ಟಣದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸುಗಳು ನಿಗದಿತ ಬಸ್ ನಿಲ್ದಾಣದಿಂದ ಮಾತ್ರ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತವೆ. ಉಳಿದಂತೆ, ಪ್ರಮುಖ ರಸ್ತೆಗಳಲ್ಲಿ ಮತ್ತು ಖಾಸಗಿ ಬಸ್ ನಿಲ್ದಾಣದ ಹೊರಗಡೆಯೇ ಬಸ್ಸುಗಳನ್ನು ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವುದು ಮತ್ತು ಇಳಿಸುವುದು ವಾಡಿಕೆಯಾಗಿದೆ. ಖಾಸಗಿ ಬಸ್ ನಿಲ್ದಾಣಕ್ಕೆ ಕೆಎಸ್‌ಆರ್‌ಟಿಸಿ ಬಸ್ಸುಗಳು ಪ್ರವೇಶಿಸದೆ, ಹೊರಗಡೆಯೇ ನಿಲ್ಲುವುದರಿಂದ ಸ್ಥಳೀಯರಿಗೆ ಹಲವು ಸಮಸ್ಯೆಗಳು ಎದುರಾಗಿವೆ. "ಖಾಸಗಿ ಬಸ್ ನಿಲ್ದಾಣಕ್ಕೆ ಬಸ್ಸುಗಳು ಒಳಗೆ ಬಾರದೆ ರಸ್ತೆಯಲ್ಲೇ ನಿಲ್ಲಿಸುವುದರಿಂದ ರಸ್ತೆ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಇದರಿಂದ ಅಪಘಾತಗಳ ಸಂಭವ ಹೆಚ್ಚಿದೆ...

ಚಿಕ್ಕನಾಯಕನಹಳ್ಳಿಯಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ : ಹಾಸ್ಟೆಲ್ ಸಿಬ್ಬಂದಿಗೆ ಅರಿವು ಮೂಡಿಸುವ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿಯಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ: ಹಾಸ್ಟೆಲ್ ಸಿಬ್ಬಂದಿಗೆ ಅರಿವು ಮೂಡಿಸುವ ಕಾರ್ಯಕ್ರಮ ಹುಳಿಯಾರು : ಡೆಂಗ್ಯೂ ನಿಯಂತ್ರಣದ ಭಾಗವಾಗಿ, ತಾಲೂಕು ಆರೋಗ್ಯ ಇಲಾಖೆ ವತಿಯಿಂದ ಚಿಕ್ಕನಾಯಕನಹಳ್ಳಿಯ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ತಾಲೂಕಿನ ಹಾಸ್ಟೆಲ್‌ಗಳ ವಾರ್ಡನ್‌ಗಳು ಮತ್ತು ಸಿಬ್ಬಂದಿಗಳಿಗೆ ಡೆಂಗ್ಯೂ ರೋಗದ ಮುಂಜಾಗ್ರತಾ ಕ್ರಮಗಳ ಬಗ್ಗೆ ಆರೋಗ್ಯ ಶಿಕ್ಷಣ ನೀಡಲಾಯಿತು.                               ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಚೇತನ್   ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಡೆಂಗ್ಯೂ ರೋಗದ ಬಗ್ಗೆ ಕಿರುಹೊತ್ತಿಗೆಗಳು ಮತ್ತು ಮುಂಜಾಗ್ರತಾ ಕ್ರಮಗಳ ಕುರಿತ ಪೋಸ್ಟರ್‌ಗಳನ್ನು ಎಲ್ಲರಿಗೂ ವಿತರಿಸಲಾಯಿತು.               ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಸಿ.ವಿ. ವೆಂಕಟರಾಮಯ್ಯ ಅವರು ಡೆಂಗ್ಯೂ ರೋಗ ಹರಡುವ ಈಡೀಸ್ ಈಜಿಪ್ಟೈ ಸೊಳ್ಳೆಯ ಸಂತಾನೋತ್ಪತ್ತಿ ತಾಣಗಳು, ಅವುಗಳ ಬೆಳವಣಿಗೆಯ ವಿಧಾನಗಳನ್ನು ವಿಸ್ತಾರವಾಗಿ ವಿವರಿಸಿದರು. ಸೊಳ್ಳೆ ನಿಯಂತ್ರಣ ಕ್ರಮಗಳು, ಸೊಳ್ಳೆಯ ಬೆಳವಣಿಗೆಯ ವಿವಿಧ ಹಂತಗಳು, ವಾರಕ್ಕೊಂದು ದಿನ ಒಣದಿನ ಆಚರಣೆಯ ಮಹತ್ವ,...

ಚಿಕ್ಕನಾಯಕನಹಳ್ಳಿ ತಾಲೂಕು ಕಲೆ, ಸಂಸ್ಕೃತಿಯ ತವರೂರು: ಡಾ. ಲಕ್ಷ್ಮಣದಾಸ್

  ಚಿಕ್ಕನಾಯಕನಹಳ್ಳಿ ತಾಲೂಕು ಕಲೆ, ಸಂಸ್ಕೃತಿಯ ತವರೂರು: ಡಾ. ಲಕ್ಷ್ಮಣದಾಸ್ ಹುಳಿಯಾರು : ಈ ನೆಲವು ಸಂಗೀತ, ಸಾಹಿತ್ಯ, ಸಾಂಸ್ಕೃತಿಕ, ಜಾನಪದ, ರಂಗಕಲೆ ಮತ್ತು ಶಿಲ್ಪ ಕಲೆಗಳ ತವರೂರು. ಇಲ್ಲಿ ಹಲವಾರು ದಿಗ್ಗಜ ಕಲಾವಿದರು ಜನಿಸಿದ್ದಾರೆ ಎಂದು ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ. ಲಕ್ಷ್ಮಣದಾಸ್ ಅಭಿಪ್ರಾಯಪಟ್ಟರು. ತಾಲ್ಲೂಕಿನ ದಸೂಡಿ ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಗ್ರಾಮ ಪಂಚಾಯಿತಿ ದಸೂಡಿ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಎಸ್.ಬಿ. ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ 'ಸಾಂಸ್ಕೃತಿಕ ಸೌರಭ' ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಚಿಕ್ಕನಾಯಕನಹಳ್ಳಿ ತಾಲೂಕು ಹಲವು ದಿಗ್ಗಜರನ್ನು ನಾಡಿಗೆ ನೀಡಿದೆ. ತೀನಂಶ್ರೀ, ಸಾ.ಶಿ. ಮರುಳಯ್ಯ, ಎಸ್.ಜಿ. ಸಿದ್ದರಾಮಯ್ಯ, ನಟರಾಜ್ ಹುಳಿಯಾರು ಅವರಂತಹ ಮಹನೀಯರು ಇಲ್ಲಿ ಜನಿಸಿ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ್ದಾರೆ. ಜಾನಪದ ಅಕಾಡೆಮಿ ಸದಸ್ಯರಾದ ಕೆಂಕೆರೆ ಮಲ್ಲಿಕಾರ್ಜುನ ಅವರು ಜಾನಪದ ಉಳಿಸುವ ಕೆಲಸ ಮಾಡುತ್ತಿರುವುದಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕಲಾಪ್ರದರ್ಶನಗಳ ಮೂಲಕ ಸಂಸ್ಕೃತಿ ರಕ್ಷಣೆ  ಪಿಎಲ್‌ಡಿ ಬ್ಯಾಂಕ್ ಉಪಾಧ್ಯಕ್ಷ ದಬ್ಬಗುಂಟೆ ರವಿಕುಮಾರ್ ಮಾತನಾಡಿ, ತಾಲ್ಲೂಕಿನ ಗಡಿಭಾಗದಲ್ಲಿರುವ ದಸೂಡಿಯಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ. ಸಂಗೀತ, ಸಾಹಿತ...

ಕೆಂಕೆರೆ ಗ್ರಾಮ ಪಂಚಾಯಿತಿಯಲ್ಲಿ ಮನೆ ಬಾಗಿಲಿಗೆ ಮನೆ ಮಗ ಕಾರ್ಯಕ್ರಮಕ್ಕೆ ಶಾಸಕ ಸುರೇಶ್ ಬಾಬು ಚಾಲನೆ

ಕೆಂಕೆರೆ ಗ್ರಾಮ ಪಂಚಾಯಿತಿಯಲ್ಲಿ ಮನೆ ಬಾಗಿಲಿಗೆ ಮನೆ ಮಗ ಕಾರ್ಯಕ್ರಮಕ್ಕೆ ಶಾಸಕ ಸುರೇಶ್ ಬಾಬು ಚಾಲನೆ ಇನ್ಮುಂದೆ ಪ್ರತಿ ಸೋಮವಾರ ಮಧ್ಯಾಹ್ನ 2:30 ರಿಂದ 4:00 ಗಂಟೆಯವರೆಗೆ ತಾಲ್ಲೂಕು ಕಚೇರಿಯಲ್ಲಿಯೇ ಕುಳಿತು ಅರ್ಜಿಗಳ ವಿಲೇವಾರಿ   ಹುಳಿಯಾರು : ಜನರ ಸಮಸ್ಯೆಗಳನ್ನು ಆಲಿಸಲು ಮತ್ತು ಸ್ಥಳದಲ್ಲಿಯೇ ಪರಿಹಾರ ನೀಡಲು ಹುಳಿಯಾರು ಹೋಬಳಿಯ ಕೆಂಕೆರೆ ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ 'ಮನೆ ಬಾಗಿಲಿಗೆ ಮನೆ ಮಗ' ಎಂಬ ವಿನೂತನ ಕಾರ್ಯಕ್ರಮಕ್ಕೆ ಶಾಸಕ ಸುರೇಶ್ ಬಾಬು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸುರೇಶ್ ಬಾಬು, ತಾವು ಗೆದ್ದ ನಂತರ ಪ್ರತಿ ಸೋಮವಾರ ಜನಸ್ಪಂದನ ಕಾರ್ಯಕ್ರಮವನ್ನು ನಡೆಸುತ್ತಿರುವುದಾಗಿ ತಿಳಿಸಿದರು. ಈಗಾಗಲೇ 75 ವಾರಗಳಿಂದ ಈ ಕಾರ್ಯಕ್ರಮವು ನಿರಂತರವಾಗಿ ನಡೆಯುತ್ತಿದೆ. ಕಳೆದ 13 ವಾರಗಳಿಂದ ಪ್ರತಿ ಶುಕ್ರವಾರ ಮನೆ ಬಾಗಿಲಿಗೆ ಮನೆ ಮಗ ಎಂಬ ಕಾರ್ಯಕ್ರಮವನ್ನು ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಂಡು ಪ್ರತಿ ಹಳ್ಳಿಗಳಿಗೂ ತೆರಳಿ ಜನರ ಸಮಸ್ಯೆ ಆಲಿಸಲಾಗುತ್ತಿದೆ.ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕಾಗಿ ಜನರು ನೇರವಾಗಿ ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮುಂದೆ ಮಂಡಿಸಲು ಈ 'ಮನೆ ಬಾಗಿಲಿಗೆ ಮನೆ ಮಗ' ಕಾರ್ಯಕ್ರಮ ಸಹಾಯಕವಾಗಿದೆ.ಶಾಸಕರ ಬಳಿ ನೇರವಾಗಿ ಹೇಳಿಕೊಳ್ಳಲಿಕ್ಕಾಗಿಯೇ ಈ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿದ್...

ಬ್ಯಾಂಕುಗಳು ಆರ್ಥಿಕತೆಯ ಬೆನ್ನೆಲುಬು: ಟಿ. ಎಂ. ಶಿವಣ್ಣ

ಹುಳಿಯಾರು : "ರಾಷ್ಟ್ರೀಕೃತ ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ದೇಶದ ಆರ್ಥಿಕತೆಯ ಬೆನ್ನೆಲುಬಾಗಿದ್ದು, ಇವು ಜನರಿಂದ ಜನರಿಗಾಗಿ ಜನರ ಅಭಿವೃದ್ಧಿಗೋಸ್ಕರ ನಿರಂತರವಾಗಿ ಶ್ರಮಿಸುತ್ತಿವೆ," ಎಂದು ಹಂದನಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಟಿ. ಎಂ. ಶಿವಣ್ಣ ಅವರು ಹೇಳಿದರು. ಅವರು ಇತ್ತೀಚೆಗೆ ಹಂದನಕೆರೆ ಸರಕಾರಿ ಪಿಯು ಕಾಲೇಜಿನ ಆವರಣದಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಹಾಗೂ ಆರ್ಥಿಕ ಸಾಕ್ಷರತಾ ಸಲಹಾ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ 'ಜನ ಸುರಕ್ಷಾ ಶಿಬಿರ' ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಆರ್ಥಿಕ ಸಾಕ್ಷರತಾ ಕೇಂದ್ರದ ಸಲಹೆಗಾರ ಆರ್. ಎಮ್. ಕುಮಾರಸ್ವಾಮಿ ಮಾತನಾಡಿ "ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆಗಳಡಿಯಲ್ಲಿ ಜನರು ಬ್ಯಾಂಕುಗಳ ಮುಖಾಂತರ ನೋಂದಾಯಿಸಿಕೊಂಡಲ್ಲಿ, ಸಹಜ ಅಥವಾ ಅಪಘಾತದ ಮರಣದ ಸಂದರ್ಭದಲ್ಲಿಯೂ ₹2 ಲಕ್ಷದ ವಿಮಾ ಪರಿಹಾರ ದೊರೆಯುತ್ತದೆ," ಎಂದು ವಿವರಿಸಿದರು. ಈ ಯೋಜನೆಗಳಿಂದ ಈಗಾಗಲೇ ಲಕ್ಷಾಂತರ ಜನರು ಲಾಭ ಪಡೆದಿರುವುದಾಗಿ ಅವರು ಹೇಳಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕರು ರಂಗನಾಥ, ಶಶಿಕುಮಾರ್, ಮಣಿಕಂಠಸ್ವಾಮಿ, ಸಿಬ್ಬಂದಿ ಚನ್ನಬಸಪ್ಪ, ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ತಮ್ಮಣ್ಣ ಅವರು ಪಾಲ್ಗೊಂಡಿದ್ದರು.

ಹುಳಿಯಾರಿನಲ್ಲಿ ಕಸದ ಸಮಸ್ಯೆ ಬಿಕ್ಕಟ್ಟು : ವಾಹನಗಳಿದ್ದರೂ ಚಾಲಕರಿಲ್ಲ, ಸ್ಥಳ ಗುರ್ತಿಸಿದರೂ ಅರಣ್ಯ ಇಲಾಖೆಯಿಂದ ಆಕ್ಷೇಪ

ಹುಳಿಯಾರಿನಲ್ಲಿ ಕಸದ ಸಮಸ್ಯೆ ಬಿಕ್ಕಟ್ಟು : ವಾಹನಗಳಿದ್ದರೂ ಚಾಲಕರಿಲ್ಲ, ಸ್ಥಳ ಗುರ್ತಿಸಿದರೂ ಅರಣ್ಯ ಇಲಾಖೆಯಿಂದ ಆಕ್ಷೇಪ --------------------------------------------- ಹುಳಿಯಾರು : ತಾಲ್ಲೂಕಿನ ಪ್ರಮುಖ ಪಟ್ಟಣವಾದ ಹುಳಿಯಾರಿನಲ್ಲಿ ಕಸ ವಿಲೇವಾರಿ ಸಮಸ್ಯೆ ದಿನೇ ದಿನೇ ತೀವ್ರಗೊಳ್ಳುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಕಾನೂನು ತೊಡಕುಗಳಿಂದಾಗಿ ಈ ಸಮಸ್ಯೆ ಇನ್ನಷ್ಟು ಜಟಿಲವಾಗಿದೆ. ಕಸ ವಿಲೇವಾರಿಗೆಂದು ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಖರೀದಿಸಿರುವ ವಾಹನಗಳು ಮೂಲೆ ಸೇರಿದ್ದರೆ, ಕಸ ವಿಲೇವಾರಿ ಘಟಕಕ್ಕೆಂದು ಗುರುತಿಸಲಾದ ಸ್ಥಳವು ಇದೀಗ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿದೆ ಎಂದು ತಿಳಿದುಬಂದಿದೆ. ಈ ಬೆಳವಣಿಗೆಗಳು, ಹುಳಿಯಾರು ಪಟ್ಟಣದ ಬಹುಕಾಲದ ಕಸವಿಲೇವಾರಿ ಸಮಸ್ಯೆಯನ್ನು ಮತ್ತಷ್ಟು ಸಂಕೀರ್ಣಗೊಳಿಸಿವೆ. ವಾಹನಗಳಿದ್ದರೂ ಚಾಲಕರಿಲ್ಲ : ----------- ಪಟ್ಟಣ ಪಂಚಾಯಿತಿ ಕಸ ವಿಲೇವಾರಿಗಾಗಿ ಹಲವು ತಿಂಗಳ ಹಿಂದೆಯೇ ಹೊಸ ವಾಹನಗಳನ್ನು ಖರೀದಿಸಿದೆ. ಇದರಲ್ಲಿ ಕಸ ಸಂಗ್ರಹದ ಆಟೋಗಳು ಮತ್ತು ತ್ಯಾಜ್ಯ ಲೋಡ್ ಮಾಡಲು ಎಕ್ಸ್‌ಕವೇಟರ್ (ಬಾಬ್‌ಕ್ಯಾಟ್) ಸಹ ಸೇರಿವೆ. ಆದರೆ, ಈ ವಾಹನಗಳನ್ನು ನಿರ್ವಹಿಸಲು ಇದುವರೆಗೆ ಚಾಲಕರನ್ನು ನೇಮಕ ಮಾಡಿಕೊಳ್ಳದಿರುವುದು ವಿಪರ್ಯಾಸ. ಪರಿಣಾಮವಾಗಿ, ಈ ದುಬಾರಿ ವಾಹನಗಳು ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲೇ ಧೂಳು ಹಿಡಿದು ನಿಂತಿವೆ. ಕಸದ ಸಮಸ್ಯೆ ವಿಪರೀತವಾಗಿದ್ದ...