ವಿಷಯಕ್ಕೆ ಹೋಗಿ

ಹುಳಿಯಾರು ಪ್ರತಿಭಟನೆ: ನಾಳೆ ನಾಡಕಚೇರಿ ಮುಂದೆ ಕಸ ಸುರಿಯುವ ಮೂಲಕ ವಿನೂತನ ಪ್ರತಿಭಟನೆಗೆ ಸಜ್ಜು; 19ನೇ ದಿನಕ್ಕೆ ಕಾಲಿಟ್ಟ ಹೋರಾಟ


ಹುಳಿಯಾರು ಪ್ರತಿಭಟನೆ: ನಾಳೆ ನಾಡಕಚೇರಿ ಮುಂದೆ ಕಸ ಸುರಿಯುವ ಮೂಲಕ ವಿನೂತನ ಪ್ರತಿಭಟನೆಗೆ ಸಜ್ಜು; 19ನೇ ದಿನಕ್ಕೆ ಕಾಲಿಟ್ಟ ಹೋರಾಟ

---------------

ವರದಿ : ನರೇಂದ್ರಬಾಬು-ಹುಳಿಯಾರು

-------------

​ಹುಳಿಯಾರು:ಹುಳಿಯಾರಿನಲ್ಲಿ ಸ್ಥಳೀಯ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ರೈತ ಸಂಘದ ನೇತೃತ್ವದಲ್ಲಿ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಪ್ರತಿಭಟನೆಯು ನಾಳೆ ಸೋಮವಾರಕ್ಕೆ 19ನೇ ದಿನಕ್ಕೆ ಕಾಲಿಡಲಿದೆ. ಪಟ್ಟಣದಲ್ಲಿ ಕಸ ವಿಲೇವಾರಿ ಸಮಸ್ಯೆ ಮತ್ತು ಇತರೆ ನಾಗರಿಕ ಸೌಕರ್ಯಗಳ ಕೊರತೆಯ ವಿರುದ್ಧ ಹೋರಾಡುತ್ತಿರುವ ಪ್ರತಿಭಟನಾಕಾರರು, ನಾಳೆ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷ ಹಾಗೂ ಇತರ ಸಂಘಟನೆಗಳ ನೆರವಿನೊಂದಿಗೆ ನಾಡಕಚೇರಿ  ಮುಂದೆ ಕಸ ಸುರಿಯುವ ಮೂಲಕ ವಿನೂತನ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.

ಪ್ರತಿಭಟನಾಕಾರರ ಮುಖ್ಯ ಬೇಡಿಕೆಗಳು ಮತ್ತು ವಿನೂತನ ಕ್ರಮಗಳು:

​ಕಸ ವಿಲೇವಾರಿ ಸಮಸ್ಯೆ: ಹುಳಿಯಾರಿನಲ್ಲಿ ಮನೆ ಮನೆ ಕಸ ಸಂಗ್ರಹಣೆ ವ್ಯವಸ್ಥೆ ಸರಿಯಾಗಿಲ್ಲದಿರುವುದು ಮತ್ತು ಕಸ ವಿಲೇವಾರಿಗೆ ಸೂಕ್ತ ಜಾಗದ ಕೊರತೆಯು ಪ್ರಮುಖ ಸಮಸ್ಯೆಯಾಗಿದೆ. ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಾಗ ಗುರುತಿಸಲು ವಿಫಲರಾಗಿರುವ ಕಂದಾಯ ಅಧಿಕಾರಿಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ ಪ್ರತಿಭಟನಾಕಾರರು ನಾಡಕಚೇರಿ ಮುಂದೆ ಕಸವನ್ನು "ಉಡುಗೊರೆ"ಯಾಗಿ ಟ್ರ್ಯಾಕ್ಟರ್‌ನಲ್ಲಿ ತಂದು ಸುರಿಯುವ ಮೂಲಕ ಪ್ರತಿಭಟಿಸುವ ನಿರ್ಧಾರ ಪ್ರಕಟಿಸಿದ್ದಾರೆ.

ಸಮಸ್ಯೆಗಳು: ಕುಡಿಯುವ ನೀರಿನ ವ್ಯವಸ್ಥೆ ಮತ್ತು ಶೌಚಾಲಯಗಳ ವ್ಯವಸ್ಥೆ ಸೇರಿದಂತೆ ಪಟ್ಟಣದಲ್ಲಿನ ಇತರ ಮೂಲಭೂತ ಸೌಕರ್ಯಗಳ ಕೊರತೆಯನ್ನು ಬಗೆಹರಿಸಲು ಒತ್ತಾಯಿಸಲಾಯಿತು.ಅಧಿಕಾರಿಗಳಿಗೆ ಗಡುವು ಮತ್ತು ಎಚ್ಚರಿಕೆ: ಸರ್ಕಾರಿ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದ್ದು ನಾಡಕಚೇರಿ ಮುಂದೆ ಒಂದು ಟ್ರ್ಯಾಕ್ಟರ್ ಕಸವನ್ನು ಸುರಿದ ನಂತರವೂ ಸಮಸ್ಯೆ ಬಗೆಹರಿಯದಿದ್ದರೆ, ಎರಡು-ಮೂರು ದಿನಗಳ ನಂತರ ಮೂರು-ನಾಲ್ಕು ಟ್ರ್ಯಾಕ್ಟರ್ ಕಸವನ್ನು ತಹಸೀಲ್ದಾರ್ ಕಚೇರಿ ಮುಂದೆ ಸುರಿಯಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಅಲ್ಲಿಗೂ ಬಗೆಹರಿಯದಿದ್ದರೆ, ಹತ್ತು ಟ್ರ್ಯಾಕ್ಟರ್‌ಗಳನ್ನು ಉಪ ವಿಭಾಗಾಧಿಕಾರಿಗಳಿಗೆ ಕಳುಹಿಸಿ, ಕೊನೆಗೆ 20-30 ಟ್ರ್ಯಾಕ್ಟರ್‌ಗಳನ್ನು ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ತಂದು ಸುರಿಯುವುದಾಗಿ  ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪ್ರತಿಭಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳ ಭೇಟಿ:

​ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಡಿವೈಎಸ್ಪಿ ಜಯಲಕ್ಷ್ಮಮ್ಮ, ವೃತ್ತ ನಿರೀಕ್ಷಕ ನದಾಫ್ ಎಫ್‌ಕೆ, ಮತ್ತು ಪಿಎಸ್‌ಐ ಧರ್ಮಾಂಜಿ ಅವರು ಸಂಜೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದರು. ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದ ಡಿವೈಎಸ್ಪಿ ಅವರು, ನಾಳಿನ ಪ್ರತಿಭಟನೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದರು.

​ಶಾಂತಿ ಕಾಪಾಡುವ ಭರವಸೆ:

​ ಕೆ ಆರ್ ಎಸ್ ಪಕ್ಷದ ಪ್ರಮುಖ ಭಟ್ಟರಹಳ್ಳಿ ಮಲ್ಲಿಕಾರ್ಜುನ್ ಅವರು ಮಾತನಾಡಿ ಪೊಲೀಸರಿಗೆ ಪ್ರತಿಭಟನೆ ಕುರಿತು ಸ್ಪಷ್ಟನೆ ನೀಡಿ, ಪ್ರತಿಭಟನೆಯಿಂದ ಸಾರ್ವಜನಿಕ ಆಸ್ತಿಪಾಸ್ತಿಗೆ ಯಾವುದೇ ನಷ್ಟ ಉಂಟು ಮಾಡುವುದಿಲ್ಲ. ವೈಯಕ್ತಿಕವಾಗಿ ಯಾರನ್ನೂ ಅವಹೇಳನಕಾರಿಯಾಗಿ ನಿಂದಿಸುವುದಿಲ್ಲ. ಪೊಲೀಸರಿಗೆ ಎಫ್‌ಐಆರ್ ದಾಖಲಿಸುವ ಕೆಲಸವನ್ನೇ ನೀಡುವುದಿಲ್ಲ ಎಂದು ಭರವಸೆ ನೀಡಿದರು. ಅಲ್ಲದೆ ಪ್ರತಿಭಟನೆ ಸಂದರ್ಭದಲ್ಲಿ ಎಲ್ಲೂ ಸಹ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ರುವುದಿಲ್ಲ ಅಥವಾ ಟ್ರಾಫಿಕ್ ಸಮಸ್ಯೆ ಉಂಟು ಮಾಡುವುದಿಲ್ಲ ಎಂದು ತಿಳಿಸಿದರು.

ಬೆಂಬಲ ವ್ಯಕ್ತಪಡಿಸಿದ ಸಂಘಟನೆಗಳು ಮತ್ತು ನಾಗರಿಕರು:

​ನಾಡಕಚೇರಿ ಮುಂದೆ ನಡೆಯಲಿರುವ ಈ ವಿನೂತನ ಪ್ರತಿಭಟನೆಗೆ ಹುಳಿಯಾರಿನ ನಾಗರಿಕರು, ವಿವಿಧ ಸಂಘಟನೆಗಳು ಮತ್ತು ಜನಪ್ರತಿನಿಧಿಗಳು ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

​ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದ ಪ್ರಮುಖರು:

​ಈ ಸಂದರ್ಭದಲ್ಲಿ ಕೆಆರ್‌ಎಸ್ ಪಕ್ಷದ ಭಟ್ಟರಹಳ್ಳಿ ಮಲ್ಲಿಕಾರ್ಜುನ್, ರೈತ ಸಂಘದ ತಾಲೂಕು ಅಧ್ಯಕ್ಷ ಕರಿಯಪ್ಪ, ಜಿಲ್ಲಾ ಕಾರ್ಯದರ್ಶಿ ಕಲ್ಲಹಳ್ಳಿ ಮಲ್ಲೇಶಯ್ಯ, ನಾಗರಿಕ ವೇದಿಕೆಯ ಇಂಜಿನಿಯರ್ ಲಿಂಗರಾಜು,ಶಂಕರೇಶ್, ಕಾಮನಬಿಲ್ಲು ಫೌಂಡೇಶನ್‌ನ ಚನ್ನಕೇಶವ, ನೀರಾ ಈರಣ್ಣ, ಉಪನ್ಯಾಸಕ ನರೇಂದ್ರಬಾಬು, ಸಾಮಾಜಿಕ ಹೋರಾಟಗಾರ ಹೊನ್ನಪ್ಪ ಮೊದಲಾದವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...