ವಿಷಯಕ್ಕೆ ಹೋಗಿ

ಸಾಮಾಜಿಕ ಸಮೀಕ್ಷೆಯಲ್ಲಿ ಕಾಡುಗೊಲ್ಲ ಪ್ರತ್ಯೇಕ ಜಾತಿ ಎಂದು ನಮೂದಿಸಿ: ಡಾ. ಸಾಸಲು ಸತೀಶ್ ಮನವಿ

ಸಾಮಾಜಿಕ ಸಮೀಕ್ಷೆಯಲ್ಲಿ ಕಾಡುಗೊಲ್ಲ ಪ್ರತ್ಯೇಕ ಜಾತಿ ಎಂದು ನಮೂದಿಸಿ: ಡಾ. ಸಾಸಲು ಸತೀಶ್ ಮನವಿ
ಹುಳಿಯಾರು : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಸಮುದಾಯದ ಸದಸ್ಯರು ಜಾತಿ ಮತ್ತು ಉಪಜಾತಿ ಎರಡೂ ಕಾಲಂಗಳಲ್ಲಿ 'ಕಾಡುಗೊಲ್ಲ' ಎಂದೇ ಬರೆಯಬೇಕು ಎಂದು ಕಾಡುಗೊಲ್ಲ ಸಮುದಾಯದ ಮುಖಂಡ ಡಾ. ಸಾಸಲು ಸತೀಶ್ ಅವರು ಮನವಿ ಮಾಡಿದರು.

ಹುಳಿಯಾರು ಹೋಬಳಿಯ ತಮ್ಮಡಿಹಳ್ಳಿ ಗೊಲ್ಲರಹಟ್ಟಿಯಲ್ಲಿ ಸಮುದಾಯದ ಇತರ ಮುಖಂಡರೊಂದಿಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಡಾ. ಸತೀಶ್, ಈ ಸಂಬಂಧ ಸಮುದಾಯದವರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ತಾವು ಜಾಗೃತಿ ಅಭಿಯಾನವನ್ನು ಆರಂಭಿಸಿರುವುದಾಗಿ ತಿಳಿಸಿದರು.

ಜಾತಿ ಗೊಂದಲದ ಬಗ್ಗೆ ಎಚ್ಚರಿಕೆ :ಸಮೀಕ್ಷೆಯ ಸಂದರ್ಭದಲ್ಲಿ ಕೆಲ ಪಟ್ಟ ಭದ್ರ ಹಿತಾಸಕ್ತಿಗಳು ಸಮುದಾಯದ ಜನರನ್ನು ದಾರಿ ತಪ್ಪಿಸಿ, ಕಾಡುಗೊಲ್ಲರ ಬದಲಿಗೆ ಕೇವಲ 'ಗೊಲ್ಲ' ಎಂದು ನಮೂದಿಸುವಂತೆ ಹುನ್ನಾರ ನಡೆಸುತ್ತಿದ್ದಾರೆ ಎಂದು ಡಾ. ಸತೀಶ್ ಆತಂಕ ವ್ಯಕ್ತಪಡಿಸಿದರು. ಇತರ ಜನಾಂಗದವರು ತಮ್ಮ ಸಮುದಾಯದ ಜನಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವ ಉದ್ದೇಶದಿಂದ ಈ ರೀತಿಯ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಅವರು ದೂರಿದರು. ಆದರೆ, ಕಾಡುಗೊಲ್ಲ ಸಮುದಾಯದ ಸದಸ್ಯರು ಇಂತಹ ತಪ್ಪು ಮಾಹಿತಿಗೆ ಕಿವಿಗೊಡಬಾರದು ಎಂದು ಎಚ್ಚರಿಸಿದರು.ತಮ್ಮ ಸಮುದಾಯವರು ಸಮೀಕ್ಷೆಯ ವೇಳೆ 541ನೇ ಕ್ರಮ ಸಂಖ್ಯೆಯಡಿ ಕಾಡುಗೊಲ್ಲ ಹೆಸರನ್ನೇ ನಮೂದಿಸಬೇಕು ಎಂದು ಅವರು ಒತ್ತಿಹೇಳಿದರು.

ಕಾಡುಗೊಲ್ಲ ಸಮುದಾಯ ಒಂದು ಸ್ವತಂತ್ರ ಮತ್ತು ಪ್ರತ್ಯೇಕ ಜನಾಂಗವಾಗಿದೆ ಎಂದ ಅವರು ಇದು ಗೊಲ್ಲ ಸಮುದಾಯದ ಆಚರಣೆಗಳಿಗಿಂತ ಸಂಪೂರ್ಣವಾಗಿ ಭಿನ್ನವಾದ ಆಚರಣೆಯನ್ನು ಹೊಂದಿದೆ. ಆದ್ದರಿಂದ ಕಾಡುಗೊಲ್ಲರು ಗೊಲ್ಲ ಜಾತಿಯ ಉಪಜಾತಿ ಎಂಬುದು ಸುಳ್ಳು ಹೇಳಿಕೆಯಾಗಿದೆ ಎಂದರು.

 ಸರ್ಕಾರದಿಂದಲೇ ಸ್ವತಂತ್ರ ಮಾನ್ಯತೆ : ಸಮುದಾಯದ ಈ ಸ್ವತಂತ್ರ ಅಸ್ತಿತ್ವಕ್ಕೆ ಸರ್ಕಾರ ನೀಡಿರುವ ಮಾನ್ಯತೆಯ ಬಗ್ಗೆ ಪುರಾವೆಗಳನ್ನು ನೀಡಿದ ಡಾ.ಸತೀಶ್ 2018ರಲ್ಲಿಯೇ ಸರ್ಕಾರವು ಕಾಡುಗೊಲ್ಲ ಸಮುದಾಯಕ್ಕೆ ಜಾತಿ ಪಟ್ಟಿಯಲ್ಲಿ ಸ್ಥಾನ ನೀಡಿದೆ. ಅಲ್ಲದೆ, ನಿಗಮ ಮಂಡಳಿಯಲ್ಲೂ ಪ್ರತ್ಯೇಕವಾಗಿ ಕಾಡುಗೊಲ್ಲರಿಗೆ ಅವಕಾಶ ಕಲ್ಪಿಸಲಾಗಿದೆ. ಈ ಬೆಳವಣಿಗೆಯು ನಮ್ಮದು ಒಂದು ಸ್ವತಂತ್ರವಾದ ಮತ್ತು ಪ್ರತ್ಯೇಕವಾದ ಜಾತಿ ಎಂಬುದನ್ನು ಖಚಿತಪಡಿಸುತ್ತದೆ," ಎಂದು  ವಿವರಿಸಿದರು.

              ಈ ಹಿನ್ನೆಲೆಯಲ್ಲಿ ಸಮೀಕ್ಷೆಯಲ್ಲಿ ಭಾಗಿಗಳಾಗುವ ಕಾಡುಗೊಲ್ಲ ಸಮುದಾಯದ ಪ್ರತಿಯೊಬ್ಬರೂ ಜಾತಿ ಕಾಲಂನಲ್ಲಿ ಮತ್ತು ಉಪಜಾತಿ ಕಾಲಂನಲ್ಲಿ ಯಾವುದೇ ಗೊಂದಲವಿಲ್ಲದೆ 'ಕಾಡುಗೊಲ್ಲ' ಎಂದು ನಮೂದಿಸುವ ಮೂಲಕ ಸಮುದಾಯದ ಅಧಿಕೃತ ಅಸ್ಮಿತೆಯನ್ನು ಕಾಪಾಡಿಕೊಳ್ಳುವಂತೆ ಡಾ. ಸತೀಶ್ ಪುನರುಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾದ ಉಪಾಧ್ಯಕ್ಷ ಉಜ್ಜಜ್ಜಿ ರಾಜಣ್ಣ, ಅಂಕಸಂದ್ರ ರಾಜಣ್ಣ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...