ವಿಷಯಕ್ಕೆ ಹೋಗಿ

ಹುಳಿಯಾರು ಪಟ್ಟಣ ಪಂಚಾಯಿತಿ ಮುಂದೆ ಗುರುವಾರದಿಂದ ಅಹೋರಾತ್ರಿ ಧರಣಿ: ರೈತ ಸಂಘದ ಘೋಷಣೆ

ಹುಳಿಯಾರು ಪಟ್ಟಣ ಪಂಚಾಯಿತಿ ಮುಂದೆ ಗುರುವಾರದಿಂದ ಅಹೋರಾತ್ರಿ ಧರಣಿ: ರೈತ ಸಂಘದ ಘೋಷಣೆ


ಅಧಿಕಾರಿಗಳ ವಚನಭ್ರಷ್ಟತೆ ವಿರುದ್ಧ ರೈತರ ಕಿಡಿ – ಸಮಸ್ಯೆ ಬಗೆಹರಿಯಲಿಲ್ಲವಾದರೆ ಚಳುವಳಿ ತೀವ್ರಗೊಳಿಸುವ ಎಚ್ಚರಿಕೆ.

ಹುಳಿಯಾರು: ಪಟ್ಟಣ ಪಂಚಾಯಿತಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಿರುದ್ಧವಾಗಿ ರೈತ ಸಂಘ ಮತ್ತೊಮ್ಮೆ ಹೋರಾಟದ ಹಾದಿ ಹಿಡಿದಿದೆ.

ಹುಳಿಯಾರು ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ರಾಜ್ಯ ರೈತ ಸಂಘದ ಚಂದ್ರಪ್ಪ ಬಣದ ರೈತರು ಇಂದು ಪುನಃ ಪ್ರತಿಭಟನೆ ನಡೆಸಿ, ಬರುವ ಗುರುವಾರ (ಅಕ್ಟೋಬರ್ 9) ರಿಂದ ಅಹೋರಾತ್ರಿ ಧರಣಿ ಆರಂಭಿಸುವುದಾಗಿ ಘೋಷಿಸಿದ್ದಾರೆ.

ಭರವಸೆ ನೀಡಿ ಸ್ಪಂದಿಸಿಲ್ಲ  : ಹುಳಿಯಾರು ಹೋಬಳಿ ರೈತ ಸಂಘದ ಅಧ್ಯಕ್ಷ ಕೆಂಕೆರೆ ಬಸವರಾಜು ಮಾತನಾಡಿ ನಾವು ಕಳೆದ ಬಾರಿ ನಡೆಸಿದ ಪ್ರತಿಭಟನೆಯಲ್ಲಿ ಅಧಿಕಾರಿಗಳು ಪಾಲ್ಗೊಂಡು ಶೌಚಾಲಯ, ಕುಡಿಯುವ ನೀರು ಹಾಗೂ ಸಂತೆ ಸ್ಥಳದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದಾಗಿ ಭರವಸೆ ನೀಡಿದ ಕಾರಣಕ್ಕೆ ನಾವು  ಧರಣಿಯನ್ನು ಮುಂದೂಡಿದ್ದೆವು. ಆದರೆ ಗಡುವು ಮುಗಿದರೂ ಕ್ರಮ ಕೈಗೊಂಡಿಲ್ಲ. ಹೀಗಾಗಿ ಗುರುವಾರದಿಂದ ಅಹೋರಾತ್ರಿ ಸತ್ಯಾಗ್ರಹ ಆರಂಭಿಸುತ್ತೇವೆ,” ಎಂದು ಎಚ್ಚರಿಕೆ ನೀಡಿದರು.

ಹೋರಾಟ ತೀವ್ರಗೊಳ್ಳಲಿದೆ  : ರಾಜ್ಯ ರೈತ ಸಂಘದ ಅಧ್ಯಕ್ಷ ಹೊಸಹಳ್ಳಿ ಚಂದ್ರಪ್ಪ ಮಾತನಾಡಿ, “ನಾವು ಮೊದಲ ಹಾಗೂ ಎರಡನೇ ಬಾರಿ ಧರಣಿ ನಡೆಸಿದ್ದಾಗ ಅಧಿಕಾರಿಗಳು ಸ್ಪಂದಿಸುವಂತೆ ಕಂಡಿದ್ದರು. ಆದರೆ ಈಗ ಮತ್ತೆ ಮೌನವಾಗಿದ್ದಾರೆ. ನಮ್ಮ ಬೇಡಿಕೆಗಳು ನ್ಯಾಯಸಮ್ಮತವಾಗಿದ್ದರೂ ಕೂಡ ಸ್ಪಂದಿಸದಿರುವುದು ಬೇಸರದ ಸಂಗತಿ. ಹೀಗಾಗಿ ಗುರುವಾರ ಬೆಳಗ್ಗೆ 11 ಗಂಟೆಯಿಂದ  ನಿರಂತರ ಅಹೋರಾತ್ರಿ ಧರಣಿ ನಡೆಸುತ್ತೇವೆ ಎಂದು ಘೋಷಿಸಿದರು.

                  ಅಧಿಕಾರಿಗಳ ವಿರುದ್ಧ ಹರಿಹಾಯ್ದ ಅವರು ಸೆಪ್ಟೆಂಬರ್ 29ರಂದು ಚಿಕ್ಕನಾಯಕನಹಳ್ಳಿ ತಹಸೀಲ್ದಾರ್ ಕೆ.ಪುರಂದರ ಮತ್ತು ತುಮಕೂರು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಯೋಗಾನಂದ ಅವರುಗಳು  ಬಂದಿದ್ದು, ಎಂಟು ದಿನಗಳ ಗಡುವು ಕೇಳಿದ್ದರು. ಆದರೆ ಈಗ ಗಡುವು ಮುಗಿಯುವ ಹೊತ್ತಿಗೆ ಯಾವುದೇ ಕ್ರಮವಾಗಿಲ್ಲ. ಈ ಹಿನ್ನೆಲೆಯಲ್ಲಿ ದಿನಾಂಕ 9-10-25ರಿಂದ ಅಹೋರಾತ್ರಿ ಚಳುವಳಿಯನ್ನು ಹಮ್ಮಿಕೊಂಡಿದ್ದೇವೆ. ಹಳ್ಳಿಗಳ ರೈತರು ದಿಂಬು ಹೊದಿಕೆ ಸಮೇತ ಬಂದು ಈ ಹೋರಾಟದಲ್ಲಿ ಭಾಗವಹಿಸುವರು ಎಂದು ಹೇಳಿದರು.

ರೈತರ ಹಕ್ಕಿಗಾಗಿ ಹೋರಾಟ : ಅಧಿಕಾರಿಗಳ ವಚನಭ್ರಷ್ಟತೆ ವಿರುದ್ಧ ಕಿಡಿ ಕಾರಿದ ಅವರು ನಾವು ಯಾರ ಸಹಾಯ ಕೇಳುತ್ತಿಲ್ಲ, ನಮ್ಮ ಹಕ್ಕು ಕೇಳುತ್ತಿದ್ದೇವೆ. ತೆರಿಗೆ ಕಟ್ಟುತ್ತಿರುವ ಜನರ ಬೇಡಿಕೆಗಳನ್ನು ಈಡೇರಿಸುವುದು ಆಡಳಿತದ ಕರ್ತವ್ಯ. ಆದರೆ ಅವರ ಪ್ರತಿಕ್ರಿಯೆ ಇಲ್ಲವಾದ್ದರಿಂದ ಈ ಚಳುವಳಿ ತೀವ್ರಗೊಳ್ಳಲಿದೆ ಎಂದು ಎಚ್ಚರಿಸಿದರು.

ಹುಳಿಯಾರು ಪಟ್ಟಣದ ಸಂತೆ ಬೀದಿ, ಬಸ್ ನಿಲ್ದಾಣ ಹಾಗೂ ಫುಟ್ಪಾತ್ ವ್ಯಾಪಾರಿಗಳಿಂದ ಸುಂಕ ವಸೂಲಿ ಮಾಡಬಾರದು ಎಂದು ರೈತ ಸಂಘ ಮನವಿ ರೂಪದಲ್ಲಿ ಹ್ಯಾಂಡ್‌ಬಿಲ್ಸ್ ಹಂಚುವ ನಿರ್ಧಾರವನ್ನೂ ಅವರು ಘೋಷಿಸಿದರು.

ಪ್ರಮುಖ ಬೇಡಿಕೆಗಳು :

1.ಹಾಲಿ ನಡೆಯುತ್ತಿರುವ ಕಿರಿದಾದ ಸಂತೆ ಸ್ಥಳವನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಜಾಗಕ್ಕೆ ಸ್ಥಳಾಂತರಿಸುವುದು

2.ಹಾಲಿ ಸಂತೆ ಜಾಗದಲ್ಲಿ ಕುಡಿಯುವ ನೀರು, ನೆರಳು ಹಾಗೂ ಶೌಚಾಲಯದ ವ್ಯವಸ್ಥೆ ಕಲ್ಪಿಸುವುದು

3.ಬಸ್ ನಿಲ್ದಾಣದ ಶೌಚಾಲಯವನ್ನು ಸಾರ್ವಜನಿಕರಿಗೆ ಮುಕ್ತಿಗೊಳಿಸುವುದು

ಹೋರಾಟದಲ್ಲಿ ಹುಳಿಯಾರು ಹೋಬಳಿ ಅಧ್ಯಕ್ಷ ಬಸವರಾಜು, ತಾಲೂಕು ಅಧ್ಯಕ್ಷ ಕರಿಯಪ್ಪ, ನೀರಾ ಈರಣ್ಣ, ಪ್ರಶಾಂತ್, ಜಗದೀಶ್, ನಿಂಗಪ್ಪ, ಪುಟ್ಟಯ್ಯ, ಪುಷ್ಪಮ್ಮ, ಲಕ್ಷ್ಮಿ ಸೇರಿದಂತೆ ಹಲವಾರು ರೈತರು ಭಾಗವಹಿಸಿದ್ದರು.

---------------

ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಯಲಿದೆ. ಬೇಡಿಕೆಗಳ ಈಡೇರಿಕೆಯಾಗದಿದ್ದರೆ ಹುಳಿಯಾರಿನ ಜನಪರ ಸಂಘಟನೆಗಳ ಸಹಕಾರದೊಂದಿಗೆ ಅಹೋರಾತ್ರಿ ಚಳುವಳಿ ನಿರಂತರವಾಗಲಿದೆಚಂದ್ರಪ್ಪ

--------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...