ವಿಷಯಕ್ಕೆ ಹೋಗಿ

ಹುಳಿಯಾರಿನಲ್ಲಿ ಕ್ರೆಡಿಟ್ ಆಕ್ಸಿಸ್ ಗ್ರಾಮೀಣದ ಸದಸ್ಯರಿಗೆ ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಕಾರ್ಯಾಗಾರ


ಹುಳಿಯಾರಿನಲ್ಲಿ ಕ್ರೆಡಿಟ್ ಆಕ್ಸಿಸ್ ಗ್ರಾಮೀಣದ ಸದಸ್ಯರಿಗೆ ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಕಾರ್ಯಾಗಾರ

----------------

ಹುಳಿಯಾರು: ಪಟ್ಟಣದ ಬನಶಂಕರಿ ಕಲ್ಯಾಣ ಮಂಟಪದಲ್ಲಿ ಕ್ರೆಡಿಟ್ ಆಕ್ಸಿಸ್ ಗ್ರಾಮೀಣ ಲಿಮಿಟೆಡ್‌ನ ಸದಸ್ಯರಿಗಾಗಿ ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಹುಳಿಯಾರು ಪೊಲೀಸ್ ಠಾಣೆಯ ಉಪನಿರೀಕ್ಷಕ ಧರ್ಮಾಂಜಿ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ, ಆನ್‌ಲೈನ್ ವಂಚನೆಗಳು ಮತ್ತು ಸೈಬರ್ ಕ್ರೈಮ್‌ಗಳ ಬಗ್ಗೆ ಮಾಹಿತಿ ನೀಡಿದರು. ಹಣವನ್ನು ದ್ವಿಗುಣಗೊಳಿಸುವ ಆಮಿಷವೊಡ್ಡಿ ಸಾರ್ವಜನಿಕರನ್ನು ಹೇಗೆ ಮೋಸ ಮಾಡಲಾಗುತ್ತದೆ ಎಂಬುದನ್ನು ವಿವರಿಸಿದರು ಮತ್ತು ಇಂತಹ ಮೋಸಗಳಿಂದ ದೂರವಿರಲು ಸಾರ್ವಜನಿಕರು ವಹಿಸಬೇಕಾದ ಜಾಗರೂಕತೆಯ ಬಗ್ಗೆ ತಿಳಿಸಿದರು.

ಈ ಕಾರ್ಯಾಗಾರದಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಹುಳಿಯಾರಿನ ಸಮುದಾಯ ಆರೋಗ್ಯ ಅಧಿಕಾರಿ ವಸಂತ ಮಾತನಾಡಿ ಆರೋಗ್ಯ ಇಲಾಖೆಯ 'ಸ್ವಸ್ಥ ನಾರಿ ಸಶಕ್ತ ಪರಿವಾರ' ಅಭಿಯಾನದ ಬಗ್ಗೆ ಮಾತನಾಡಿದರು. ಸೆ.17 ರಿಂದ ಅ.2  ರವರೆಗೆ ಗ್ರಾಮದ ಎಲ್ಲಾ ಮಹಿಳೆಯರಿಗೆ ಆರೋಗ್ಯ ಕೇಂದ್ರಗಳಲ್ಲಿ ಉಚಿತ ತಪಾಸಣೆಗಳನ್ನು ನಡೆಸಲಾಗುವುದು ಎಂದು ತಿಳಿಸಿದರು. ಈ ತಪಾಸಣೆಗಳಲ್ಲಿ ಕಣ್ಣು, ಕಿವಿ, ಮೂಗು, ಗಂಟಲು, ರಕ್ತದೊತ್ತಡ, ಮಧುಮೇಹ, ದಂತ ಪರೀಕ್ಷೆ, ಕ್ಯಾನ್ಸರ್, ಗರ್ಭಿಣಿ ಮಹಿಳಾ ಸೌಲಭ್ಯಗಳು, ರಕ್ತಹೀನತೆ ಮತ್ತು ಕ್ಷಯರೋಗ ಪರೀಕ್ಷೆಗಳು ಸೇರಿವೆ. ಅಗತ್ಯವಿರುವ ಔಷಧಿಗಳು ಮತ್ತು ಸೇವೆಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಅವರು ಹೇಳಿದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ರೇಣುಕರಾಜ್ ಮಾತನಾಡಿ ಹಾವು ಕಡಿತವಾದಾಗ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಮಾಹಿತಿ ನೀಡಿದರು. ಬಾಲ್ಯ ವಿವಾಹದ ದುಷ್ಪರಿಣಾಮಗಳು ಮತ್ತು ಅದರ ಕಾನೂನು ಶಿಕ್ಷೆಗಳ ಬಗ್ಗೆಯೂ ವಿವರಿಸಿದರು. ತಮ್ಮ ಸುತ್ತಮುತ್ತ ಬಾಲ್ಯ ವಿವಾಹ ನಡೆಯುತ್ತಿದ್ದರೆ ತಕ್ಷಣವೇ 1098ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಅವರು ಮನವಿ ಮಾಡಿದರು. ಅಲ್ಲದೆ ಎರಡು ವಾರಗಳಿಗಿಂತ ಹೆಚ್ಚು ಕಾಲ ಕೆಮ್ಮು, ಜ್ವರ, ತೂಕ ಕಡಿಮೆಯಾಗುವಂತಹ ಲಕ್ಷಣಗಳು ಕಂಡುಬಂದರೆ ತಕ್ಷಣವೇ ಸ್ಥಳೀಯ ಆರೋಗ್ಯ ಕೇಂದ್ರಗಳಲ್ಲಿ ಕಫ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು. ಕಫ ಪರೀಕ್ಷೆ ಮತ್ತು ಟಿಬಿ ಚಿಕಿತ್ಸೆ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಲಭ್ಯವಿದೆ ಎಂದು ತಿಳಿಸಿದರು.

ಸಂಸ್ಥೆಯ ಪ್ರಾದೇಶಿಕ ವ್ಯವಸ್ಥಾಪಕ ಡಿ.ಆರ್. ಶಿವಲಿಂಗೇಗೌಡ ಮಾತನಾಡಿ ಕಳೆದ 27 ವರ್ಷಗಳಿಂದ ಕ್ರೆಡಿಟ್ ಆಕ್ಸಿಸ್ ಗ್ರಾಮೀಣ ಸಂಸ್ಥೆಯು ಸಾರ್ವಜನಿಕರಿಗೆ ಸಾಲ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ, ಸದಸ್ಯರಿಗೆ ಆರೋಗ್ಯ, ಆರ್ಥಿಕ ಮತ್ತು ಇತರ ವಿಷಯಗಳ ಬಗ್ಗೆ ಜ್ಞಾನ ನೀಡಿ ಉತ್ತಮ ಜೀವನ ನಿರ್ಮಿಸಲು ಶ್ರಮಿಸುತ್ತಿದೆ ಎಂದು ತಿಳಿಸಿದರು. ಲೋಕೇಶ್ ಎಂ.ಕೆ ಅವರು ಸಂಸ್ಥೆಯ ಬೆಳವಣಿಗೆಯ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ತೇಜಸ್ವಿ, ಕೆನರಾ ಬ್ಯಾಂಕ್‌ನ ಹುಳಿಯಾರು ಶಾಖೆಯ ವ್ಯವಸ್ಥಾಪಕ ಕುಮಾರ್, ಸಂಸ್ಥೆಯ ಸದಸ್ಯರು ಹಾಗೂ ಹುಳಿಯಾರು ಶಾಖೆಯ ಸಿಬ್ಬಂದಿ ವರ್ಗ ಭಾಗವಹಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...