ವಿಷಯಕ್ಕೆ ಹೋಗಿ

ಭಗೀರಥ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ


ಭಗೀರಥ ಸಂಘದಿಂದ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ


 ಪರೀಕ್ಷೆಗೂ ಮುನ್ನವೇ ಪುರಸ್ಕಾರ ನೀಡಿದರೆ ಮಕ್ಕಳಲ್ಲಿ ಹೆಚ್ಚುವರಿ ಸ್ಪೂರ್ತಿ: ಶಾಸಕ ಸುರೇಶ್ ಬಾಬು


ಸಮುದಾಯದ ಒಗ್ಗಟ್ಟೇ ಅಭಿವೃದ್ಧಿಗೆ ದಾರಿ ಎಂದು ವೆಂಕೋಬ ಕರೆ

ಹುಳಿಯಾರು: ಚಿಕ್ಕನಾಯಕನಹಳ್ಳಿ ತಾಲೂಕು ಭಗೀರಥ ನೌಕರರ ಕ್ಷೇಮಾಭಿವೃದ್ಧಿ ಸಂಘ, ಶ್ರೀಭಗೀರಥ ವಿದ್ಯಾನಿಧಿ ಸೇವಾ ಚಾರಿಟಬಲ್ ಟ್ರಸ್ಟ್ ಹಾಗೂ ತಾಲೂಕು ಭಗೀರಥ ಉಪ್ಪಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಭಗೀರಥ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭವು ಹುಳಿಯಾರಿನ ಕೋಡಿಪಾಳ್ಯದ ಸಮೀಪದ ಶ್ರೀ ಸೇವಾಲಾಲ್ ಸಾಂಸ್ಕೃತಿಕ ಸದನದಲ್ಲಿ ಭಾನುವಾರ ಅದ್ಧೂರಿಯಾಗಿ ಜರುಗಿತು.

ಕಾರ್ಯಕ್ರಮದಲ್ಲಿ ಹೊಸದುರ್ಗ ಭಗೀರಥ ಪೀಠದ ಡಾ. ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಉದ್ಘಾಟನೆಯನ್ನು ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ್ ನೆರವೇರಿಸಿದರು.

ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿದ ಶಾಸಕ ಸಿ.ಬಿ. ಸುರೇಶ್ ಬಾಬು ಅವರು, ಮಕ್ಕಳಲ್ಲಿ ಸ್ಪೂರ್ತಿ ಮತ್ತು ಆತ್ಮವಿಶ್ವಾಸ ಹೆಚ್ಚಿಸಲು ಶೈಕ್ಷಣಿಕ ಸಾಧನೆಗೆ ನೀಡುವ ಪುರಸ್ಕಾರವು ಅತ್ಯುತ್ತಮ ವೇದಿಕೆ ಎಂದು ಹೇಳಿದರು. ಸಾಮಾನ್ಯವಾಗಿ ಪರೀಕ್ಷೆಗಳು ಮುಗಿದು ಫಲಿತಾಂಶ ಬರುವಂತೆ ಮಾಡಲಾಗುವ ಪುರಸ್ಕಾರ ಕಾರ್ಯಕ್ರಮಗಳನ್ನು, ಶೈಕ್ಷಣಿಕ ವರ್ಷ ಆರಂಭದಲ್ಲಿಯೇ ಆಯೋಜಿಸುವುದರಿಂದ ವಿದ್ಯಾರ್ಥಿಗಳಲ್ಲಿ ಸಂಪೂರ್ಣ ವರ್ಷದವರೆಗೆ ಉತ್ತಮ ಸಾಧನೆ ಮಾಡುವ ಪ್ರೇರಣೆ ಮೂಡುತ್ತದೆ ಎಂದು ಅಭಿಪ್ರಾಯಪಟ್ಟರು. ಮಕ್ಕಳು ದಿನಕ್ಕೆ ಕೇವಲ ಆರು ಗಂಟೆಗಳು ಶಾಲೆಯಲ್ಲಿ ಇರುತ್ತಾರೆ. ಉಳಿದ ಸಮಯ ಮನೆಯಲ್ಲಿ ಇರುತ್ತಾರೆ. ಪೋಷಕರ ನಡವಳಿಕೆ, ಮಾತನಾಡುವ ರೀತಿ ಮತ್ತು ಬದುಕಿನ ಮೌಲ್ಯಗಳೇ ಮಕ್ಕಳ ಭವಿಷ್ಯಕ್ಕೆ ದಾರಿದೀಪವಾಗಬೇಕು ಎಂದು ಅವರು ಪೋಷಕರ ಜವಾಬ್ದಾರಿಯನ್ನು ನೆನಪಿಸಿದರು.

ಸಮಾಜದ ಶೈಕ್ಷಣಿಕ ಮತ್ತು ಸಮಗ್ರ ಅಭಿವೃದ್ಧಿಗಾಗಿ ತಮ್ಮ ಶಾಸಕರ ನಿಧಿಯಿಂದ ಈಗಾಗಲೇ ₹50 ಲಕ್ಷ ಬಿಡುಗಡೆ ಮಾಡಿರುವುದಾಗಿ ಸುರೇಶ್ ಬಾಬು ತಿಳಿಸಿದರು. ಭಗೀರಥ ಸಮುದಾಯದ ಜನಸಂಖ್ಯೆ ಹೆಚ್ಚಿರುವ ಪ್ರದೇಶಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ನಿಗಮದ ಅಧ್ಯಕ್ಷರಿಗೆ ಮನವಿ ಮಾಡಿರುವುದಾಗಿ ಹೇಳಿದರು. ಹುಳಿಯಾರಿನ ಪೊಲೀಸ್ ಸರ್ಕಲ್‌ ಬಳಿ ಭಗೀರಥ ಪೀಠದ ಪುತ್ಥಳಿ ಮತ್ತು ದಾರ್ಶನಿಕರ ಪ್ರತಿಮೆ ಅನಾವರಣದ ಕೆಲಸ ಕೂಡ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ತಿಳಿಸಿದರು. ರಾಜಕೀಯದಿಂದ ಜಾತ್ಯಾತೀತ ವಾತಾವರಣಕ್ಕೆ ಹಾನಿಯುಂಟಾಗುತ್ತಿರುವ ಹಿನ್ನೆಲೆಯಲ್ಲಿ, ಸಮಾಜದ ಎಲ್ಲಾ ವರ್ಗಗಳು ಪರಸ್ಪರ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಮತ್ತು ದಾರ್ಶನಿಕರ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ರಾಜ್ಯ ಉಪ್ಪಾರ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕೋಬ ಅವರು ಭಗೀರಥ ಭಾವಚಿತ್ರವನ್ನು ಅನಾವರಣ ಮಾಡಿ ಮಾತನಾಡಿ, ಸಮುದಾಯದ ಬಲವೇ ಸಂಘಟನೆ ಎಂದು ಹೇಳಿದರು. ಸಮುದಾಯಕ್ಕೆ ನಾವು ಏನು ಕೊಡುಗೆ ನೀಡಬೇಕು ಎಂಬುದರ ಬಗ್ಗೆ ಮೊದಲಿಗೆ ಯೋಚಿಸಬೇಕು. ರಾಜಕೀಯ ಅಥವಾ ವೈಯಕ್ತಿಕ ಭಿನ್ನಾಭಿಪ್ರಾಯಗಳು ಸಮುದಾಯದಲ್ಲಿ ಬಿರುಕುಂಟು ಮಾಡಬಾರದು. ಒಗ್ಗಟ್ಟೇ ನಮಗೆ ಹಕ್ಕುಗಳನ್ನು ತಂದುಕೊಡಬಲ್ಲ ಏಕೈಕ ಶಕ್ತಿ ಎಂದು ಹೇಳಿದರು. ಮಕ್ಕಳಿಗೆ ಶೈಕ್ಷಣಿಕ ಅವಕಾಶಗಳನ್ನು ಕಲ್ಪಿಸುವಲ್ಲಿ ಸರ್ಕಾರ ಮತ್ತು ನಿಗಮ ನೀಡುವ ಸೌಲಭ್ಯಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು ಎಂದೂ ಅವರು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಲ್ಲೇಶ್ ಅವರು ಮಾತನಾಡಿ, ಭಗೀರಥ ಸಮುದಾಯದ ಮಕ್ಕಳು IAS, KAS ಮೊದಲಾದ ಉನ್ನತ ಹುದ್ದೆಗಳನ್ನು ಗುರಿಯಾಗಿಸಿಕೊಂಡು ಓದಬೇಕು ಎಂಬುದು ಸಮುದಾಯದ ಆಶಯ ಎಂದು ಹೇಳಿದರು.  ಮಕ್ಕಳು ಉತ್ತಮ ವಿದ್ಯಾವಂತರಾಗಿ ಸಮುದಾಯಕ್ಕೆ ಮಾನ–ಗೌರವ ತರಬೇಕು ಎಂಬುದೇ ಕನಸು ಎಂದ ಅವರು ಸಮುದಾಯ ಮೊದಲು ಒಗ್ಗಟ್ಟಾಗಬೇಕು, ಸಂಘಟನೆ ಬಲವಾಗಬೇಕು, ಸರ್ಕಾರದ ಸೌಲಭ್ಯಗಳು ಸಮುದಾಯದ ಪ್ರತಿಯೊಬ್ಬರಿಗೂ ತಲುಪುವಂತೆ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.

ಧಾರವಾಡದ ಕ್ಲಾಸಿಕ್ ಸಮೂಹ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಲಕ್ಷ್ಮಣ್ ಎಸ್. ಉಪ್ಪಾರ್ ಅವರು ಈ ಸಂದರ್ಭದಲ್ಲಿ ಉಪನ್ಯಾಸ ನೀಡಿ, ಭಗೀರಥ ಸಮಾಜದ ಸಾಂಸ್ಕೃತಿಕ ಮತ್ತು ಆರ್ಥಿಕ ಪುನರುತ್ಥಾನದ ಅವಶ್ಯಕತೆ ಕುರಿತು ಪ್ರಸ್ತಾಪಿಸಿದರು.

ಸಭೆಯ ಅಧ್ಯಕ್ಷತೆಯನ್ನು ತಾಲ್ಲೂಕು ಭಗೀರಥ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ನಾಗೇಂದ್ರಪ್ಪ ವಹಿಸಿದ್ದರು. ತುಮಕೂರು ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಮಂಜುನಾಥ್, ತಾಲೂಕು ಸಂಘದ ಅಧ್ಯಕ್ಷ ಹನುಮಂತಯ್ಯ, ಡಾ. ದೇವರಾಜು, ಸಂಘದ ಖಜಾಂಚಿ ರವೀಂದ್ರನಾಥ್, ತಮ್ಮಡಿಹಳ್ಳಿ ಶಿವಯ್ಯ, ನಂದಿಹಳ್ಳಿ ಸಿದ್ಬಸವಯ್ಯ, ಹೊಸಹಳ್ಳಿ ರಾಜಣ್ಣ, ಗೂಬೆಹಳ್ಳಿ ಬಸವರಾಜು, ರಂಗಾಪುರ ರಂಗಧಾಮಯ್ಯ, ಕಲ್ಲಹಳ್ಳಿ ನಾರಾಯಣಸ್ವಾಮಿ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.

ಕಾರ್ಯಕ್ರಮದ ವೇಳೆ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಭಗೀರಥ ವಿದ್ಯಾನಿಧಿಯಿಂದ ವಿದ್ಯಾರ್ಥಿವೇತನ ವಿತರಿಸಲಾಯಿತು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಉನ್ನತ ಶಿಕ್ಷಣ ಪೂರೈಸಿದ ವಿದ್ಯಾರ್ಥಿಗಳು ಹಾಗೂ ನಿವೃತ್ತ ಮತ್ತು ನೂತನ ನೌಕರರು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನಿಸಲಾಯಿತು.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...