ವಿಷಯಕ್ಕೆ ಹೋಗಿ

ಹುಳಿಯಾರು ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಪ್ರೀತಿ ರಾಘವೇಂದ್ರ ಅವಿರೋಧ ಆಯ್ಕೆ

ಹುಳಿಯಾರು ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಪ್ರೀತಿ ರಾಘವೇಂದ್ರ ಅವಿರೋಧ ಆಯ್ಕೆ


ರತ್ನಮ್ಮ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆ; ಶಾಸಕ ಸಿ.ಬಿ. ಸುರೇಶ್‌ ಬಾಬು ಸಮ್ಮುಖದಲ್ಲಿ ನಡೆದ ಪ್ರಕ್ರಿಯೆ

ಹುಳಿಯಾರು: ಹುಳಿಯಾರು ಪಟ್ಟಣ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಪ್ರೀತಿ ರಾಘವೇಂದ್ರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದಿನ ಅಧ್ಯಕ್ಷರಾಗಿದ್ದ ರತ್ನಮ್ಮ ರೇವಣ್ಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಪ್ರೀತಿ ರಾಘವೇಂದ್ರ ಅವರು ಏಕೈಕ ಅಭ್ಯರ್ಥಿಯಾಗಿ ಕಣದಲ್ಲಿದ್ದು, ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿಯಾಗಿದ್ದ ಚಿಕ್ಕನಾಯಕನಹಳ್ಳಿ ತಹಸಿಲ್ದಾರ್ ಕೆ. ಪುರಂದರ್ ಅವರು ಘೋಷಿಸಿದರು.

ಚುನಾವಣಾ ಪ್ರಕ್ರಿಯೆ ವಿವರ : ಅಧಿಕೃತ ವೇಳಾಪಟ್ಟಿಯಂತೆ, ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 12.00 ಗಂಟೆಯವರೆಗೆ ನಾಮಪತ್ರ ಸಲ್ಲಿಕೆಗೆ ಸಮಯ ನಿಗದಿಪಡಿಸಲಾಗಿತ್ತು. ಚುನಾವಣೆ ಹಿನ್ನೆಲೆಯಲ್ಲಿ ಪ್ರವಾಸಕ್ಕೆ ತೆರಳಿದ್ದ ಸದಸ್ಯರುಗಳು, ಶಾಸಕ ಸಿ.ಬಿ. ಸುರೇಶ್ ಬಾಬು ಅವರೊಂದಿಗೆ ಸುಮಾರು 11.40ರ ಸುಮಾರಿಗೆ ಪಟ್ಟಣ ಪಂಚಾಯಿತಿಗೆ ಆಗಮಿಸಿದರು. ಈ ವೇಳೆ, ಪ್ರೀತಿ ರಾಘವೇಂದ್ರ ಅವರು ಮಾತ್ರ ನಾಮಪತ್ರ ಸಲ್ಲಿಸಿದರು.

ಮಧ್ಯಾಹ್ನ 12.00 ಗಂಟೆಗೆ ಸಭೆ ಪ್ರಾರಂಭವಾಯಿತು. 12.10 ಗಂಟೆಯವರೆಗೆ ನಾಮಪತ್ರಗಳ ಪರಿಶೀಲನೆ ನಡೆಯಿತು. ಮಧ್ಯಾಹ್ನ 12.11 ರಿಂದ 12.25 ಗಂಟೆಯವರೆಗೆ ಉಮೇದುವಾರಿಕೆ ಹಿಂಪಡೆಯಲು ಅವಕಾಶ ನೀಡಲಾಗಿತ್ತು. ಆದರೆ, ಪ್ರೀತಿ ರಾಘವೇಂದ್ರ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ, ಕಣದಲ್ಲಿ ಅವರೊಬ್ಬರೇ ಉಳಿದರು. ಹೀಗಾಗಿ, ಚುನಾವಣಾಧಿಕಾರಿ ಕೆ. ಪುರಂದರ ಅವರು ಪ್ರೀತಿ ರಾಘವೇಂದ್ರ ಅವರನ್ನು ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿರುವುದಾಗಿ ಘೋಷಿಸಿದರು

ಈ ಆಯ್ಕೆಯೊಂದಿಗೆ ಅಧ್ಯಕ್ಷ ಸ್ಥಾನ ಯಾರಿಗೆ ಸಿಗಲಿದೆ ಎಂಬ ಪಟ್ಟಣದ ಜನರ ಕುತೂಹಲಕ್ಕೆ ತೆರೆ ಬಿದ್ದಿತು. ಈ ಬಾರಿ ಕೂಡ ಮೈತ್ರಿಕೂಟ ಅಧಿಕಾರಕ್ಕೆ ಬಂದಿದ್ದು, ಬಿಜೆಪಿ ಪಕ್ಷದ ಮೂವರು ಸದಸ್ಯರು, ಕಾಂಗ್ರೆಸ್ ಪಕ್ಷದ ನಾಲ್ವರು ಸದಸ್ಯರು ಹಾಗೂ ಜೆಡಿಎಸ್ ಪಕ್ಷದ ಇಬ್ಬರು ಸದಸ್ಯರು ಸೇರಿ ಒಟ್ಟು 9 ಸದಸ್ಯರು ಪ್ರೀತಿ ರಾಘವೇಂದ್ರ ಅವರ ಅವಿರೋಧ ಆಯ್ಕೆಗೆ ಬೆಂಬಲ ಸೂಚಿಸಿದರು.

ಮಾಜಿ ಅಧ್ಯಕ್ಷೆ ರತ್ನಮ್ಮ, ಹೇಮಂತ್ ಕುಮಾರ್, ಬಿ.ಬಿ. ಫಾತಿಮಾ, ಉಪಾಧ್ಯಕ್ಷೆ ಕಾವ್ಯಾರಾಣಿ, ಮಂಜಾ ನಾಯ್ಕ, ಅಬೂಬುಕರ್ ಸಿದ್ದಿಕ್, ಮಹಮ್ಮದ್ ಜುಬೇರ್, ಎಸ್.ಆರ್.ಎಸ್. ದಯಾನಂದ್, ಬಡಿಗಿರಾಜು ಸೇರಿದಂತೆ ಎಲ್ಲ ಸದಸ್ಯರುಗಳು ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು. ಪ್ರೀತಿ ರಾಘವೇಂದ್ರ ಅವರ ನಾಮಪತ್ರಕ್ಕೆ ಹೇಮಂತ್ ಕುಮಾರ್ ಅವರು ಸೂಚಕರಾಗಿದ್ದು, ಅಬೂಬುಕರ್ ಸಿದ್ದಿಕ್ ಅವರು ಅನುಮೋದಕರಾಗಿದ್ದರು.

ನೂತನ ಅಧ್ಯಕ್ಷರ ಪ್ರತಿಕ್ರಿಯೆ : ಅವಿರೋಧವಾಗಿ ಆಯ್ಕೆಯಾದ ಬಳಿಕ ಮಾತನಾಡಿದ ನೂತನ ಅಧ್ಯಕ್ಷೆ ಪ್ರೀತಿ ರಾಘವೇಂದ್ರ, ತಮ್ಮನ್ನು ಬೆಂಬಲಿಸಿದ ಎಲ್ಲ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು. ನನ್ನನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿಕೊಳ್ಳಲು ಶಾಸಕ ಸಿ.ಬಿ. ಸುರೇಶ್ ಬಾಬು ಹಾಗೂ ಬೆಂಬಲಿಸಿದ ಸದಸ್ಯರುಗಳ ಸಹಕಾರವೇ ಪ್ರಮುಖ ಕಾರಣವಾಗಿದೆ ಎಂದು ಹೇಳಿದ ಅವರು, ಕೊನೆಯ ಕ್ಷಣದವರೆಗೂ ತಮ್ಮೊಂದಿಗೆ ನಿಂತು ಸಹಕರಿಸಿದ ಎಲ್ಲಾ ಸದಸ್ಯರು ಹಾಗೂ ಕಾರ್ಯಕರ್ತರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದರು. ಮುಂದಿನ ದಿನಗಳಲ್ಲಿ ಎಲ್ಲರೂ ಒಟ್ಟಾಗಿ, ಜೊತೆಯಾಗಿ ಕೆಲಸ ಮಾಡಿ ಪಟ್ಟಣದ ಅಭಿವೃದ್ಧಿಗೆ ಶ್ರಮಿಸುವ ಸಂಕಲ್ಪವನ್ನು ಅವರು ವ್ಯಕ್ತಪಡಿಸಿದರು.

ಶಾಸಕ ಸಿ.ಬಿ. ಸುರೇಶ್ ಬಾಬು ಹೇಳಿಕೆ : ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಿ.ಬಿ. ಸುರೇಶ್ ಬಾಬು, ಈ ಅಧ್ಯಕ್ಷರ ಆಯ್ಕೆಯು ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ನಡೆದಿದ್ದು, ಹುಳಿಯಾರು ಪಟ್ಟಣದ ಸಮಗ್ರ ಅಭಿವೃದ್ಧಿಗಾಗಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕೆಂದು ಕರೆ ನೀಡಿದರು. 

ಚುನಾವಣಾ ಪ್ರಕ್ರಿಯೆಯ ವೇಳೆ ಚುನಾವಣಾಧಿಕಾರಿ ಹಾಗೂ ಚಿಕ್ಕನಾಯಕನಹಳ್ಳಿ ತಹಸಿಲ್ದಾರ್ ಕೆ. ಪುರಂದರ್, ಸಾಲಾಪುರ ಪ್ರತಾಪ್, ಶ್ರೀನಿವಾಸ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಲ್.ವಿ. ಮಂಜುನಾಥ್, ಕಂದಾಯ ಅಧಿಕಾರಿ ಶ್ರುತಿ ಸೇರಿದಂತೆ ಇತರ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.



ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...