ವಿಷಯಕ್ಕೆ ಹೋಗಿ

ಹುಳಿಯಾರು ಪತ್ರಕರ್ತನಿಗೆ ಮಾನವೀಯ ನೆರವು: ಮಾಜಿ ತಹಸೀಲ್ದಾರ್ ಟಿ.ಸಿ. ಕಾಂತರಾಜು ಅವರ ಮಾದರಿ ನಡೆ

ಹುಳಿಯಾರು ಪತ್ರಕರ್ತನಿಗೆ ಮಾನವೀಯ ನೆರವು: ಮಾಜಿ ತಹಸೀಲ್ದಾರ್ ಟಿ.ಸಿ. ಕಾಂತರಾಜು ಅವರ ಮಾದರಿ ನಡೆ

ಹುಳಿಯಾರು: ದೃಷ್ಟಿಹೀನತೆಯಿಂದ ಬಳಲುತ್ತಿರುವ  ಹುಳಿಯಾರಿನ ಪತ್ರಕರ್ತ ರಮೇಶ್ ಅವರಿಗೆ ಮಾಜಿ ತಹಸೀಲ್ದಾರ್ ಮತ್ತು ನಿವೃತ್ತ ಅಧಿಕಾರಿಯಾಗಿರುವ ಟಿ.ಸಿ. ಕಾಂತರಾಜು ಅವರು ಆರ್ಥಿಕ ನೆರವು ನೀಡುವ ಮೂಲಕ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ. 

ಇತ್ತೀಚೆಗೆ ನಡೆದ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಬಂದಿದ್ದ ಗೌರವ ಸಂಭಾವನೆಗೆ ಇನ್ನಷ್ಟು ಮೊತ್ತವನ್ನು ಸೇರಿಸಿ, ರಮೇಶ್ ಅವರ ಚಿಕಿತ್ಸೆಗೆ ನೀಡಿದ್ದಾರೆ.

ತುಮಕೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ಚೀನಿ ಪುರುಷೋತ್ತಮ್ ಅವರು ಈ ಕುರಿತು ಮಾತನಾಡಿ, ಟಿ.ಸಿ. ಕಾಂತರಾಜು ಅವರು ಇತ್ತೀಚೆಗೆ ನಡೆದ ಪತ್ರಕರ್ತರ ಸಂಘದ ಚುನಾವಣೆಗೆ ಚುನಾವಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಈ ಕಾರ್ಯಕ್ಕೆ ಅವರಿಗೆ ನೀಡಿದ ಗೌರವ ಧನವನ್ನು ಸ್ವೀಕರಿಸಲು ಮೊದಲು ನಿರಾಕರಿಸಿದ್ದ ಅವರು, ರಾಜ್ಯ ಚುನಾವಣಾಧಿಕಾರಿಗಳ ಸೂಚನೆಯ ಮೇರೆಗೆ ಸಂಭಾವನೆ ಪಡೆದಿದ್ದರು. ಆದರೆ, ಆ ಸಂಪೂರ್ಣ ಸಂಭಾವನೆಯ ಹಣಕ್ಕೆ ಮತ್ತಷ್ಟು ಮೊತ್ತವನ್ನು ಸೇರಿಸಿ, ಅದನ್ನು ರಮೇಶ್ ಅವರ ಚಿಕಿತ್ಸೆಗಾಗಿ ನೀಡಿ ಮಾದರಿಯಾಗಿದ್ದಾರೆ ಎಂದು ಶ್ಲಾಘಿಸಿದರು.

ಮಾಜಿ ತಹಸೀಲ್ದಾರರಾದ ಕಾಂತರಾಜು ಅವರು ಮೊದಲಿನಿಂದಲೂ ಪತ್ರಕರ್ತರ ಸ್ನೇಹಿತರಾಗಿದ್ದು, ಬಡವರಿಗೆ ಮತ್ತು ಅಸಹಾಯಕರಿಗೆ ಸಹಾಯ ಮಾಡುವ ಉದಾರ ಗುಣವನ್ನು ಹೊಂದಿದ್ದಾರೆ ಎಂದು ಪುರುಷೋತ್ತಮ್  ತಿಳಿಸಿದರು.

ಪ್ರಜಾಪ್ರಗತಿ ಪತ್ರಿಕೆಯ ಸಹ ಸಂಪಾದಕರೂ ಮತ್ತು ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯರೂ ಆದ ಟಿ.ಎನ್. ಮಧುಕರ್ ಅವರು ಸಹ ರಮೇಶ್‌ ಅವರಿಗೆ ಧನ ಸಹಾಯ ಮಾಡಿದರು. ಅಷ್ಟೇ ಅಲ್ಲದೆ, ರಮೇಶ್ ಅವರ ಕಣ್ಣಿನ ಸಮಸ್ಯೆಗೆ ಚಿಕಿತ್ಸೆ ಒದಗಿಸಲು ಮಧುಕರ್ ಅವರು ಪಾವಗಡದ ಸ್ವಾಮಿ ಜಪಾನಂದಜಿ ಮಹಾರಾಜ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಅಗತ್ಯ ವ್ಯವಸ್ಥೆ ಮಾಡಿದರು. 

ಸ್ವಾಮೀಜಿ ಅವರು ಸಹ ಅಗತ್ಯ ಚಿಕಿತ್ಸೆಯನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.

ಶಾಶ್ವತ ನೆರವಿಗೆ ಸಂಘದ ಚಿಂತನೆ :ಈ ಸಂದರ್ಭದಲ್ಲಿ ಮಾತನಾಡಿದ ಹುಳಿಯಾರಿನ ಪತ್ರಕರ್ತ ಕಿರಣ್ ಕುಮಾರ್ , "ಕಾಂತರಾಜು ಮತ್ತು ಮಧುಕರ್ ಅವರ ನೆರವು ಗ್ರಾಮೀಣ ಪತ್ರಕರ್ತರಿಗೆ 'ಯಾರೋ ಒಬ್ಬರು ಆಸರೆಯಾಗಿರುತ್ತಾರೆ' ಎಂಬ ದೊಡ್ಡ ಭರವಸೆ ಮತ್ತು ನೈತಿಕ ಸ್ಥೈರ್ಯವನ್ನು ನೀಡಿದೆ. ಇದುವರೆಗೂ ಗ್ರಾಮೀಣ ಪತ್ರಕರ್ತರ ಕಷ್ಟವು ಅರಣ್ಯರೋದನ ಆಗಿತ್ತು. ಆದರೆ ಜಿಲ್ಲೆಯಿಂದ ಬಂದ ಎಲ್ಲ ಪತ್ರಕರ್ತರು ಸಹಾಯ ಹಸ್ತ ಚಾಚುತ್ತಿರುವುದು ವೃತ್ತಿಯಲ್ಲಿ ಮತ್ತಷ್ಟು ಕ್ರಿಯಾಶೀಲರಾಗಿ ಕೆಲಸ ಮಾಡಲು ಪ್ರೇರಣೆ ನೀಡಿದೆ ಎಂದರು.

ಪತ್ರಕರ್ತ ರಮೇಶ್ ಅವರ ಕುಟುಂಬಕ್ಕೆ ಕೇವಲ ನಗದು ಸಹಾಯ ನೀಡಿದರೆ ಅದು ಶಾಶ್ವತವಾಗಿ ಉಳಿಯುವುದಿಲ್ಲ ಎಂಬ ಕಾರಣಕ್ಕೆ, ಸಂಘವು ಅವರಿಗೆ ಶಾಶ್ವತ ಜೀವನೋಪಾಯದ ಯೋಜನೆ ರೂಪಿಸಲು ಚಿಂತನೆ ನಡೆಸಿದೆ. ಪಿ.ಎಂ.ಎಫ್.ಎಂ.ಇ.ಜಿ. (PM FMEG) ಯೋಜನೆ ಅಡಿಯಲ್ಲಿ ಸ್ವ-ಉದ್ಯೋಗ ಪ್ರಾರಂಭಿಸಲು ನೆರವು ನೀಡಲು ತೀರ್ಮಾನಿಸಲಾಗಿದ್ದು, ಈ ಯೋಜನೆಗೆ ಬೇಕಾಗುವ ಡೌನ್‌ಪೇಮೆಂಟ್‌ ಹಣವನ್ನು ಹಾಲಿ ಮತ್ತು ಹೊಸ ಸದಸ್ಯರ ಸಹಾಯದಿಂದ ಸಂಗ್ರಹಿಸಿ, ರಮೇಶ್ ಕುಟುಂಬಕ್ಕೆ ಶಾಶ್ವತ ಬದುಕು ಕಲ್ಪಿಸುವುದು ಸಂಘದ ಆಶಯವಾಗಿದೆ ಎಂದು ಕಿರಣ್ ಕುಮಾರ್ ತಿಳಿಸಿದರು.

ಈ ಸಂದರ್ಭದಲ್ಲಿ ತುಮಕೂರು ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಚೀನಿ ಪುರುಷೋತ್ತಮ್, ಟಿ.ಎನ್. ಮಧುಕರ್, ಚಿಕ್ಕನಾಯಕನಹಳ್ಳಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಯೋಗೇಶ್,ಚಿಕ್ಕಣ್ಣ ಸೇರಿದಂತೆ ಹುಳಿಯಾರಿನ ಪತ್ರಕರ್ತರುಗಳಾದ ನರೇಂದ್ರ ಬಾಬು, ಕಿರಣ್‌, ಆರ್.ಸಿ. ಮಹೇಶ್, ದೇವರಾಜ್,ಶೇಖರ್‌, ಮತಿಘಟ್ಟ ಆನಂದ್ ಮುಂತಾದವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...