ಆರೋಗ್ಯವಂತ ಮಹಿಳೆ ಸಶಕ್ತ ಪರಿವಾರ: ಕ್ಷಯರೋಗ ಜಾಗೃತಿ ಕಾರ್ಯಕ್ರಮ
ಹುಳಿಯಾರು: ಆರೋಗ್ಯವಂತ ಮಹಿಳೆ - ಸಶಕ್ತ ಪರಿವಾರ ಅಭಿಯಾನದ ಅಡಿಯಲ್ಲಿ ಹುಳಿಯಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು ಕ್ಷಯರೋಗದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಆರೋಗ್ಯ ನಿರೀಕ್ಷಕರಾದ ರೇಣುಕರಾಜ್ ಮಾತನಾಡಿ ಈ ಕಾರ್ಯಕ್ರಮದ ಮುಖ್ಯ ಉದ್ದೇಶವು ಕ್ಷಯರೋಗದ ಹರಡುವಿಕೆ, ಅದರ ಲಕ್ಷಣಗಳು, ಚಿಕಿತ್ಸೆ ಮತ್ತು ತಡೆಗಟ್ಟುವಿಕೆಯ ಬಗ್ಗೆ ಜನರಿಗೆ ಮಾಹಿತಿ ನೀಡುವುದಾಗಿದ್ದು ಆರಂಭಿಕ ಹಂತದಲ್ಲೇ ರೋಗವನ್ನು ಪತ್ತೆಹಚ್ಚಿ ಚಿಕಿತ್ಸೆ ಪಡೆದರೆ ಸಂಪೂರ್ಣವಾಗಿ ಗುಣಮುಖರಾಗಲು ಸಾಧ್ಯವಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕರಾದ ಮಧು ಎಚ್.ಟಿ., ಸಮುದಾಯ ಆರೋಗ್ಯ ಅಧಿಕಾರಿಗಳಾದ ವಸಂತ ಮತ್ತು ಲತಾ, ಹಾಗೂ ಆಶಾ ಕಾರ್ಯಕರ್ತೆಯರಾದ ಭಾಗ್ಯಮ್ಮ, ಪಾರ್ವತಮ್ಮ, ಶ್ವೇತ ಸೇರಿದಂತೆ ಅನೇಕ ಸಾರ್ವಜನಿಕರು ಭಾಗವಹಿಸಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ