ವಿಷಯಕ್ಕೆ ಹೋಗಿ

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ
ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು

ಹುಳಿಯಾರು: ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು.

ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು.

ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು : ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದುರ್ಗಮ್ಮನ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ನಂತರ, ಮೆರವಣಿಗೆ ಮೂಲಕ ನಾಡಕಚೇರಿ ಮುಂದೆ ಆಗಮಿಸಿ, ಕಸ ಸುರಿಯುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಲು ಮುಂದಾದರು.

ಪೊಲೀಸರ ಅಡ್ಡಿ: ನಾಡಕಚೇರಿ ಆವರಣದ ಮುಂದೆ ಕಸ ಸುರಿಯುವುದಕ್ಕೆ ಸ್ಥಳದಲ್ಲಿದ್ದ ಪೊಲೀಸರು ತಕ್ಷಣ ಅಡ್ಡಿಪಡಿಸಿದರು.

ಬಿಗಿ ಬಂದೋಬಸ್ತ್: ಪರಿಸ್ಥಿತಿ ವಿಕೋಪಕ್ಕೆ ಹೋಗದಂತೆ ತಡೆಯಲು ನಾಡಕಚೇರಿ ಮುಂದೆ ಅಡಿಷನಲ್ ಎಸ್.ಪಿ., ಡಿವೈಎಸ್ಪಿ ಮತ್ತು ಸರ್ಕಲ್ ಇನ್ಸ್‌ಪೆಕ್ಟರ್ ಸೇರಿದಂತೆ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಬಿಗಿ ಸರ್ಪಗಾವಲು ಏರ್ಪಡಿಸಲಾಗಿತ್ತು.

ಹಿರಿಯ ಅಧಿಕಾರಿಗಳೊಂದಿಗೆ ಮಾತುಕತೆ :

​ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ತಿಪಟೂರು ಉಪವಿಭಾಗಾಧಿಕಾರಿ (ಎಸಿ) ಸಪ್ತಶ್ರೀ ಅವರು ಸ್ಥಳಕ್ಕೆ ಆಗಮಿಸಿ ಮಾತುಕತೆ ನಡೆಸಿದರು. ಈ ಮಾತುಕತೆಯಲ್ಲಿ ತುಮಕೂರು ನಗರ ಅಭಿವೃದ್ಧಿ ಕೋಶದ ಯೋಜನಾಧಿಕಾರಿ ಯೋಗಾನಂದ್, ತುಮಕೂರು ಎಪಿಎಂಸಿ ಉಪನಿರ್ದೇಶಕ ರಾಜಣ್ಣ, ಹಾಗೂ ಚಿಕ್ಕನಾಯಕನಹಳ್ಳಿ ತಹಸೀಲ್ದಾರ್ ಪುರಂದರ ಅವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಪ್ರತಿಭಟನಾಕಾರರ ನಡುವೆ ಕಾವೇರಿದ ಚರ್ಚೆ ನಡೆಯಿತು.

ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳು ಮತ್ತು ಒತ್ತಾಯ : ​ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಕೇವಲ ಮೌಖಿಕವಾಗಿ ಹೇಳದೆ, ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ನಿರ್ದಿಷ್ಟ ಕಾರ್ಯತಂತ್ರವನ್ನು ರೂಪಿಸುವಂತೆ ಒತ್ತಾಯಿಸಿದರು.

ವೈಜ್ಞಾನಿಕ ಕಸ ವಿಲೇವಾರಿ ಘಟಕ: ಕಸ ವಿಲೇವಾರಿ ಘಟಕಕ್ಕೆ ಎಲ್ಲೂ ವಿರೋಧ ಬರದೇ ಇರುವ ರೀತಿಯಲ್ಲಿ ಜಾಗವನ್ನು ಗುರುತಿಸಲು ಪರಿಸರ ಇಲಾಖೆಯ ಇಂಜಿನಿಯರ್‌ಗಳ ನೆರವು ಪಡೆದು ನೀಲನಕ್ಷೆ (ಡಿಪಿಆರ್) ತಯಾರಿಸಬೇಕು. ಇದಕ್ಕಾಗಿ, ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ  ಶಿರಸಿ, ಮಂಗಳೂರು ಅಥವಾ ಉಡುಪಿಯಂತಹ ಸ್ಥಳಗಳ ಮಾದರಿಯನ್ನು ಅಧ್ಯಯನ ಮಾಡಬೇಕು ಎಂದು ಸಲಹೆ ನೀಡಿದರು.

ತಾಂತ್ರಿಕ ಸಮಿತಿ ರಚನೆ (Technical Committee): ಜಾಗ ಗುರುತಿಸುವ ಮುನ್ನ ಅಧಿಕಾರಿಗಳು ಸಾರ್ವಜನಿಕರು, ಜನಪ್ರತಿನಿಧಿಗಳು ಮತ್ತು ತಾಂತ್ರಿಕ ಪರಿಣಿತರನ್ನು ಒಳಗೊಂಡ ಒಂದು ತಾಂತ್ರಿಕ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಯಿತು.

ಅಧಿಕಾರಿಗಳ ಭರವಸೆಶಾಶ್ವತ ಜಾಗಕ್ಕೆ 15 ದಿನಗಳ ಗಡುವು: ಕಸ ವಿಲೇವಾರಿ ಘಟಕದ ಶಾಶ್ವತ ಜಾಗ ಗುರುತಿಸುವ ಜವಾಬ್ದಾರಿಯನ್ನು ಆಡಳಿತ ತೆಗೆದುಕೊಂಡಿದ್ದು, 15 ದಿನಗಳಲ್ಲಿ ಜಾಗ ಗುರುತಿಸಿ ಸಮಸ್ಯೆಯನ್ನು ಇತ್ಯರ್ಥಪಡಿಸುವ ಭರವಸೆ ನೀಡಿದರು.

ತಾಂತ್ರಿಕ ಸಮಿತಿ ರಚನೆ: ಜಾಗ ಗುರುತಿಸಲು ತಕ್ಷಣವೇ ಕಮಿಟಿ ರಚಿಸಲಾಗುವುದು ಎಂದು ಎಸಿ ಸಪ್ತಶ್ರೀ ಸ್ಪಷ್ಟಪಡಿಸಿದರು.

ಸಂತೆ ಸ್ಥಳಾಂತರಕ್ಕೆ ಒಪ್ಪಿಗೆ : ಸಂತೆ ಜಾಗದ ಸ್ಥಳಾಂತರಕ್ಕೆ ತಾತ್ವಿಕ ಒಪ್ಪಿಗೆ ದೊರೆಯಿತು ಮತ್ತು ಸಾರ್ವಜನಿಕ ಶೌಚಾಲಯವನ್ನು ನಾಳೆಯೇ ತೆರೆಯಲು ಅಧಿಕಾರಿಗಳು ಸೂಚನೆ ನೀಡಿದರು.

​ಅಧಿಕಾರಿಗಳ ಈ ಸಕಾರಾತ್ಮಕ ಭರವಸೆಗಳ ನಂತರವೂ ಕಸ ಸುರಿಯುವ ನಿರ್ಧಾರದಿಂದ ಹಿಂಬರದ ಪ್ರತಿಭಟನಾಕಾರರು ಕಸ ಸುರಿಯಲು ಮುಂದಾದರು. ತೀವ್ರ ವಾದ ವಿವಾದ ಏರ್ಪಟ್ಟು ಕಡೆಗೆ ನಾಡಕಚೇರಿಗೆ ಮಹಿಳೆಯರು ಆರತಿ ಎತ್ತಿ, ಕಸ ಸುರಿಯುವ ನಿರ್ಧಾರಕ್ಕೆ ಅಂತ್ಯ ಹಾಡಿದರು.

ಸದ್ಯಕ್ಕೆ ಎರಡು ಬೇಡಿಕೆ ಬಗೆಹರಿದಿದ್ದರೂ ಪ್ರತಿಭಟನಾಕಾರರು ಮಾತ್ರ ತಮ್ಮ ಪ್ರತಿಭಟನೆಯನ್ನು ಹಿಂಪಡೆಯದೆ ಪಟ್ಟಣ ಪಂಚಾಯಿತಿ ಮುಂದೆ ನಡೆಯುತ್ತಿರುವ ಪ್ರತಿಭಟನೆಯನ್ನು ಮುಂದುವರಿಸಿದ್ದು, ಮುಂದಿನ 15 ದಿನಗಳಲ್ಲಿ ಕಸ ವಿಲೇವಾರಿ ಘಟಕದ ಜಾಗ ಗುರುತಿಸದಿದ್ದರೆ ಹೋರಾಟವನ್ನು ಮತ್ತೆ ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...