ವಿಷಯಕ್ಕೆ ಹೋಗಿ

ಚಿಕ್ಕನಾಯಕನಹಳ್ಳಿಯ ತೀ.ನಂ.ಶ್ರೀ ಭವನದಲ್ಲಿ ಸೆ. 26 ಮತ್ತು 27 ಜಿಲ್ಲಾ ಮಟ್ಟದ ಗ್ರಾಮೀಣ ಪತ್ರಿಕೋದ್ಯಮ ಕಾರ್ಯಾಗಾರ ಹಾಗೂ ಎನ್‌.ಬಸವಯ್ಯ ಜೀವಮಾನ ಸಾಧನೆ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ

ಚಿಕ್ಕನಾಯಕನಹಳ್ಳಿಯ ತೀ.ನಂ.ಶ್ರೀ ಭವನದಲ್ಲಿ ಸೆ. 26 ಮತ್ತು 27

ಜಿಲ್ಲಾ ಮಟ್ಟದ ಗ್ರಾಮೀಣ ಪತ್ರಿಕೋದ್ಯಮ ಕಾರ್ಯಾಗಾರ ಹಾಗೂ ಎನ್‌.ಬಸವಯ್ಯ ಜೀವಮಾನ ಸಾಧನೆ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ

----------------------

✍️ ನರೇಂದ್ರಬಾಬು-ಹುಳಿಯಾರು-9448760070

----------------------

ಚಿಕ್ಕನಾಯಕನಹಳ್ಳಿ : ಚಿಕ್ಕನಾಯಕನಹಳ್ಳಿಯ ತೀ.ನಂ.ಶ್ರೀ ಭವನದಲ್ಲಿ ಸೆಪ್ಟೆಂಬರ್ 26 ಮತ್ತು 27, 2025 ರಂದು ಜಿಲ್ಲಾ ಮಟ್ಟದ ಗ್ರಾಮೀಣ ಪತ್ರಿಕೋದ್ಯಮ ಕಾರ್ಯಾಗಾರ ಮತ್ತು ದಿ.ಎನ್. ಬಸವಯ್ಯ ಜೀವಮಾನ ಸಾಧನೆ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವನ್ನು ಚಿಕ್ಕನಾಯಕನಹಳ್ಳಿಯ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು, ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಎಸ್.ಬಿ. ಚಾರಿಟಬಲ್ ಟ್ರಸ್ಟ್, ಮತ್ತು ಸುವರ್ಣಮುಖಿ ಮಾಧ್ಯಮ ಅಧ್ಯಯನ ಕೇಂದ್ರಗಳು ತುಮಕೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಯೋಗದೊಂದಿಗೆ ಹಮ್ಮಿಕೊಂಡಿವೆ.

ಕಾರ್ಯಕ್ರಮದ ಮುಖ್ಯಾಂಶಗಳು

ಉದ್ಘಾಟನಾ ಸಮಾರಂಭ: ಕಾರ್ಯಾಗಾರವು ದಿ.ವಿ.ಆರ್.ಮೇರುನಾಥ್ ವೇದಿಕೆಯಲ್ಲಿ ಸೆ.26, 2025 ರ ಬೆಳಿಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ.ವೆಂಕಟೇಶ್ವರಲು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರೂ ಹಾಗೂ ಎಸ್.ಬಿ. ಚಾರಿಟಬಲ್ ಟ್ರಸ್ಟ್ ಅಧ್ಯಕ್ಷರೂ ಆದ ಸುರೇಶ್‌ಬಾಬು ಸಿ.ಬಿ. ಅಧ್ಯಕ್ಷತೆ ವಹಿಸಲಿದ್ದಾರೆ. 

ಕಾರ್ಯಾಗಾರದಲ್ಲಿ ನಡೆಯಲಿರುವ ಗೋಷ್ಠಿಗಳು:

ಒಟ್ಟು ಎರಡು ದಿನಗಳ ಈ ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮಕ್ಕೆ ಸಂಬಂಧಿಸಿದ ವಿವಿಧ ಗೋಷ್ಠಿಗಳು ನಡೆಯಲಿವೆ. 

ಗೋಷ್ಠಿ-1: "ಪಟ್ಟಣಗಳಾಗುತ್ತಿರುವ ಹಳ್ಳಿಗಳು: ಗ್ರಾಮೀಣ ಪತ್ರಕರ್ತರ ಸವಾಲುಗಳು" ಎಂಬ ವಿಷಯದ ಕುರಿತು ಉದಯವಾಣಿ ಪತ್ರಿಕೆಯ ಸಂಪಾದಕ  ಅರವಿಂದ ನಾವಡ ಅವರು ಮಾತನಾಡಲಿದ್ದಾರೆ.

ಗೋಷ್ಠಿ-2: "ಪತ್ರಿಕೋದ್ಯಮ: ಏನು? ಏಕೆ? ಹೇಗೆ?" ಎಂಬ ವಿಷಯದ ಬಗ್ಗೆ ಕುವೆಂಪು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ.ಸತೀಶ್‌ಕುಮಾರ್ ಅಂಡಿಂಜೆ ಅವರು ವಿಷಯ ಮಂಡಿಸಲಿದ್ದಾರೆ.

ಗೋಷ್ಠಿ-3 : "ಮಾಧ್ಯಮ ರಂಗದ ಉದ್ಯೋಗ ಅವಕಾಶಗಳು" ಎಂಬ ವಿಷಯದ ಕುರಿತು ದೂರದರ್ಶನ ಕೇಂದ್ರದ ಹಿರಿಯ ವಾರ್ತಾವಾಚಕಿ ಶ್ರೀಮತಿ ಚೇತನಾ ರಾಜೇಂದ್ರ ಅವರು ಮಾಹಿತಿ ನೀಡಲಿದ್ದಾರೆ.

ಗೋಷ್ಠಿ-4 : "ಪತ್ರಿಕಾ ಬರವಣಿಗೆ: ಆರಂಭಿಕ ಹೆಜ್ಜೆಗಳು" ಕುರಿತು ತುಮಕೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಡಾ.ಸಿಬಂತಿ ಪದ್ಮನಾಭ ಕೆ.ವಿ.ಉಪನ್ಯಾಸ ನೀಡಲಿದ್ದಾರೆ.

ಗೋಷ್ಠಿ-5:"ಬದಲಾಗುತ್ತಿರುವ ಮಾಧ್ಯಮ ರಂಗದ ಪ್ರವೃತ್ತಿಗಳು" ವಿಷಯದ ಬಗ್ಗೆ ಶ್ರೀ ಸತ್ಯಸಾಯಿ ಪ್ರಮೋದ ಪ್ರಕಾಶನದ ಹಿರಿಯ ಸಂಪಾದಕರಾದ  ಡಿ.ಎಂ.ಘನಶ್ಯಾಮ ಮಾತನಾಡಲಿದ್ದಾರೆ.

ಗೋಷ್ಠಿ-6:"ಮಾಧ್ಯಮ ರಂಗದ ನೈತಿಕ ಜವಾಬ್ದಾರಿ" ಕುರಿತು ಕನ್ನಡಪ್ರಭ ಪತ್ರಿಕೆಯ ಜಿಲ್ಲಾ ವರದಿಗಾರ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾದ ಉಗಮ ಶ್ರೀನಿವಾಸ್ ಉಪನ್ಯಾಸ ನೀಡಲಿದ್ದಾರೆ.

ಗೋಷ್ಠಿ-7: "ಗ್ರಾಮೀಣ ಪತ್ರಕರ್ತರು ಮತ್ತು ಸಾಮಾಜಿಕ ಅಭ್ಯುದಯ" ಕುರಿತು ಪ್ರಜಾವಾಣಿ ಪತ್ರಿಕೆಯ ಮುಖ್ಯ ಉಪ ಸಂಪಾದಕ ಶ್ರೀ ಗಾಣಧಾಳು ಶ್ರೀಕಂಠ ಅವರು ವಿಷಯ ಮಂಡಿಸಲಿದ್ದಾರೆ.

ಕ್ರೀಡಾ ಚಟುವಟಿಕೆಗಳು :

ಸೆ.26 ರ ಸಂಜೆ 6 ಗಂಟೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಜಿಲ್ಲೆಯ ಪತ್ರಕರ್ತರಿಗಾಗಿ ಹೊನಲು ಬೆಳಕಿನ ಶಟಲ್ ಬ್ಯಾಡ್ಮಿಂಟನ್ ಮತ್ತು ಹಗ್ಗಜಗ್ಗಾಟ ಪಂದ್ಯಾವಳಿಗಳನ್ನು ಆಯೋಜಿಸಲಾಗಿದೆ.ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ್‌ಬಾಬು ಸಿ.ಬಿ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಶಾಸಕ ಕೆ.ಎಸ್.ಕಿರಣ್‌ಕುಮಾರ್ ಉದ್ಘಾಟಿಸಲಿದ್ದಾರೆ.

ಮಾಜಿ ಸಚಿವರಾದ ಎನ್‌.ಬಸವಯ್ಯ ನವರ ಸಂಸ್ಮರಣೆ :

ಸೆ.27ರ ಮಧ್ಯಾಹ್ನ : 2ಕ್ಕೆ ತಾಲ್ಲೂಕು ಶೈಕ್ಷಣಿಕ ಪ್ರಗತಿಯ ಮುನ್ನೋಟದ ಬಗ್ಗೆ ಚಿಕ್ಕನಾಯಕನಹಳ್ಳಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ಎಸ್.ಕಾಂತರಾಜು ಅವರಿಂದ ಉಪನ್ಯಾಸ ನಡೆಯಲಿದೆ

ಮಧ್ಯಾಹ್ನ : 2-45ಕ್ಕೆ ಮಾಜಿ ಸಚಿವರಾದ ಎನ್‌.ಬಸವಯ್ಯನವರ ಸಂಸ್ಮರಣೆ ನಡೆಯಲಿದ್ದು ಕೇಂದ್ರ ಸಂಗೀತ-ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ. ಲಕ್ಷಣ ದಾಸ್ ಅವರು ದಿ. ಎನ್ ಬಸವಯ್ಯನವರನ್ನು ಸ್ಮರಿಸಲಿದ್ದಾರೆ.

ತುಮಕೂರು ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಸಹ ಪ್ರಾಧ್ಯಾಪಕರಾದ ಡಾ.ಶಿವಣ್ಣ ಬೆಳವಾಡಿ ಅವರು ಬಸವಯ್ಯನವರ ವ್ಯಕ್ತಿಚಿತ್ರ ನೀಡಲಿದ್ದಾರೆ.

ಎಂ.ಎನ್.ಸುರೇಶ್ , ಪ್ರಕಾಶ್ ಸಿ.ಹೆಚ್ , ಲಿಂಗದೇವರು ಸಿ.ಎಸ್‌ ,  ಮಹಮದ್ ಖಲಂದರ್ , ಲಕ್ಷ್ಮಣಪ್ಪ ತೊಟ್ಟಿಮನೆ ,ಗೋ.ನಿ.ವಸಂತ ಕುಮಾರ್ ದಿ.ಬಸವಯ್ಯನವರಿಗೆ ನುಡಿನಮನ ಸಲ್ಲಿಸಲಿದ್ದಾರೆ

ಪ್ರಶಸ್ತಿ ಪ್ರದಾನ ಸಮಾರಂಭ :

ಕಾರ್ಯಕ್ರಮದ ಸಮಾರೋಪ ಸಮಾರಂಭವು ಸೆ. 27 ರಂದು ಸಂಜೆ 4 ಗಂಟೆಗೆ ನಡೆಯಲಿದೆ. ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಹೆಚ್.ಜಿ.ವೆಂಕಟೇಶಮೂರ್ತಿ ಅವರಿಗೆ "ದಿ. ಎನ್.ಬಸವಯ್ಯ ಜೀವಮಾನ ಸಾಧನೆ" ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಶಾಸಕ ಸಿ.ಬಿ.ಸುರೇಶ್‌ಬಾಬು ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು  ಮತ್ತು ಕೊಪ್ಪಳ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಬಿ.ಕೆ.ರವಿ ಸಮಾರೋಪ ನುಡಿಗಳನ್ನಾಡಲಿದ್ದಾರೆ.

ಜಿಲ್ಲೆಯ ಎಲ್ಲಾ ಪತ್ರಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಆಯೋಜಕರು ಕೋರಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...