ಹುಳಿಯಾರು ಪಟ್ಟಣದಲ್ಲಿ ಸಾರ್ವಜನಿಕ ಸಮಸ್ಯೆಗಳ ಸರಣಿ: ಮುಖ್ಯಾಧಿಕಾರಿಗೆ ನಾಗರಿಕ ಹಿತ ರಕ್ಷಣಾ ವೇದಿಕೆಯಿಂದ ಮೂರು ಮನವಿ ಪತ್ರ
ಹುಳಿಯಾರು ಪಟ್ಟಣದಲ್ಲಿ ಸಾರ್ವಜನಿಕ ಸಮಸ್ಯೆಗಳ ಸರಣಿ: ಮುಖ್ಯಾಧಿಕಾರಿಗೆ ನಾಗರಿಕ ಹಿತ ರಕ್ಷಣಾ ವೇದಿಕೆಯಿಂದ ಮೂರು ಮನವಿ ಪತ್ರ ---------- ಹುಳಿಯಾರು : ಪಟ್ಟಣದ ಬೀದಿ ಬದಿ ವ್ಯಾಪಾರಿಗಳು ಫುಟ್‌ಪಾತ್ ಮೇಲೆ ವ್ಯಾಪಾರ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಫುಟ್ಪಾತ್ ಮೇಲೆ ಸಾರ್ವಜನಿಕರಿಗೆ ಅಡ್ಡಿ ಮಾಡಿಕೊಂಡು ವ್ಯಾಪಾರ ನಡೆಸುತ್ತಿರುವ ವ್ಯಾಪಾರಿಗಳ ತೆರವು, ಪಟ್ಟಣ ಪಂಚಾಯಿತಿಯಲ್ಲಿನ ಸಿಬ್ಬಂದಿ ಕೊರತೆ ನೀಗಿಸುವುದು ಹಾಗೂ ಪ್ಲಾಸ್ಟಿಕ್ ಮುಕ್ತ ನಗರ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 'ಹುಳಿಯಾರು ನಾಗರಿಕ ಹಿತರಕ್ಷಣಾ ವೇದಿಕೆ'ಯಿಂದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ವೇದಿಕೆಯ ಪ್ರಮುಖರಾದ ರಾಮಕೃಷ್ಣಪ್ಪ ಅವರ ನೇತೃತ್ವದ ನಿಯೋಗವು ಮುಖ್ಯಾಧಿಕಾರಿ ಎಲ್.ವಿ. ಮಂಜುನಾಥ್ ಅವರನ್ನು ಭೇಟಿ ಮಾಡಿ ಮೂರು ಪ್ರತ್ಯೇಕ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಸಿತು. ಫುಟ್‌ಪಾತ್ ತೆರವಿಗೆ ಆಗ್ರಹ : ಪಟ್ಟಣದ ಬಸ್ ನಿಲ್ದಾಣ ಸೇರಿದಂತೆ ಮುಖ್ಯ ರಸ್ತೆಗಳ ಫುಟ್‌ಪಾತ್‌ಗಳ ಮೇಲೆ ವ್ಯಾಪಾರ ವಹಿವಾಟು ನಡೆಯುತ್ತಿರುವುದರಿಂದ ಸಾರ್ವಜನಿಕರ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿದೆ. ಅಲ್ಲದೆ, ವ್ಯಾಪಾರಿಗಳು ಎಲ್ಲೆಂದರಲ್ಲಿ ಕಸ ಎಸೆಯುತ್ತಿರುವುದರಿಂದ ಅಶುಚಿತ್ವ ನಿರ್ಮಾಣವಾಗುತ್ತಿದೆ. ಆದ್ದರಿಂದ ಬೀದಿ ಬದಿ ವ್ಯಾಪಾರಿಗಳಿ...