ಹುಳಿಯಾರು : ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಚಿಕ್ಕನಾಯಕನಹಳ್ಳಿ ತಾಲ್ಲೂಕು ಸಮಿತಿಯ ಅಧ್ಯಕ್ಷರಾದ ಸಿ. ಡಿ. ಚಂದ್ರಶೇಖರ್ ಅವರ ಅಧ್ಯಕ್ಷತೆಯಲ್ಲಿ ಇಂದು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ದೊಡ್ಡ ಸಿದ್ದಯ್ಯ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ತಾಲ್ಲೂಕು ಅಧಿಕಾರಿ ಗವಿರಂಗಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆಯ ಅಧಿಕಾರಿ ಹೊನ್ನಪ್ಪ, ಆಹಾರ ಶಿರಸ್ತೇದಾರ್ ಪ್ರಜ್ವಲ್, ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳು ಉಪಸ್ಥಿತರಿದ್ದರು.
ಇದಲ್ಲದೆ, ಸಮಿತಿಯ ಉಪಾಧ್ಯಕ್ಷ ಪಾಂಡುರಂಗಯ್ಯ ಹಾಗೂ ಸದಸ್ಯರುಗಳಾದ ಓಂಕಾರ ಮೂರ್ತಿ, ನಟರಾಜ್, ಚಿಕ್ಕ ತಿಮ್ಮಯ್ಯ, ನಿರಂಜನ್, ಅಣೆಪಾಳ್ಯದ ಚಂದ್ರಯ್ಯ, ಮತ್ತು ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ಸದಸ್ಯರು ಸಭೆಯಲ್ಲಿ ಭಾಗವಹಿಸಿ, ಯೋಜನೆಗಳ ಕುರಿತು ಚರ್ಚಿಸಿದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ