ವಿಷಯಕ್ಕೆ ಹೋಗಿ

ಹುಳಿಯಾರು ರೈತ ಸಂಘದ ಧರಣಿ ಅಂತ್ಯಕ್ಕೆ ಮುಹೂರ್ತ: ಶಾಸಕ ಸಿ.ಬಿ. ಸುರೇಶ್ ಬಾಬು ಭೇಟಿ, ಮೂರು ಬೇಡಿಕೆ ಈಡೇರಿಸುವ ಭರವಸೆ

ಹುಳಿಯಾರು ರೈತ ಸಂಘದ ಧರಣಿ ಅಂತ್ಯಕ್ಕೆ ಮುಹೂರ್ತ: ಶಾಸಕ ಸಿ.ಬಿ. ಸುರೇಶ್ ಬಾಬು ಭೇಟಿ, ಮೂರು ಬೇಡಿಕೆ ಈಡೇರಿಸುವ ಭರವಸೆ

ಹುಳಿಯಾರು: ಹುಳಿಯಾರು ಪಟ್ಟಣ ಪಂಚಾಯಿತಿ ಕಚೇರಿ ಎದುರು ರೈತ ಸಂಘದ ಮುಖಂಡ ಚಂದ್ರಪ್ಪ ಅವರ ನೇತೃತ್ವದಲ್ಲಿ ಕಳೆದ 26 ದಿನಗಳಿಂದಲೂ ನಡೆಯುತ್ತಿದ್ದ ಅಹೋರಾತ್ರಿಯ ಧರಣಿ ಸೋಮವಾರ  ಸಂಜೆ ನಿರ್ಣಾಯಕ ಹಂತಕ್ಕೆ ತಲುಪಿತು.

​ಹುಳಿಯಾರು ಪಟ್ಟಣ ಪಂಚಾಯಿತಿ ಮುಂದೆ ರೈತ ಸಂಘದ ಚಂದ್ರಪ್ಪ ನೇತೃತ್ವದಲ್ಲಿ ಕಳೆದ 26 ದಿನಗಳಿಂದಲೂ ನಡೆಯುತ್ತಿದ್ದ ಅಹೋರಾತ್ರಿ ಧರಣಿಯನ್ನು ನಿಲ್ಲಿಸುವಂತೆ ಒತ್ತಾಯಿಸಿ, ಸೋಮವಾರ ಸಂಜೆ ಶಾಸಕ ಸಿಬಿ ಸುರೇಶ್ ಬಾಬು ಅವರು ತಹಸಿಲ್ದಾರ್ ಅವರೊಂದಿಗೆ ಸ್ಥಳಕ್ಕೆ ಆಗಮಿಸಿ ಚಂದ್ರಪ್ಪ ಅವರೊಂದಿಗೆ ಮಾತುಕತೆ ನಡೆಸಿದರು.

ಧರಣಿ ನಿರತರ ಮೂರು ಬೇಡಿಕೆಗಳು ಮತ್ತು ಅವುಗಳ ಈಡೇರಿಕೆಗೆ ಶಾಸಕರು ನೀಡಿದ ಭರವಸೆಗಳು ಹೀಗಿದೆ:

1. ಶೌಚಾಲಯದ ಸಮಸ್ಯೆ:

ಶಾಸಕರ ಭರವಸೆಯಂತೆ, ಶೌಚಾಲಯದ ನಿರ್ವಹಣೆ ಮಾಡಲು ಈಗಾಗಲೇ ಮುಂದಾಗಿದ್ದು, ನಾಳೆಯಿಂದಲೇ  ಅದು ಪ್ರಾರಂಭವಾಗಲಿದೆ ಎಂದರು.

2. ಸಂತೆ ಸ್ಥಳಾಂತರ:

ವಾರಕ್ಕೊಮ್ಮೆ ನಡೆಯುವ ಸಂತೆಯನ್ನು ಎಪಿಎಂಸಿ ಮುಂಭಾಗದಲ್ಲಿರುವ ಜಾಗಕ್ಕೆ ಸ್ಥಳಾಂತರಿಸಲು ಈಗಾಗಲೇ ಜಾಗವನ್ನು ಗುರುತಿಸಲಾಗಿದ್ದು ಗುರುತಿಸಲಾದ ಜಾಗವನ್ನು ವ್ಯಾಪಾರದಾರರಿಗೆ ಅನುವು ಮಾಡಿಕೊಡಲು ಮಣ್ಣು ಹೊಡೆಸಿ ಸಮತಟ್ಟು ಮಾಡಿಸಲಾಗುತ್ತಿದ್ದು, ಇದು ಮುಗಿಯಲು ಇನ್ನೂ ಎರಡು ದಿನಗಳು ಬೇಕಾಗುತ್ತದೆ ಎಂದರು.

               ಸಮತಟ್ಟುಗೊಳಿಸಿದ ತಕ್ಷಣವೇ ತಾವೇ ಖುದ್ದಾಗಿ ತಹಸೀಲ್ದಾರ್ ಅವರೊಂದಿಗೆ ಸ್ಥಳದಲ್ಲಿಯೇ ನಿಂತು ಮಾರ್ಕಿಂಗ್ ಮಾಡಿಸಿ ಸಂತೆ ವ್ಯಾಪಾರಿಗಳಿಗೆ ಹಂಚಿಕೆ ಮಾಡಿಸಿಕೊಡುವೆ ಎಂದರು.ಅಕಸ್ಮಾತ್ ಈ ಬುಧವಾರದೊಳಗೆ ಕಾಮಗಾರಿ ಮುಗಿಯದಿದ್ದಲ್ಲಿ, ಈ ವಾರಕ್ಕೆ ಮಾತ್ರ ಪ್ರಸ್ತುತ ಸ್ಥಳದಲ್ಲಿ ಸಂತೆ ನಡೆಯಲಿದೆ. ಆದರೆ, ಮುಂದಿನ ಗುರುವಾರದಿಂದ ಕಡ್ಡಾಯವಾಗಿ ಹೊಸ ಜಾಗದಲ್ಲಿಯೇ ಸಂತೆ ನಡೆಸಲು ಸೂಚಿಸಲಾಗಿದ್ದು, ಅದು ನಿಶ್ಚಿತವಾಗಿದ್ದು , ಈ ಬಗ್ಗೆ ಯಾವುದೇ ಗೊಂದಲಕ್ಕೆ ಅವಕಾಶ ಬೇಡ ಎಂದರು.

3. ತ್ಯಾಜ್ಯ ವಿಲೇವಾರಿ ಘಟಕ (ಕಸ ವಿಲೇವಾರಿ ಘಟಕ):

ಪ್ರಮುಖ ಬೇಡಿಕೆಯಾದ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಸಂಬಂಧಿಸಿದಂತೆ, ತಹಸಿಲ್ದಾರ್ ಅವರು ಕಂದಾಯ ಇಲಾಖೆ ಸಿಬ್ಬಂದಿಯೊಂದಿಗೆ ಹುಳಿಯಾರು ಹೋಬಳಿ ವ್ಯಾಪ್ತಿಯಲ್ಲಿ 80ಕ್ಕೂ ಹೆಚ್ಚು ಸ್ಥಳಗಳನ್ನು ಪರಿಶೀಲಿಸಿದ್ದು, ಇದೀಗ ಕಡೆಯದಾಗಿ ನಾಲ್ಕು ಎಕರೆ ಜಾಗವನ್ನು ಗುರುತಿಸಿದ್ದಾರೆ.ಗುರುತಿಸಿದ ಜಾಗಕ್ಕೆ ಮಂಗಳವಾರದಂದು ಎಸಿ ಹಾಗೂ ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು, ಇನ್ನು 10 ದಿನಗಳ ಒಳಗಾಗಿ ಆರ್.ಟಿ.ಸಿ ಯಲ್ಲಿ ಎಂಟ್ರಿ ಮಾಡಿಸಲಾಗುವುದು ಎಂದರು.

            ಒಮ್ಮೆ ಜಾಗ ಗುರುತಾದ ನಂತರ, ಮುಂದಿನ ಆರು ತಿಂಗಳ ಒಳಗಾಗಿ ನಗರೊತ್ಥಾನ ಇಲಾಖೆಯಿಂದ ಸಂಪೂರ್ಣ ಕಾಮಗಾರಿ ಮುಗಿಸಿ, ಘಟಕ ಕಾರ್ಯಾರಂಭ ಮಾಡುತ್ತದೆ ಎಂದು ಶಾಸಕರು ಭರವಸೆ ನೀಡಿದರು.

ಎಲ್ಲಾ ಮೂರು ಬೇಡಿಕೆಗಳನ್ನು ಇವಾಗಲೇ ಶೇಕಡ 80 ರಷ್ಟು ಮುಗಿಸಿದ್ದು ಇನ್ನು 10 ದಿನದ ಒಳಗೆ ನಿಮ್ಮ ಬೇಡಿಕೆಗಳನ್ನು ಸಂಪೂರ್ಣವಾಗಿ ಈಡೇರಿಸಲಿದ್ದು, ಈ ಹಿನ್ನೆಲೆಯಲ್ಲಿ ಧರಣಿಯನ್ನು ವಾಪಸ್ ತೆಗೆದುಕೊಳ್ಳುವಂತೆ ಶಾಸಕರು ವಿನಂತಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ರೈತ ಸಂಘದ ಮುಖಂಡ ಚಂದ್ರಪ್ಪ ಅವರು, ಈಗಾಗಲೇ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ನನಗೆ ಗಮನವಿದೆ.  ಧರಣಿ ವಾಪಸ್ ತೆಗೆದುಕೊಳ್ಳುವ ಬಗ್ಗೆ ಇಂದು (ಮಂಗಳವಾರ) ನನಗೆ ಬೆಂಬಲ ನೀಡಿರುವ ಎಲ್ಲಾ ಸಂಘಟನೆಗಳೊಂದಿಗೆ ಚರ್ಚಿಸಿ, ಎಲ್ಲರ ಅಭಿಪ್ರಾಯದೊಂದಿಗೆ ಮುಂದಿನ ನಿರ್ಧಾರವನ್ನು ಪ್ರಕಟಿಸುವುದಾಗಿ ತಿಳಿಸಿದರು. ಈ ಮೂಲಕ, ರೈತ ಸಂಘದ ಧರಣಿಯ ಅಂತಿಮ ತೀರ್ಮಾನ ಇನ್ನಷ್ಟೇ ಹೊರಬೀಳಬೇಕಿದೆ.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...