ವಿಷಯಕ್ಕೆ ಹೋಗಿ

ಹುಳಿಯಾರು ಪಟ್ಟಣ ಪಂಚಾಯಿತಿ ಎದುರು ಕೆ.ಆರ್.ಎಸ್. ಪಕ್ಷದಿಂದ ಅಧಿಕಾರಿಗಳಿಗೆ ಕಸ ರಮಾನಿಸುವ ಮೂಲಕ ವಿನೂತನ ಪ್ರತಿಭಟನೆ

ಹುಳಿಯಾರು ಪಟ್ಟಣ ಪಂಚಾಯಿತಿ ಎದುರು ಕೆ.ಆರ್.ಎಸ್. ಪಕ್ಷದಿಂದ ಅಧಿಕಾರಿಗಳಿಗೆ ಕಸ ರಮಾನಿಸುವ ಮೂಲಕ ವಿನೂತನ ಪ್ರತಿಭಟನೆ;

ಭಟ್ಟರಹಳ್ಳಿ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಆಡಳಿತದ ಲೋಪಗಳ ವಿರುದ್ಧ ಆಕ್ರೋಶ

--------

✍️ ವರದಿ : ನರೇಂದ್ರಬಾಬು-ಹುಳಿಯಾರು 9448760070

---------

ಹುಳಿಯಾರು:

ಹುಳಿಯಾರು ಪಟ್ಟಣದಲ್ಲಿ ಕಳೆದ ಏಳು ವರ್ಷಗಳಿಂದ ಕಸ ವಿಲೇವಾರಿ ಘಟಕಕ್ಕೆ ಸೂಕ್ತ ಜಾಗ ಒದಗಿಸದ ಮತ್ತು ಕಸದ ಸಮಸ್ಯೆಯನ್ನು ಬಗೆಹರಿಸದ ಜಿಲ್ಲಾಡಳಿತದ ವಿರುದ್ಧ ಹಾಗೂ ಹುಳಿಯಾರು ಪಟ್ಟಣ ಪಂಚಾಯಿತಿ ಕಛೇರಿಯ ಕಾರ್ಯವೈಖರಿ ಮತ್ತು ಸ್ಥಳೀಯ ಸಮಸ್ಯೆಗಳ ವಿರುದ್ಧ ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷವು ಸೋಮವಾರ ವಿನೂತನ ಪ್ರತಿಭಟನೆ ನಡೆಸಿತು.

ಪಟ್ಟಣ ಪಂಚಾಯಿತಿ ಕಾರ್ಯಾಲಯದ ಮುಂದೆ ಈಗಾಗಲೇ ಚಂದ್ರಪ್ಪ ಬಣದ ರೈತ ಸಂಘವು 5 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಅದಕ್ಕೆ ಬೆಂಬಲ ಸೂಚಿಸಿ KRS ಪಕ್ಷವು ಈ ವಿನೂತನ ಪ್ರತಿಭಟನೆಗೆ ಮುಂದಾಯಿತು.

ಕೆ.ಆರ್.ಎಸ್. ಪಕ್ಷದ ಪ್ರಮುಖ ಕಾರ್ಯಕರ್ತರಾದ ಭಟ್ಟರಹಳ್ಳಿ ಮಲ್ಲಿಕಾರ್ಜುನ್ ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು,ಮಹಿಳೆಯರು ಸೇರಿದಂತೆ  ಸ್ಥಳೀಯರು ಭಾಗವಹಿಸಿದ್ದರು.ಪಟ್ಟಣ ಪಂಚಾಯಿತಿ ಕಛೇರಿಯ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಆಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿದರು.ಹುಳಿಯಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಏಳು ವರ್ಷಗಳಿಂದ ಕಸ ವಿಲೇವಾರಿ ಘಟಕಕ್ಕೆ ಜಾಗವನ್ನು ಗುರುತಿಸಲು ಸಾಧ್ಯವಾಗಿಲ್ಲ. ಈ ಕುರಿತು ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಮತ್ತು ತಹಸೀಲ್ದಾರ್ ಅವರಿಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕಸ ವಿಲೇವಾರಿಗೆ ಸೂಕ್ತ ಸೌಲಭ್ಯ ನೀಡದೆ, ಪಟ್ಟಣ ಪಂಚಾಯಿತಿಯು ಮಾತ್ರ ಸಾರ್ವಜನಿಕರಿಂದ ಕಡ್ಡಾಯವಾಗಿ ತೆರಿಗೆ ವಸೂಲಿ ಮಾಡುತ್ತಿದೆ ಎಂದು ಆರೋಪಿಸಿದರು.ಸ್ಥಳೀಯ ಕುಂದುಕೊರತೆಗಳು, ಅಭಿವೃದ್ಧಿ ಕಾಮಗಾರಿಗಳ ವಿಳಂಬ ಮತ್ತು ಪಾರದರ್ಶಕತೆಯ ಕೊರತೆಯ ಕುರಿತು ಮಲ್ಲಿಕಾರ್ಜುನ್ ಅವರು ಮಾತನಾಡಿ ಕಸವನ್ನು ಈ ರೀತಿ 'ದೀಪಾವಳಿ ಉಡುಗೊರೆ'ಯಾಗಿ ಕಳುಹಿಸುವುದು, ಕರ್ತವ್ಯ ನಿರ್ಲಕ್ಷ್ಯ ಮಾಡಿದ ಅಧಿಕಾರಿಗಳಿಗೆ ಜನರು ವ್ಯಕ್ತಪಡಿಸುತ್ತಿರುವ ಅಸಮಾಧಾನದ ಸಂಕೇತವಾಗಿದೆ.ಅಧಿಕಾರಿಗಳಿಗೆ ಈಗಲಾದರೂ ನಾಚಿಕೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ತಾಲೂಕು ದಂಡಾಧಿಕಾರಿಗಳಾದ ತಹಸಿಲ್ದಾರ್‌ರವರ ಅಧಿಕಾರ ವೈಫಲ್ಯತೆ ವಿರುದ್ಧ ಭಟ್ಟರಹಳ್ಳಿ ಮಲ್ಲಿಕಾರ್ಜುನ್ ತೀವ್ರ ವಾಗ್ದಾಳಿ ನಡೆಸಿದರುಪ್ರತಿಭಟನೆಯ ಭಾಗವಾಗಿ ಮಹಿಳೆಯರು ಮನೆಯಿಂದ ತಂದಿದ್ದ ಕಸವನ್ನು ಉಡುಗೊರೆ ರೂಪದಲ್ಲಿ ಪ್ಯಾಕ್ ಮಾಡಿ ಕೊರಿಯರ್ ಮೂಲಕ ಅವರಿಗೆ ರವಾನಿಸಲಾಯಿತು.ಪಂಚಾಯಿತಿಯಲ್ಲಿನ ಸಮಸ್ಯೆಗಳ ಕುರಿತು ಪಕ್ಷವು ಕಣ್ಣಿಟ್ಟಿದ್ದು, ಸ್ಥಳೀಯರ ಹಕ್ಕುಗಳಿಗಾಗಿ ಕೆ.ಆರ್.ಎಸ್. ಪಕ್ಷವು ಸದಾ ಹೋರಾಟ ನಡೆಸಲಿದೆ," ಎಂದು ಭರವಸೆ ನೀಡಿದರು.ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸ್ಥಳ ನೀಡಲು ಆಗ್ರಹಿಸಿ ನಡೆದ ​ಈ ಪ್ರತಿಭಟನೆಯಿಂದಾಗಿ ಜಿಲ್ಲಾಡಡಳಿತ, ಹುಳಿಯಾರು ಪಟ್ಟಣ ಪಂಚಾಯಿತಿ ಆಡಳಿತದ ಮೇಲೆ ತೀವ್ರ ಒತ್ತಡವಿದ್ದು, ಜಿಲ್ಲಾಡಳಿತ ಹಾಗೂ ಪಂಚಾಯಿತಿ ಆಡಳಿತವು ಇದಕ್ಕೆ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...