ವಿಷಯಕ್ಕೆ ಹೋಗಿ

ಹುಳಿಯಾರು ಪಟ್ಟಣ ಸಂತೆ ಸ್ಥಳಾಂತರ ಮತ್ತು ನೆಲ ಬಾಡಿಗೆ ಹೊಸದಾಗಿ ನಿಗದಿ

ಹುಳಿಯಾರು ಪಟ್ಟಣ ಸಂತೆ ಸ್ಥಳಾಂತರ ಮತ್ತು ನೆಲ ಬಾಡಿಗೆ ಹೊಸದಾಗಿ ನಿಗದಿ

ಸಂತೆ ವ್ಯಾಪಾರಿಗಳಿಗೆ APMC ಯಾರ್ಡ್‌ನಲ್ಲಿ ಸ್ಥಳ ಗುರುತು, ದರ ನಿಗದಿ: ಪಟ್ಟಣ ಪಂಚಾಯಿತಿ ತೀರ್ಮಾನ

ಹುಳಿಯಾರು: ​ಹುಳಿಯಾರು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ  ರತ್ನಮ್ಮ ಅವರ ಅಧ್ಯಕ್ಷತೆಯಲ್ಲಿ  ಇಂದು ನಡೆದ ಸಭೆಯಲ್ಲಿ, ಪಟ್ಟಣದ ವ್ಯಾಪ್ತಿಯಲ್ಲಿ ಗಾಂಧಿಪೇಟೆಯ ರಸ್ತೆ ಪಕ್ಕದಲ್ಲಿ ನಡೆಯುತ್ತಿದ್ದ ವಾರದ ಸಂತೆಯನ್ನು ಎ.ಪಿ.ಎಂ.ಸಿ ಯಾರ್ಡ್‌ಗೆ ಸ್ಥಳಾಂತರಿಸಿದ ಜಾಗದಲ್ಲಿ ವ್ಯಾಪಾರಸ್ಥರಿಗೆ ಸ್ಥಳ ಗುರುತು ಮಾಡಿ, ನೆಲ ಬಾಡಿಗೆಯನ್ನು ನಿಗದಿಪಡಿಸುವ ಕುರಿತು ಸರ್ವಾನುಮತದ ತೀರ್ಮಾನ ಕೈಗೊಳ್ಳಲಾಯಿತು.

ಮೊದಲ ಆದ್ಯತೆ: ಸ್ಥಳಾಂತರಗೊಂಡಿರುವ ಸಂತೆಯಲ್ಲಿ ಹಾಲಿ ವ್ಯಾಪಾರಸ್ಥರಿಗೆ ಮೊದಲ ಆದ್ಯತೆ ನೀಡುವುದು ಹಾಗೂ ಹಾಲಿ ವ್ಯಾಪಾರಸ್ಥರಿಗೆ ಸ್ಥಳ ಹಂಚಿಕೆಯ ನಂತರ ಖಾಲಿ ಜಾಗ ಲಭ್ಯವಿದ್ದಲ್ಲಿ ಮಾತ್ರ ಹೊಸಬರಿಗೆ ಆದ್ಯತೆ ನೀಡುವುದು ಎಂದು ತೀರ್ಮಾನಿಸಲಾಯಿತು.

​ನೆಲ ಬಾಡಿಗೆ ನಿಗದಿ: ಈ ಕೆಳಕಂಡಂತೆ ವಾರದ ಸಂತೆಯ ದಿನಕ್ಕೆ  ನೆಲ ಬಾಡಿಗೆ ನಿಗದಿಪಡಿಸಲಾಯಿತು.

​5 x 5 ಅಡಿ ಅಳತೆಗೆ: ರೂ. 50/-.

​10 x 10 ಅಡಿ ಅಳತೆಗೆ: ರೂ. 100/-.

​10 x 15 ಅಡಿ ಅಳತೆಗೆ: ರೂ. 150/-.

​ಸ್ಥಳ ಹಂಚಿಕೆ ಕುರಿತು ಕೌನ್ಸಿಲರ್ ದಯಾನಂದ್ ಸ್ಪಷ್ಟನೆ: ಸಭೆಯ ನಂತರ ಪಟ್ಟಣ ಪಂಚಾಯಿತಿ ಮುಂದೆ ಸೇರಿದ್ದ ನೂರಾರು ಸಂತೆ ವ್ಯಾಪಾರಸ್ಥರಿಗೆ ಈ ವಿಚಾರಗಳನ್ನು ತಿಳಿಸಲಾಯಿತು. ಈ ವೇಳೆ ಮಾತನಾಡಿದ ಕೌನ್ಸಿಲರ್ ದಯಾನಂದ್ ಅವರು, ನೆಲ ಬಾಡಿಗೆಯನ್ನು ಪ.ಪಂ. ಸ್ವಚ್ಛತೆ ಕಾಪಾಡಲು ಬಳಸಲಾಗುತ್ತದೆ ಎಂದು ತಿಳಿಸಿದರು.

​ಸ್ಥಳ ಹಂಚಿಕೆ ಪ್ರಕ್ರಿಯೆ ಕುರಿತು ವಿವರಿಸಿದ ಅವರು, ಹಳೆಯ ಪಟ್ಟಿಯ ಪ್ರಕಾರ ಹಿಂದಿನಿಂದಲೂ ಇರುವ ವ್ಯಾಪಾರಿಗಳಿಗೆ ಮೊದಲ ಆದ್ಯತೆ ನೀಡುವುದು ಹಾಗೂ ಅವರಿಗೆ ಸ್ಥಳ ಹಂಚಿಕೆಯಾದ ನಂತರವೇ ಹೊಸಬರಿಗೆ ಅವಕಾಶ ನೀಡುವುದು ಎಂದು ವಿವರಿಸಿದರು. 

ಸಂತೆ ಸ್ಥಳವನ್ನು ಮೂರು ಸಾಲುಗಳಲ್ಲಿ ಗುರುತಿಸಲಾಗಿದ್ದು, 5x5 ಅಳತೆ ಒಂದು ಸಾಲಿನಲ್ಲಿ, 10x10 ಅಳತೆ ಮತ್ತೊಂದು ಸಾಲಿನಲ್ಲಿ ಮತ್ತು 10x15 ಅಳತೆ ಇನ್ನೊಂದು ಸಾಲಿನಲ್ಲಿ ಬರುತ್ತದೆ ಎಂದು ತಿಳಿಸಿದರು.

​ಗುರುತಿಸಿದ ಸ್ಥಳಗಳಿಗೆ ನಂಬರ್ ಹಾಕಿ, ಲಾಟರಿ ಎತ್ತುವ ಮುಖಾಂತರ ಯಾವ ವ್ಯಾಪಾರಿಗೆ ಯಾವ ನಂಬರ್ ಸಿಗುವುದೋ ಅದೇ ಸ್ಥಳದಲ್ಲಿ ವ್ಯಾಪಾರ ಮಾಡಬೇಕು. ತಮಗೆ ಬೇಕಾದಲ್ಲಿ, ಮುಂಭಾಗದಲ್ಲಿ, ಹಿಂಭಾಗದಲ್ಲಿ ಸ್ಥಳ ಕೇಳಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.ವ್ಯಾಪಾರಸ್ಥರಿಗೆ ಶೀಘ್ರವೇ ನೆರಳಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು. 

ವಿಶೇಷ ದಿನಗಳು ಅಥವಾ ಹಬ್ಬಗಳಂದು ನಡೆಯುವ ಸಂತೆ ದಿನ ಎಂದಿನ ಬಾಡಿಗೆಯನ್ನೆ ವಸೂಲಿ ಮಾಡಲಾಗುವುದು ಎಂದು ತೀರ್ಮಾನಿಸಲಾಯಿತು.

ಈ ಸಂದರ್ಭದಲ್ಲಿ  ಉಪಾಧ್ಯಕ್ಷೆ ಕಾವ್ಯಾರಾಣಿ, ಮಾಜಿ ಅಧ್ಯಕ್ಷ ಕಿರಣ್ ಕುಮಾರ್, ದಸ್ತಗೀರ್ ಸಾಬ್, ಸಿದ್ದಿಕ್, ಬಡಗಿ ರಾಜು, ಮಹಮ್ಮದ್ ಜುಬೇರ್, ದಯಾನಂದ್, ಮಂಜನಾಯ್ಕ ,ಜಹೀರ್ ಸಾಬ್ ಪ್ರೀತಿ ರಾಘವೇಂದ್ರ, ವೆಂಕಟೇಶ್ ಸೈಯದ್ ನೂರ್ ಫಕ್ರುದ್ದೀನ್, ಮುಖ್ಯಾಧಿಕಾರಿ ಮಂಜುನಾಥ್ ಇಂಜಿನಿಯರ್ ಮಂಜುನಾಥ್ ಮೊದಲಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...