ವಿಷಯಕ್ಕೆ ಹೋಗಿ

ಹುಳಿಯಾರಿನಲ್ಲಿ ಗಣಪತಿ ಮತ್ತು ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಶಾಂತಿ ಸಭೆ

 
ಹುಳಿಯಾರಿನಲ್ಲಿ ಗಣಪತಿ ಮತ್ತು ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಶಾಂತಿ ಸಭೆ

ಹುಳಿಯಾರು: ಹುಳಿಯಾರು ಪೊಲೀಸ್ ಠಾಣೆಯಲ್ಲಿ ಗಣಪತಿ ಮತ್ತು ಈದ್ ಮಿಲಾದ್ ಹಬ್ಬಗಳನ್ನು ಸೌಹಾರ್ದಯುತವಾಗಿ ಆಚರಿಸುವ ಕುರಿತು ಸಾರ್ವಜನಿಕರ ಶಾಂತಿ ಸಭೆ ನಡೆಯಿತು. ಈ ಸಂದರ್ಭದಲ್ಲಿ ಚಿಕ್ಕನಾಯಕನಹಳ್ಳಿ ಸಿಪಿಐ ನದಾಫ್ ಮತ್ತು ಪಿಎಸ್ಐ ಧರ್ಮಾಂಜಿ ಅವರು ಸಾರ್ವಜನಿಕರಿಗೆ ಹಬ್ಬಗಳ ಆಚರಣೆಯ ಕುರಿತು ಮಾರ್ಗದರ್ಶನ ನೀಡಿದರು.

ಸಿಪಿಐ ನದಾಫ್ ಮಾತನಾಡಿ, ಯಾವುದೇ ಹಬ್ಬಗಳ ಆಚರಣೆ ಸಮಯದಲ್ಲಿ ಕಾನೂನು ಸುವ್ಯವಸ್ಥೆಗೆ ದಕ್ಕೆ ಬಾರದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಪ್ರತಿಯೊಂದು ಸಮುದಾಯದವರು ಹಬ್ಬಗಳನ್ನು ನೆಮ್ಮದಿಯಿಂದ ಆಚರಿಸಬೇಕೆಂಬುದು ಪೊಲೀಸ್ ಇಲಾಖೆಯ ಆಶಯವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು. ಸಮಾಜಘಾತಕ ಶಕ್ತಿಗಳ ಬಗ್ಗೆ ಕೂಡಲೇ ಇಲಾಖೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

*ಪ್ರಮುಖ ನಿರ್ದೇಶನಗಳು:*

* *ರಾತ್ರಿ 10 ಗಂಟೆಯ ಗಡುವು:* ರಾಜ್ಯ ಸರ್ಕಾರದ ಆದೇಶದಂತೆ, ರಾತ್ರಿ 10 ಗಂಟೆಯ ನಂತರ ಧ್ವನಿವರ್ಧಕಗಳ ಬಳಕೆಗೆ ಅವಕಾಶ ಇರುವುದಿಲ್ಲ. ಹಗಲು ಸಮಯದಲ್ಲಿ ಹಬ್ಬದ ಕಾರ್ಯಕ್ರಮಗಳನ್ನು ಪ್ರಾರಂಭಿಸಬಹುದು.

* *ಡಿಜೆ ಮತ್ತು ಧ್ವನಿವರ್ಧಕಗಳ ಬಳಕೆ:* ಡಿಜೆ ಬಳಕೆಗೆ ಅನುಮತಿ ಇಲ್ಲ. ರಾತ್ರಿ 10 ಗಂಟೆಯ ನಂತರ ಯಾವುದೇ ಕಾರಣಕ್ಕೂ ಮೈಕ್ ಅಥವಾ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ.

* *ಪರವಾನಗಿ ಮತ್ತು ನಿಯಮ ಪಾಲನೆ:* ಮೆರವಣಿಗೆಗಳ ಮಾರ್ಗಕ್ಕೆ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಪೊಲೀಸರು ಅನುಮತಿಸಿದ ಮಾರ್ಗದಲ್ಲೇ ಮೆರವಣಿಗೆ ಸಾಗಬೇಕು, ಮಾರ್ಗವನ್ನು ಬದಲಿಸುವಂತಿಲ್ಲ.

* *ಏಕಗವಾಕ್ಷಿ ಪದ್ಧತಿ (Single Window System):* ಹಬ್ಬಗಳ ಆಚರಣೆಗೆ ಅಗತ್ಯವಿರುವ ಅನುಮತಿಗಳನ್ನು ಪಡೆಯಲು ಏಕಗವಾಕ್ಷಿ ಪದ್ಧತಿಯನ್ನು ಜಾರಿಗೊಳಿಸಲಾಗಿದೆ. ಪೊಲೀಸ್ ಇಲಾಖೆಯಿಂದ ಧ್ವನಿವರ್ಧಕ, ಬೆಸ್ಕಾಂನಿಂದ ವಿದ್ಯುತ್ ಸಂಪರ್ಕ, ಮತ್ತು ಪಟ್ಟಣ ಪಂಚಾಯಿತಿಯಿಂದ ಫ್ಲೆಕ್ಸ್, ಬಂಟಿಂಗ್ಸ್ ಹಾಕಲು ಅನುಮತಿ ಪಡೆಯುವುದು ಕಡ್ಡಾಯ.

* *ಮೆರವಣಿಗೆ ಸಮಯ:* ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆಗೆ ಕಡ್ಡಾಯವಾಗಿ ಅನುಮತಿ ಪಡೆದಿರಬೇಕು. ವಿಸರ್ಜನಾ ಮೆರವಣಿಗೆಯನ್ನು ರಾತ್ರಿ 10:00 ಗಂಟೆಯೊಳಗೆ ಮುಗಿಸಬೇಕು. ಸಾಧ್ಯವಾದಷ್ಟು ಕಾರ್ಯಕ್ರಮಗಳನ್ನು ಹಗಲಿನ ಸಮಯದಲ್ಲಿ ಮುಗಿಸಿಕೊಳ್ಳುವುದು ಉತ್ತಮ.

* *ಶಿಸ್ತು ಮತ್ತು ಸೌಹಾರ್ದತೆ:* ಹಬ್ಬದ ಮೆರವಣಿಗೆಗಳಲ್ಲಿ ಯುವಕರು ಯಾವುದೇ ತೊಂದರೆ ಮಾಡದಂತೆ ನೋಡಿಕೊಳ್ಳಬೇಕು. ಕುಡಿದು ಗಲಾಟೆ ಮಾಡುವ ಪ್ರಕರಣಗಳು ನಡೆಯದಂತೆ ಎಲ್ಲರೂ ಸಹಕರಿಸಬೇಕು.

ಸಭೆಯಲ್ಲಿ ಹುಳಿಯೂರಿನ ಪ್ರಸನ್ನ ಗಣಪತಿ ದೇವಾಲಯ, ಬೆಂಕಿ ಗಣಪತಿ ದೇವಾಲಯ ಮತ್ತು ವಿವಿಧ ದೇವಸ್ಥಾನಗಳ ಸಮಿತಿಯವರು, ಜಾಮಿಯಾ ಮಸೀದಿ, ನೂರಾನಿ ಮಸೀದಿ ಮತ್ತು ಬಿಲಾಲ್ ಮಸೀದಿಯ ಮೌಲಿಗಳು ಮತ್ತು ಮುಸ್ಲಿಂ ಸಮುದಾಯದ ಮುಖಂಡರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಕಂದಾಯ ಅಧಿಕಾರಿ ಶೃತಿ, ಜಾಮಿಯ ಮಸೀದಿ ಮುತುವಲ್ಲಿ ಆರಿಫ್ ಉಲ್ಲಾಖಾನ್, ಮದೀನಾ ಮಸೀದಿಯ ಸಾಧತ್, ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದ ತಮ್ಮಯ್ಯ, ಕೆ.ಎಂಎಲ್ ಮೂರ್ತಿ, ಬೆಂಕಿ ಗಣಪತಿ ದೇವಸ್ಥಾನದ ಕಾರ್ಯದರ್ಶಿ ಅರುಣ್ ರಾಜ್, ಆಂಜನೇಯ ಸ್ವಾಮಿ ದೇವಸ್ಥಾನದ ಅಧ್ಯಕ್ಷ ಬಡಿಗಿ ರಾಮಣ್ಣ, ಕಾರ್ಯದರ್ಶಿ ಧನಂಜಯ ಮೂರ್ತಿ ಹಾಗೂ ಪಟ್ಟಣ ಪಂಚಾಯಿತಿ ಸದಸ್ಯ ದಸ್ತಗಿರಿ ಸಾಬ್ ಸೇರಿದಂತೆ ಹಿಂದೂ ಮತ್ತು ಮುಸ್ಲಿಂ ಸಮಾಜದ ವಿವಿಧ ಸಂಘಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...