ರೆವರೆಂಡ್ ಫಾದರ್ ಸುಮಂತ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ವಿಶೇಷ ಪ್ರಾರ್ಥನಾ ಸಭೆಯಲ್ಲಿ ನೂರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಪ್ರೀತಿ ರಾಘವೇಂದ್ರ ಅವರು ಸಾರ್ವಜನಿಕರಿಗೆ ಕ್ರಿಸ್ಮಸ್ ಶುಭಾಶಯಗಳು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು "ಶಾಸಕರ ಹಾಗೂ ಸದಸ್ಯರ ಬೆಂಬಲ ಮತ್ತು ಏಸುಕ್ರಿಸ್ತನ ಆಶೀರ್ವಾದದ ಫಲವಾಗಿ ಚುನಾವಣೆಯಲ್ಲಿ ಸುಲಭವಾಗಿ ಗೆಲುವು ಸಾಧಿಸುವ ಮೂಲಕ ಇಂದು ನಾನು ಪಟ್ಟಣ ಪಂಚಾಯಿತಿ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ನೆನೆದರು.
ಇದೇ ಸಂದರ್ಭದಲ್ಲಿ ಅವರು ಕೇಕ್ ಕತ್ತರಿಸಿ ಎಲ್ಲರಿಗೂ ಹಬ್ಬದ ಶುಭ ಹಾರೈಕೆ ಕೋರಿದರು.
ಉಡುಗೊರೆ ವಿತರಣೆ: ಕ್ರಿಸ್ಮಸ್ ಹಬ್ಬದ ನೆನಪಿನ ಕಾಣಿಕೆಯಾಗಿ ಕಾರ್ಯಕ್ರಮದಲ್ಲಿ ನೆರೆದಿದ್ದ ಸುಮಾರು 100 ರಿಂದ 150 ಮಹಿಳೆಯರಿಗೆ ಸೀರೆಗಳನ್ನು ವಿತರಿಸಲಾಯಿತು.
ಫಾದರ್ ಸುಮಂತ್ ಕುಮಾರ್ ಅವರು ಕ್ರಿಸ್ಮಸ್ ಸಂದೇಶ ನೀಡಿ ಮಾತನಾಡಿ ಕ್ರಿಸ್ಮಸ್ ಎಂಬುದು ಕೇವಲ ಸಂಭ್ರಮವಲ್ಲ, ಅದು ಪ್ರೀತಿ, ಶಾಂತಿ ಮತ್ತು ಸಹಬಾಳ್ವೆಯ ಸಂಕೇತ. ಏಸುಕ್ರಿಸ್ತರು ಜಗತ್ತಿಗೆ ನೀಡಿದ ದಯೆ ಮತ್ತು ಕರುಣೆಯ ಸಂದೇಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳೋಣ. ಈ ಪವಿತ್ರ ದಿನದಂದು ಹುಳಿಯಾರಿನ ಸಮಸ್ತ ಜನತೆಗೆ ದೇವರು ಆರೋಗ್ಯ, ಐಶ್ವರ್ಯ ಮತ್ತು ನೆಮ್ಮದಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತಾ, ಎಲ್ಲರಿಗೂ ಕ್ರಿಸ್ಮಸ್ ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯರಾದ ರಾಘವೇಂದ್ರ, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಯೋಗೇಶ್, ವರದಿಗಾರರಾದ ಕಿರಣ್ ಕುಮಾರ್, ಶೇಖರ್, ನರೇಂದ್ರಬಾಬು, ಕಾಂಗ್ರೆಸ್ ಯುವ ಮುಖಂಡ ಇಮ್ರಾಜ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ