ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ವಿಶ್ವ ಏಡ್ಸ್ ದಿನಾಚರಣೆ–2025ರ ಅಂಗವಾಗಿ ಇಂದು ಆರೋಗ್ಯ ಇಲಾಖೆಯ ವತಿಯಿಂದ ಜಾಗೃತಿ ಬೈಕ್ ರ‍್ಯಾಲಿ ನಡೆಯಿತು. ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಸಾರ್ವಜನಿಕ ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರು ಮತ್ತು ಸಿಬ್ಬಂದಿ ವರ್ಗದವರು ಸೇರಿಕೊಂಡು ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಸಾರ್ವಜನಿಕರಲ್ಲಿ ಏಡ್ಸ್ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಈ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮಕ್ಕೆ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಉಮೇಶ್ ಅವರು ಚಾಲನೆ ನೀಡಿದರು. ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶೇಷಾದ್ರಿ ಡಿ.ಎನ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ವೆಂಕಟರಾಮಯ್ಯ, ಐಸಿಟಿಸಿ ವಿಭಾಗದ ನವೀನ್, ಫಾರ್ಮಸಿ ಅಧಿಕಾರಿ ನಿರೂಪ್ ರಾವತ್ ಸೇರಿದಂತೆ ಹಲವಾರು ವೈದ್ಯಕೀಯ ಸಿಬ್ಬಂದಿ ಭಾಗವಹಿಸಿ ‘ಏಡ್ಸ್ ಮುಕ್ತ ಸಮಾಜ’ಕ್ಕಾಗಿ ಸಾರ್ವಜನಿಕರಿಗೆ ಜಾಗೃತಿ ಸಂದೇಶ ಹಂಚಿದರು.
ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ