ಈ ಸಂದರ್ಭದಲ್ಲಿ ಮಾತನಾಡಿದ ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್, ರಮೇಶ್ ಬಾಬು ಅವರು ಹಿಂದೆ ವಿವಿಧ ಬ್ಯಾಂಕುಗಳಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ, ಚಿಕ್ಕನಾಯಕನಹಳ್ಳಿಯ ಜನಪರ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ. ಅವರು ವಕೀಲರ ಸಂಘದ ರಾಜ್ಯ ಪರಿಷತ್ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದು, ಅವರ ಆಯ್ಕೆಯು ಎಲ್ಲರಿಗೂ ಸಂತೋಷ ತಂದಿದೆ ಎಂದು ಹೇಳಿದರು.
ಅವರು ಮುಂದುವರೆದು, ಮುಂದಿನ ದಿನಗಳಲ್ಲಿ ಕೆ.ಎಸ್. ಕಿರಣ್ ಕುಮಾರ್ ಅವರನ್ನು ಈ ಕ್ಷೇತ್ರಕ್ಕೆ ಶಾಸಕರನ್ನಾಗಿ ಮಾಡುವವರೆಗೂ ಕಾಂಗ್ರೆಸ್ ಪಕ್ಷವು ಬದ್ಧತೆಯಿಂದ ಕೆಲಸ ಮಾಡಲಿದೆ ಎಂದು ತಿಳಿಸಿದರು. ಅಲ್ಲದೆ, ಪಕ್ಷದ ಅನೇಕ ಕಾರ್ಯಕರ್ತರಿಗೆ ವಿವಿಧ ನಿಗಮ ಮಂಡಳಿಗಳಲ್ಲಿ ಅವಕಾಶ ಮಾಡಿಕೊಡುವಂತೆ ರಾಜ್ಯ ಅಧ್ಯಕ್ಷರು, ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ಅವರಲ್ಲಿ ಮನವಿ ಮಾಡಿದರು.
ಪಕ್ಷಕ್ಕೆ ಶಾಸಕರಿಲ್ಲದೆ ಕಳೆದ 30 ವರ್ಷಗಳಿಂದ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಅಭಿವೃದ್ಧಿ ಕುಂಠಿತವಾಗಿದೆ. ಈಗ ರಾಜ್ಯ ಸರ್ಕಾರ ಬಂದ ನಂತರ 100-150 ನಾಮಿನಿಗಳನ್ನು ನೇಮಿಸಲಾಗಿದೆ, ಆದರೆ ಇನ್ನೂ ಹೆಚ್ಚಿನ ಅವಕಾಶಗಳು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಕಾರ್ಯಕರ್ತರಿಗೆ ದೊರೆಯುವ ಅಗತ್ಯವಿದೆ ಎಂದು ಚಂದ್ರಶೇಖರ್ ಹೇಳಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ.ಎಸ್. ಕಿರಣ್ ಕುಮಾರ್, ಸೇವಾದಳ ಕಾರ್ಯದರ್ಶಿ ಕೆ.ಜಿ. ಕೃಷ್ಣೇಗೌಡ, ಬೇವಿನಹಳ್ಳಿ ಚನ್ನಬಸವಯ್ಯ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇರ್ಫಾನ್, ಕಾರ್ಮಿಕ ಘಟಕದ ಅಧ್ಯಕ್ಷ ಡಾಬಾ ಸುರೇಶ್, ಜಿಲ್ಲಾ ಕೆ.ಡಿ.ಪಿ. ಸದಸ್ಯ ಸಾಸಲು ಮಂಜುನಾಥ್, ಆಶ್ರಯ ಸಮಿತಿ ಸದಸ್ಯ ಪೋಚಕಟ್ಟೆ ರಮೇಶ್, ಹಿರಿಯ ಮುಖಂಡರಾದ ಹೊಸಬಿದಿ ಬುಡ್ಡನಾಗಣ್ಣ, ರಾಜಣ್ಣ, ರಾಮಚಂದ್ರಯ್ಯ, ಜಾವೇದ್, ಮಗ್ಗದ ಮನೆ ಗಂಗಾಧರ್, ಸೇವಾದಳ ಕಾರ್ಯದರ್ಶಿ ನಿಶಾನಿಕಿರಣ್, ಮಲ್ಲೇಶ್, ಕಂಟಲಗೆರೆ ರಂಗಸ್ವಾಮಿ, ಸೇವಾದಳ ಜಾಫರ್, ಪ್ರಸನ್ನ ಕುಮಾರ್, ನಿಲಕಂಠಯ್ಯ, ಮತ್ತು ನಾಗಣ್ಣ ಸೇರಿದಂತೆ ಹಲವು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ