ಚಿಕ್ಕನಾಯಕನಹಳ್ಳಿಯಲ್ಲಿ ಕಾಡುಗೊಲ್ಲ ಸಮುದಾಯದ 159 ಫಲಾನುಭವಿಗಳಿಗೆ ಸಾಲ ಮಂಜೂರಾತಿ ಪತ್ರ ವಿತರಣೆಚಿಕ್ಕನಾಯಕನಹಳ್ಳಿ: ಕರ್ನಾಟಕ ಕಾಡುಗೊಲ್ಲ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ ಅಡಿಯಲ್ಲಿ 128 ಮಂದಿಗೆ, ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ 17 ಮಂದಿಗೆ ಹಾಗೂ ಸ್ವಾವಲಂಬಿ ಸಾರಥಿ ಯೋಜನೆ ಅಡಿಯಲ್ಲಿ 14 ಮಂದಿಗೆ ಸೇರಿ ಒಟ್ಟು 159 ಫಲಾನುಭವಿಗಳಿಗೆ ಮಂಜೂರಾತಿ ಆದೇಶ ಪತ್ರ ವಿತರಿಸಲಾಯಿತು.
ಈ ಕಾರ್ಯಕ್ರಮವನ್ನು ಶಾಸಕರಾದ ಸಿ.ಬಿ. ಸುರೇಶ್ ಬಾಬು ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದು, ಅವರು ಫಲಾನುಭವಿಗಳಿಗೆ ಆದೇಶ ಪತ್ರಗಳನ್ನು ಹಸ್ತಾಂತರಿಸಿದರು.ನಿಗಮದ ವ್ಯವಸ್ಥಾಪಕರಾದ ವೆಂಕಟರಾಜ್, ತಾಲೂಕು ಕೆಡಿಪಿ ಸದಸ್ಯ ದೇವರಾಜ್ (ತಮ್ಮಡಿಹಳ್ಳಿ), ತಾಲೂಕು ಕಾಡುಗೊಲ್ಲ ಯುವ ಸೇನೆಯ ಅಧ್ಯಕ್ಷ ಮಂಜು (ಕೆಂಪರಾಯನಹಟ್ಟಿ), ಮಲ್ಲಿಕಾರ್ಜುನ್ (ರಾಮಪ್ಪನಟ್ಟಿ), ವಿಶ್ವನಾಥ್ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು.
ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ