ವಿಷಯಕ್ಕೆ ಹೋಗಿ

ಹುಳಿಯಾರಿನಲ್ಲಿ ರೈತ ಸಂಘದಿಂದ ಪಟ್ಟಣ ಪಂಚಾಯತಿ ವಿರುದ್ಧ ಅಹೋರಾತ್ರಿ ಧರಣಿ.........ಸಂತೆ ಮೈದಾನ ಬದಲಾವಣೆ ಹಾಗೂ ಮೂಲಭೂತ ಸೌಕರ್ಯಕ್ಕಾಗಿ ಹೊಸಹಳ್ಳಿ ಚಂದ್ರಣ್ಣ ಬಣದ ಒತ್ತಾಯ

ಹುಳಿಯಾರಿನಲ್ಲಿ ರೈತ ಸಂಘದಿಂದ ಪಟ್ಟಣ ಪಂಚಾಯತಿ ವಿರುದ್ಧ ಅಹೋರಾತ್ರಿ ಧರಣಿ

----------------

ಸಂತೆ ಮೈದಾನ ಬದಲಾವಣೆ ಹಾಗೂ ಮೂಲಭೂತ ಸೌಕರ್ಯಕ್ಕಾಗಿ ಹೊಸಹಳ್ಳಿ ಚಂದ್ರಣ್ಣ ಬಣದ ಒತ್ತಾಯ

-----------

ಕಾಲಾವಕಾಶದೊಳಗೆ ಬೇಡಿಕೆ ಈಡೇರಿಸಲು ವಿಫಲವಾದ ಪಟ್ಟಣ ಪಂಚಾಯತಿ

----------


ಹುಳಿಯಾರು: ವಾರದ ಸಂತೆ ಮೈದಾನವನ್ನು ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸಲು ಹಾಗೂ ಸಂತೆ ನಡೆಯುವ ಸ್ಥಳದಲ್ಲಿ ನೆರಳು, ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ರೈತ ಸಂಘದ (ಹೊಸಹಳ್ಳಿ ಚಂದ್ರಣ್ಣ ಬಣ) ನೇತೃತ್ವದಲ್ಲಿ ಹುಳಿಯಾರು ಪಟ್ಟಣ ಪಂಚಾಯಿತಿ  ವಿರುದ್ಧ ಅಹೋರಾತ್ರಿ ಧರಣಿ ಸೋಮವಾರದಿಂದ ಪುನಃ ಆರಂಭವಾಗಿದೆ.

ಹಿನ್ನೆಲೆ ಮತ್ತು ವಚನ ಭ್ರಷ್ಟತೆ ಆರೋಪ : ಕಳೆದ 15 ದಿನಗಳ ಹಿಂದೆ ನಡೆದ ಪ್ರತಿಭಟನೆಯಲ್ಲಿ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಸಮಯಾವಕಾಶದೊಳಗೆ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಸಮಸ್ಯೆ ಪರಿಹರಿಸುವಲ್ಲಿ ಆಡಳಿತವು ವಿಫಲವಾದ ಹಿನ್ನೆಲೆಯಲ್ಲಿ ರೈತ ಸಂಘವು ಧರಣಿಯನ್ನು ಪುನರಾರಂಭಿಸಿದೆ. ಈ ಹಿಂದೆ ನೀಡಿದ ಭರವಸೆಗಳನ್ನು ಈಡೇರಿಸದ ಸ್ಥಳೀಯ ಆಡಳಿತವನ್ನು ಪ್ರತಿಭಟನಕಾರರು ವಚನ ಭ್ರಷ್ಟ ಎಂದು ಖಂಡಿಸಿ, ಸ್ಥಳೀಯ ಆಡಳಿತಕ್ಕೆ ಇನ್ನೂ 20 ವರ್ಷಗಳ ಕಾಲಾವಕಾಶ ನೀಡಿದರೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದಿಲ್ಲ ಎಂದು ಪ್ರತಿಭಟನಕಾರರು ದೂರಿದರು.

ತೀವ್ರ ವಾಗ್ವಾದ ಮತ್ತು ತರಾಟೆ : ಧರಣಿ ಪುನರಾರಂಭವಾಗುತ್ತಿದ್ದಂತೆಯೇ, ರೈತ ಮುಖಂಡರು ಮತ್ತು ಪಟ್ಟಣ ಪಂಚಾಯಿತಿ ಅಧ್ಯಕ್ಷರು ಹಾಗೂ ಅಧಿಕಾರಿಗಳ ನಡುವೆ ತೀವ್ರ ವಾಗ್ವಾದ ನಡೆಯಿತು. ರೈತ ಮುಖಂಡರು ವಾರದ ಸಂತೆ ಮೈದಾನದ ಸಮಸ್ಯೆ ಕುರಿತು ಪ್ರಶ್ನಿಸುತ್ತಿದ್ದಂತೆ ಪರಿಸ್ಥಿತಿ ಬಿಗಡಾಯಿಸಿ, ಮಾತಿನ ಚಕಮಕಿ ನಡೆಯಿತು. ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಅಧ್ಯಕ್ಷರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಈ ವಿಷಯವನ್ನು ಇತ್ಯರ್ಥಗೊಳಿಸಿ ಆದಷ್ಟು ಬೇಗ ಕಾರ್ಯಗತಗೊಳಿಸಬೇಕು ಎಂದು ಅವರು ಆಗ್ರಹಿಸಿದರು.
ಸೇವೆ ಇಲ್ಲದೆ ಸುಂಕ ಏಕೆ : ಪಟ್ಟಣ ಪಂಚಾಯಿತಿಗೆ ಸಹಸ್ರಾರು ರೂಪಾಯಿ ತೆರಿಗೆ ಪಾವತಿಸುತ್ತಾ ಬಂದಿದ್ದರೂ, ಯಾವುದೇ ರೀತಿಯ ಸೇವೆಗಳನ್ನು ಕಲ್ಪಿಸುವಲ್ಲಿ ವಿಫಲವಾಗಿದೆ. ಇದು ತೆರಿಗೆದಾರರಿಗೆ ಮಾಡುತ್ತಿರುವ ಅನ್ಯಾಯ ಎಂದು ರೈತ ಸಂಘದ ಮುಖಂಡರು ದೂರಿದರು.ಪಟ್ಟಣ ಪಂಚಾಯಿತಿ ಸಂತೆ ಮೈದಾನವನ್ನು ಬದಲಾಯಿಸಿ, ಅಲ್ಲಿ ಕುಡಿಯುವ ನೀರು, ಶೌಚಾಲಯ ಮತ್ತು ನೆರಳಿನ ವ್ಯವಸ್ಥೆ ಕಲ್ಪಿಸುವವರೆಗೂ, ನಾಳೆಯಿಂದ ಒಂದು ರೂಪಾಯಿ ಸುಂಕವನ್ನೂ ಕಟ್ಟಲು ಬಿಡುವುದಿಲ್ಲ ಎಂದು ರೈತ ಸಂಘ ಎಚ್ಚರಿಕೆ ನೀಡಿದೆ. ಒಂದು ವೇಳೆ ಯಾರಾದರೂ ಸುಂಕ ವಸೂಲಿಗೆ ಮುಂದಾದರೆ, ಅವರನ್ನು ಕರೆತಂದು ಕಂಬಕ್ಕೆ ಕಟ್ಟಿ ಹಾಕುವುದಾಗಿ ಪ್ರತಿಭಟನಕಾರರು ಸವಾಲು ಹಾಕಿದ್ದಾರೆ. ಸಂತೆ ಮೈದಾನದ ಬದಲಾವಣೆ, ಸ್ವಚ್ಛತೆ, ಮತ್ತು ಅಗತ್ಯ ಮೂಲಸೌಕರ್ಯಗಳ ವ್ಯವಸ್ಥೆ ಆಗುವವರೆಗೆ ಈ ಧರಣಿಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ಕುರಿತು ಪ್ರಧಾನಿ ಬಂದು ಹೇಳಿದರೂ ಸ್ಥಳ ಬಿಡುವುದಿಲ್ಲ ಎಂದು ಸಂಘದ ಮುಖಂಡರು ಸ್ಪಷ್ಟಪಡಿಸಿದ್ದಾರೆ.
ರೈತ ಸಂಘದ ಸದಸ್ಯರು ಹಸಿರು ಶಾಲುಗಳನ್ನು ಧರಿಸಿ ಸಾಮೂಹಿಕವಾಗಿ ಕಂಬಳಿಯ ಮೇಲೆ ಕುಳಿತು ಧರಣಿ ಸ್ಥಳದಲ್ಲಿ ಭಜನೆ ಮಾಡಿದರು.ಅಲ್ಲಿಯೇ ಅಡುಗೆ ಮಾಡಿದರು.

ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ, ತಾಲ್ಲೂಕು ಅಧ್ಯಕ್ಷ ಕರಿಯಪ್ಪ, ಹೋಬಳಿ ಅಧ್ಯಕ್ಷ ಕೆಂಕೆರೆ ಬಸವರಾಜು, ತುಮಕೂರು ಜಿಲ್ಲಾ ಕಾರ್ಯದರ್ಶಿ ಕಲ್ಲಹಳ್ಳಿ ಮಲ್ಲೇಶಯ್ಯ ಹಾಗೂ ಇತರ ಪ್ರಮುಖರಾದ ನೀರಾ ಈರಣ್ಣ ಪ್ರಶಾಂತ್, ಜಗದೀಶ್, ಸೋಮಜ್ಜನ ಪಾಳ್ಯದ ಪುಟ್ಟಯ್ಯ, ಹೆಚ್‌ಬಿ ಕೃಷ್ಣಮೂರ್ತಿ, ಸೀಗೆಬಾಗಿ ಮಂಜುನಾಥ್, ಆಶಾ ಸೇರಿದಂತೆ ಹಲವು ರೈತ ಮುಖಂಡರು ಪಾಲ್ಗೊಂಡಿದ್ದರು.

ಪ್ರತಿಭಟನಾಕಾರರು ತಮ್ಮ ಬೇಡಿಕೆಗಳು ಈಡೇರುವವರೆಗೂ ಹೋರಾಟ ಮುಂದುವರಿಸುವ ಎಚ್ಚರಿಕೆ ನೀಡಿದ್ದು, ಸದ್ಯಕ್ಕೆ ರೈತ ಸಂಘ ಮತ್ತು ಪಟ್ಟಣ ಪಂಚಾಯಿತಿ ನಡುವಿನ ಬಿಕ್ಕಟ್ಟು ಮುಂದುವರಿದಿದೆ. ಅಧಿಕಾರಿಗಳು ನೀಡಿರುವ ಭರವಸೆಯಂತೆ ಪಟ್ಟಣ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...