ವಿಷಯಕ್ಕೆ ಹೋಗಿ

ಚಿಕ್ಕನಾಯಕನಹಳ್ಳಿ ತಾಲೂಕು ಕಲೆ, ಸಂಸ್ಕೃತಿಯ ತವರೂರು: ಡಾ. ಲಕ್ಷ್ಮಣದಾಸ್

 


ಚಿಕ್ಕನಾಯಕನಹಳ್ಳಿ ತಾಲೂಕು ಕಲೆ, ಸಂಸ್ಕೃತಿಯ ತವರೂರು: ಡಾ. ಲಕ್ಷ್ಮಣದಾಸ್

ಹುಳಿಯಾರು : ಈ ನೆಲವು ಸಂಗೀತ, ಸಾಹಿತ್ಯ, ಸಾಂಸ್ಕೃತಿಕ, ಜಾನಪದ, ರಂಗಕಲೆ ಮತ್ತು ಶಿಲ್ಪ ಕಲೆಗಳ ತವರೂರು. ಇಲ್ಲಿ ಹಲವಾರು ದಿಗ್ಗಜ ಕಲಾವಿದರು ಜನಿಸಿದ್ದಾರೆ ಎಂದು ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ. ಲಕ್ಷ್ಮಣದಾಸ್ ಅಭಿಪ್ರಾಯಪಟ್ಟರು.

ತಾಲ್ಲೂಕಿನ ದಸೂಡಿ ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಗ್ರಾಮ ಪಂಚಾಯಿತಿ ದಸೂಡಿ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಎಸ್.ಬಿ. ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ 'ಸಾಂಸ್ಕೃತಿಕ ಸೌರಭ' ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಚಿಕ್ಕನಾಯಕನಹಳ್ಳಿ ತಾಲೂಕು ಹಲವು ದಿಗ್ಗಜರನ್ನು ನಾಡಿಗೆ ನೀಡಿದೆ. ತೀನಂಶ್ರೀ, ಸಾ.ಶಿ. ಮರುಳಯ್ಯ, ಎಸ್.ಜಿ. ಸಿದ್ದರಾಮಯ್ಯ, ನಟರಾಜ್ ಹುಳಿಯಾರು ಅವರಂತಹ ಮಹನೀಯರು ಇಲ್ಲಿ ಜನಿಸಿ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ್ದಾರೆ. ಜಾನಪದ ಅಕಾಡೆಮಿ ಸದಸ್ಯರಾದ ಕೆಂಕೆರೆ ಮಲ್ಲಿಕಾರ್ಜುನ ಅವರು ಜಾನಪದ ಉಳಿಸುವ ಕೆಲಸ ಮಾಡುತ್ತಿರುವುದಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕಲಾಪ್ರದರ್ಶನಗಳ ಮೂಲಕ ಸಂಸ್ಕೃತಿ ರಕ್ಷಣೆ 

ಪಿಎಲ್‌ಡಿ ಬ್ಯಾಂಕ್ ಉಪಾಧ್ಯಕ್ಷ ದಬ್ಬಗುಂಟೆ ರವಿಕುಮಾರ್ ಮಾತನಾಡಿ, ತಾಲ್ಲೂಕಿನ ಗಡಿಭಾಗದಲ್ಲಿರುವ ದಸೂಡಿಯಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ. ಸಂಗೀತ, ಸಾಹಿತ್ಯ, ಜಾನಪದ, ಯಕ್ಷಗಾನ, ಗೊಂಬೆಯಾಟ, ಬಯಲಾಟ ಮತ್ತು ರಂಗಕಲೆಗಳ ಬಗ್ಗೆ ನೃತ್ಯದ ಮೂಲಕ ನಮ್ಮ ಸಂಸ್ಕೃತಿಯನ್ನು ಉಳಿಸಿಕೊಂಡು ಕಲಾಭಿಮಾನಿಗಳಿಗೆ ಮನರಂಜನೆ ನೀಡುವ ಕೆಲಸ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಡೆಯುತ್ತಿದೆ ಎಂದು ಹೇಳಿದರು.

ಗ್ರಾಮೀಣ ಕಲೆಗಳಿಗೆ ಪ್ರೋತ್ಸಾಹ ಅಗತ್ಯ 

ಜಾನಪದ ಅಕಾಡೆಮಿ ಸದಸ್ಯ ಕೆಂಕೆರೆ ಮಲ್ಲಿಕಾರ್ಜುನ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಇಂತಹ ಕಾರ್ಯಕ್ರಮಗಳು ಆಯೋಜನೆಗೊಳ್ಳುತ್ತಿರುವುದು ಸಂತೋಷ ತಂದಿದೆ. ಕಲಾಭಿಮಾನಿಗಳು ಕೇವಲ ಸಿನಿಮಾ ಮಾತ್ರವಲ್ಲದೆ ಜನಪದ, ಹರಿಕಥೆ, ಸುಗಮ ಸಂಗೀತ, ಯಕ್ಷಗಾನಗಳಂತಹ ನಮ್ಮ ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ವೀಕ್ಷಿಸಿ, ಪ್ರೋತ್ಸಾಹಿಸಬೇಕೆಂದು ಮನವಿ ಮಾಡಿದರು. ರಾಜ್ಯ, ಅಂತರರಾಜ್ಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ನಡೆಸಿಕೊಟ್ಟ ಸುಮಾರು 200ಕ್ಕೂ ಹೆಚ್ಚು ಕಲಾವಿದರು ಒಂದೇ ವೇದಿಕೆಯಲ್ಲಿ ಪ್ರದರ್ಶನ ನೀಡಲು ಬಂದಿರುವುದು ವಿಶೇಷ ಎಂದರು.

ಕಲಾ ಪ್ರಕಾರಗಳ ಸಂಭ್ರಮ 

ಕಾರ್ಯಕ್ರಮದಲ್ಲಿ ವಿವಿಧ ಕಲಾ ಪ್ರಕಾರಗಳು ಪ್ರದರ್ಶನಗೊಂಡವು. ತುಮಕೂರಿನ ಡಾ. ಲಕ್ಷ್ಮಣದಾಸ್ ತಂಡದ ರಂಗಗೀತೆ, ಕೆಂಕೆರೆ ಮಲ್ಲಿಕಾರ್ಜುನ ತಂಡದ ಸುಗಮ ಸಂಗೀತ, ಕಲಾಶ್ರೀ ನರಸಿಂಹದಾಸ್ ತಂಡದ ಕಥಾ ಕೀರ್ತನ, ಸಂತೋಷ್ ತಂಡದ ಗಾರುಡಿಗೊಂಬೆ, ಲಿಂಗದೇವರು ತಂಡದ ನಾಸಿಕ್ ಡೋಲು, ದಸೂಡಿ ಶ್ರೀ ದುರ್ಗಾಪರಮೇಶ್ವರಿ ಕಲಾ ಸಂಘದ ಸೋಬಾನೆ ಪದ, ಉಮ್ಲಾನಾಯ್ಕನ ತಾಂಡ್ಯದ ಸೇವಾಲಾಲ್ ಸಂಘದಿಂದ ಲಂಬಾಣಿ ನೃತ್ಯ, ಕೆ.ಜಿ. ಹಟ್ಟಿ ತಂಡದ ಸೋಬಾನೆ ಪದ ಮತ್ತು ದಸೂಡಿ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಂದ ಚಿಟ್ಟಿಮೇಳ ಹಾಗೂ ಕಳಸದ ನೃತ್ಯಗಳು ವಿಜೃಂಭಣೆಯಿಂದ ನಡೆದವು.

ಸಾಧಕರಿಗೆ ಸನ್ಮಾನ 

ಕಾರ್ಯಕ್ರಮದಲ್ಲಿ ಸಂಸ್ಕೃತಿ ಚಿಂತಕ ಡಾ. ನಾಗೇಶ್ ದಸೂಡಿ ಅವರು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸ್ಥಳೀಯ ಸಾಧಕರನ್ನು ಸನ್ಮಾನಿಸಿದರು. ಶಿಕ್ಷಣ ಕ್ಷೇತ್ರದಿಂದ ಡಾ. ಶಿವರಾಜ್, ರೈತ ಚಳುವಳಿಯಿಂದ ನಾಗರಾಜ್, ರಂಗಕಲೆಯಿಂದ ದಬ್ಬಗುಂಟೆ ಮೂರ್ಕಣ್ಣಪ್ಪ, ಪ್ರಗತಿಪರ ರೈತ ಹನುಮಯ್ಯ, ಸಾಹಿತ್ಯದಿಂದ ಕೆ. ಮರಿಯಪ್ಪ, ರಂಗ ನಿರ್ದೇಶನದಿಂದ ಡಿ.ಎಂ. ರಂಗನಾಥಪ್ಪ, ಜಾನಪದ ಭಜನೆಯಿಂದ ಡಿ.ಎಚ್. ಕಾಂತರಾಜು ಮತ್ತು ಪ್ರಗತಿಪರ ರೈತ ಅಂಜಿನಪ್ಪ ಅವರನ್ನು ಗೌರವಿಸಲಾಯಿತು.

ಗ್ರಾಪಂ ಅಧ್ಯಕ್ಷೆ ಮಂಜುಳಚೆನ್ನಯ್ಯ, ಉಪಾಧ್ಯಕ್ಷ ನಾಗರಾಜ್, ವಿ.ಎಸ್.ಎಸ್.ಎನ್. ಅಧ್ಯಕ್ಷ ತಿಪ್ಪೇಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ, ತಾಲ್ಲೂಕು ಕಸಾಪ ಅಧ್ಯಕ್ಷ ರವಿಕುಮಾರ್ ಕಟ್ಟೆಮನೆ, ಸಾಹಿತಿ ಮರಿಯಪ್ಪ, ಪಿಡಿಒ ಮುದ್ದಲಿಂಗಯ್ಯ, ಕನ್ವಿನಿಯರ್ ಡಿ.ಕೆ. ರಂಗನಾಥಪ್ಪ, ರೈತ ಸಂಘದ ಕೆಂಕೆರೆ ಸತೀಶ್, ಗುರುಮೂರ್ತಿ ಮತ್ತು ಮಂಜುನಾಥ್ ಅರಸ್ ಉಪಸ್ಥಿತರಿದ್ದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...