ವಿಷಯಕ್ಕೆ ಹೋಗಿ

ಆರ್ಥಿಕ ಸಬಲೀಕರಣಕ್ಕೆ ಮಹಿಳಾ ಸ್ವಸಹಾಯ ಸಂಘಗಳ ಕೊಡುಗೆ ಅಪಾರ: ಮಂಜುನಾಥ್

ಹುಳಿಯಾರು : ದೇಶದ ಆರ್ಥಿಕತೆಗೆ ಮಹಿಳಾ ಸ್ವಸಹಾಯ ಗುಂಪುಗಳು ಮತ್ತು ಸ್ತ್ರೀಶಕ್ತಿ ಸಂಘಗಳ ಕೊಡುಗೆ ಅಪಾರವಾಗಿದೆ ಎಂದು ಮತಿಘಟ್ಟದ ಕರ್ನಾಟಕ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕ ಮಂಜುನಾಥ್ ಹೇಳಿದರು. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಮತ್ತು ಉನ್ನತ ಸ್ಥಾನಗಳನ್ನು ಅಲಂಕರಿಸಲು ಈ ಸಂಘಗಳೇ ಪ್ರಮುಖ ಕಾರಣ ಎಂದು ಅವರು ತಿಳಿಸಿದರು.

                   ಮಲ್ಲಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟ ಮತ್ತು ಚಿಕ್ಕನಾಯಕನಹಳ್ಳಿ ಆರ್ಥಿಕ ಸಾಕ್ಷರತಾ ಕೇಂದ್ರ ಜಂಟಿಯಾಗಿ ಮಲ್ಲಿಗೆರೆಯಲ್ಲಿ ಆಯೋಜಿಸಿದ್ದ ಜನ ಸುರಕ್ಷಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಕುರಿತು ಮಾಹಿತಿ : ಶಿಬಿರದಲ್ಲಿ ಆರ್ಥಿಕ ಸಾಕ್ಷರತಾ ಸಲಹೆಗಾರ ಆರ್.ಎಂ. ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಈ ಯೋಜನೆಯಡಿ ವಾರ್ಷಿಕ ಕೇವಲ 20 ರೂಪಾಯಿ ಪಾವತಿಸುವ ಮೂಲಕ ಬ್ಯಾಂಕ್ ಅಥವಾ ಅಂಚೆ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು. ವಾಹನ ಅಪಘಾತ, ಸಿಡಿಲು, ಬೆಂಕಿ, ವಿದ್ಯುತ್, ಹಾವಿನ ಕಡಿತ, ಅಥವಾ ಇತರ ನೈಸರ್ಗಿಕ ವಿಕೋಪಗಳಿಂದ ಆಕಸ್ಮಿಕ ಮರಣ ಸಂಭವಿಸಿದರೆ, ನಾಮ ನಿರ್ದೇಶಿತರಿಗೆ 2 ಲಕ್ಷ ರೂಪಾಯಿ ವಿಮಾ ಮೊತ್ತ ದೊರೆಯುತ್ತದೆ. 18 ರಿಂದ 70 ವರ್ಷ ವಯಸ್ಸಿನವರು ಈ ಯೋಜನೆಯಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಅವರು ತಿಳಿಸಿದರು.

ಸಂಜೀವಿನಿ ಒಕ್ಕೂಟದಿಂದ ಮಹಿಳೆಯರಿಗೆ ಸಹಕಾರ : ಸಂಜೀವಿನಿ ಒಕ್ಕೂಟದ ಸಂಪನ್ಮೂಲ ವ್ಯಕ್ತಿ ರೇಣುಕಮ್ಮ ಬಂದ್ರೆಹಳ್ಳಿ ಮಾತನಾಡಿ, ಸಂಜೀವಿನಿ ಒಕ್ಕೂಟವು ಗ್ರಾಮೀಣ ಮಹಿಳೆಯರಿಗೆ ಉದ್ಯಮಗಳನ್ನು ಪ್ರಾರಂಭಿಸಲು ಸಾಲ ಸೌಲಭ್ಯ, ತರಬೇತಿ, ಮಾರ್ಗದರ್ಶನ ಮತ್ತು ಮಾರುಕಟ್ಟೆ ಸೌಲಭ್ಯಗಳನ್ನು ಒದಗಿಸುತ್ತದೆ. ಈ ಮೂಲಕ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಪ್ರೋತ್ಸಾಹ ನೀಡುತ್ತದೆ ಎಂದು ಹೇಳಿದರು.

ಶಿಬಿರದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಬ್ಯಾಂಕ್ ಮಿತ್ರ ಸುದರ್ಶನ್ ಮತ್ತು ರಾಘವೇಂದ್ರ ಚಾರ್, ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಕಮಲಮ್ಮ, ಕಾರ್ಯದರ್ಶಿ ವೀಣಾ, ಖಜಾಂಚಿ ಶೀಲಾ, ಎಂಬಿಕೆ ಪುಷ್ಪ, ಎಲ್‌ಸಿಆರ್‌ಪಿ ಅನಿತಾ, ಕೃಷಿ ಸಖಿ ಲಾವಣ್ಯ, ಪಶುಸಖಿ ಕವಿತಾ, ಮತ್ತು ಮಲ್ಲಿಗೆರೆ ಕೃಷಿಕ ಡೈಮಂಡ್ ರೂಪ ಸೇರಿದಂತೆ ಹಲವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಜೀವಿನಿ ಒಕ್ಕೂಟದ ಸದಸ್ಯರು, ಸ್ವಸಹಾಯ ಸಂಘಗಳ ಸದಸ್ಯರು ಮತ್ತು ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...