ವಿಷಯಕ್ಕೆ ಹೋಗಿ

ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಶ್ರಮಿಸಿದ ಮುಖ್ಯಶಿಕ್ಷಕ ಮಹಾಲಿಂಗಪ್ಪ ಅವರಿಗೆ ‘ಶಿಕ್ಷಕರತ್ನ’ ಪ್ರಶಸ್ತಿ

ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಶ್ರಮಿಸಿದ ಮುಖ್ಯಶಿಕ್ಷಕ ಮಹಾಲಿಂಗಪ್ಪ ಅವರಿಗೆ ‘ಶಿಕ್ಷಕರತ್ನ’ ಪ್ರಶಸ್ತಿ

-----------------------------------

ಹುಳಿಯಾರು: ಖಾಸಗಿ ಶಾಲೆಗಳ ಪೈಪೋಟಿಯ ನಡುವೆಯೂ ಸರ್ಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಶ್ರಮಿಸಿದ ದಸೂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕರಾದ ಆರ್.ಎಸ್. ಮಹಾಲಿಂಗಪ್ಪ ಅವರಿಗೆ ರಾಯಚೂರಿನ ಕಲಾ ಸಂಕುಲ ಸಂಸ್ಥೆಯು ಪ್ರತಿಷ್ಠಿತ 'ಶಿಕ್ಷಕರತ್ನ' ರಾಜ್ಯಮಟ್ಟದ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ರಾಯಚೂರಿನ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಪ್ರಶಸ್ತಿಯನ್ನು ಸ್ವೀಕರಿಸಿದ ಮಹಾಲಿಂಗಪ್ಪ ನಾನು ಈ ಪ್ರಶಸ್ತಿಯನ್ನು ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು, ಗ್ರಾಮಸ್ಥರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಅರ್ಪಿಸುತ್ತೇನೆ. ಇವರೆಲ್ಲರ ಸಹಕಾರವಿಲ್ಲದೆ ಶಾಲೆಯ ಅಭಿವೃದ್ಧಿ ಸಾಧ್ಯವಾಗುತ್ತಿರಲಿಲ್ಲ ಎಂದು ನುಡಿದರು.

ದಸೂಡಿ ಶಾಲೆಯ ಯಶೋಗಾಥೆ

ಮಹಾಲಿಂಗಪ್ಪ ಅವರು ದಸೂಡಿ ಶಾಲೆಗೆ ಮುಖ್ಯಶಿಕ್ಷಕರಾಗಿ ಬಂದ ನಂತರ, ಶಾಲೆಯ ಚಿತ್ರಣ ಸಂಪೂರ್ಣವಾಗಿ ಬದಲಾಗಿದೆ. ಅವರ ನಾಯಕತ್ವ ಮತ್ತು ಗ್ರಾಮಸ್ಥರ ಸಹಕಾರದಿಂದ, ಈ ಶಾಲೆಯು ಈಗ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದೆ. ಖಾಸಗಿ ಶಾಲೆಯ ಕಟ್ಟಡಗಳಿಗೆ ಸವಾಲು ಹಾಕುವಂತಹ  ಕಟ್ಟಡ, ಪೀಠೋಪಕರಣಗಳು, ಸುಸಜ್ಜಿತ ಪ್ರಯೋಗಾಲಯ, ಪ್ರೊಜೆಕ್ಟರ್ ವ್ಯವಸ್ಥೆ ಹಾಗೂ ವ್ಯವಸ್ಥಿತ ಅಡುಗೆ ಮನೆ ಹೊಂದಿದೆ.ಪ್ರಸ್ತುತ ಶಾಲೆಯಲ್ಲಿ 207ಕ್ಕೂ ಹೆಚ್ಚು ಮಕ್ಕಳು ಅಧ್ಯಯನ ಮಾಡುತ್ತಿದ್ದಾರೆ. ಇಲ್ಲಿ ಐದು ಕಾಯಂ ಶಿಕ್ಷಕರು ಮತ್ತು ಮೂರು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ.

ಇದಲ್ಲದೆ, ಶಾಲೆಯಲ್ಲಿ ಇತ್ತೀಚೆಗೆ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಸಹ ಪ್ರಾರಂಭಿಸಲಾಗಿದ್ದು, 30ಕ್ಕೂ ಹೆಚ್ಚು ಮಕ್ಕಳು ದಾಖಲಾಗಿದ್ದಾರೆ. ಶಾಲೆಯಲ್ಲಿ ಪ್ರತಿದಿನವೂ ಬಿಸಿಯೂಟ ಮತ್ತು ಕ್ಷೀರಭಾಗ್ಯ ಯೋಜನೆಯಡಿ ಹಾಲು ವಿತರಣೆ ಹಾಗೂ ಮಕ್ಕಳ ಪೌಷ್ಟಿಕತೆಗಾಗಿ ಪ್ರತಿದಿನ ಮೊಟ್ಟೆಗಳನ್ನೂ ನೀಡಲಾಗುತ್ತಿದ್ದು, ಇದು ಮಕ್ಕಳ ಹಾಜರಾತಿ ಹೆಚ್ಚಾಗಲು ಕಾರಣವಾಗಿದೆ.

ಶಾಲೆಯಲ್ಲಿ ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಿಸಿದ್ದು, ಇದರಿಂದಾಗಿ ಪ್ರತಿ ವರ್ಷವೂ ಉತ್ತಮ ಫಲಿತಾಂಶ ಬರುತ್ತಿದೆ. ಶಾಲೆಯ ಅಭಿವೃದ್ಧಿಗೆ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಸಂತ ಕುಮಾರ್ ಅವರ ಸಹಕಾರವೂ ಪ್ರಮುಖ ಕಾರಣವಾಗಿದೆ.

ಸತತವಾಗಿ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಮಹಾಲಿಂಗಪ್ಪ ಅವರ ಸೇವೆಯನ್ನು ಗುರುತಿಸಿ ಕಲಾ ಸಂಕುಲ ಸಂಸ್ಥೆಯು ಈ ಪ್ರಶಸ್ತಿ ನೀಡಿ ಗೌರವಿಸಿದೆ. ಇದು ನಿಜಕ್ಕೂ ಅವರ ಶ್ರಮಕ್ಕೆ ಸಿಕ್ಕ ಪ್ರತಿಫಲ ಎಂದು ಶಾಲೆಯ ವಿದ್ಯಾರ್ಥಿಗಳು, ಪೋಷಕರು ಹಾಗೂ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...