ವಿಷಯಕ್ಕೆ ಹೋಗಿ

ದೊಡ್ಡಬಿದರೆ ಗ್ರಾ.ಪಂ ವ್ಯಾಪ್ತಿಯಲ್ಲಿ ೨೭೬ ಕೋಟಿ ರೂ. ಅಭಿವೃದ್ಧಿ ಕಾಮಗಾರಿ: ಶಾಸಕ ಸಿ.ಬಿ.ಸುರೇಶ್‌ಬಾಬು

ದೊಡ್ಡಬಿದರೆ ಗ್ರಾ.ಪಂ ವ್ಯಾಪ್ತಿಯಲ್ಲಿ ೨೭೬ ಕೋಟಿ ರೂ. ಅಭಿವೃದ್ಧಿ ಕಾಮಗಾರಿ: ಶಾಸಕ ಸಿ.ಬಿ.ಸುರೇಶ್‌ಬಾಬು

ಹುಳಿಯಾರು: ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ₹೧೭೦೦ ಕೋಟಿ ಮೊತ್ತದ ಕ್ರಿಯಾಯೋಜನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೇ ಜನರ ಮನೆಬಾಗಿಲಿಗೆ ಬಂದು ಸಮಸ್ಯೆ ಆಲಿಸುವ 'ಮನೆಬಾಗಿಲಿಗೆ ಮನೆಮಗ' ಕಾರ್ಯಕ್ರಮದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಶಾಸಕ ಸಿ.ಬಿ.ಸುರೇಶ್‌ಬಾಬು ಕರೆ ನೀಡಿದರು.

ತಾಲ್ಲೂಕಿನ ದೊಡ್ಡಬಿದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸತತ ೨೫ನೇ ವಾರದ ‘ಮನೆಬಾಗಿಲಿಗೆ ಮನೆಮಗ’ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಭಿವೃದ್ಧಿಯ ಪ್ರಮುಖ ಅಂಶಗಳು:

ರೂ. ೨೭೬ ಕೋಟಿ ವೆಚ್ಚದ ಕಾಮಗಾರಿ: ದೊಡ್ಡಬಿದರೆ ಗ್ರಾ.ಪಂ ವ್ಯಾಪ್ತಿಯಲ್ಲಿ ಭದ್ರ ಮೇಲ್ದಂಡೆ ಯೋಜನೆ, ಶಾಸಕರ ಅನುದಾನ ಹಾಗೂ ಗಣಿಬಾಧಿತ ಪ್ರದೇಶಾಭಿವೃದ್ಧಿ ನಿಧಿಯಡಿ ರಸ್ತೆ, ಕಟ್ಟಡ ಮತ್ತು ಸೇತುವೆ ನಿರ್ಮಾಣ ಕಾರ್ಯಗಳು ನಡೆಯುತ್ತಿವೆ.

ಕೃಷಿ ಮತ್ತು ಶಿಕ್ಷಣಕ್ಕೆ ಒತ್ತು: ೭ ಸಾವಿರ ರೈತರಿಗೆ ತುಂತುರು ನೀರಾವರಿ ಸೆಟ್ ವಿತರಣೆ ಮಾಡಲಾಗಿದೆ. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ಶಿಬಿರ ಹಾಗೂ ಉಚಿತ ಸಿಇಟಿ/ನೀಟ್ ತರಬೇತಿ ನೀಡಲಾಗುತ್ತಿದೆ. ಕಳೆದ ಬಾರಿ ೯೪ ವಿದ್ಯಾರ್ಥಿಗಳು ಈ ತರಬೇತಿಯಿಂದ ಸರ್ಕಾರಿ ಕೋಟಾದಡಿ ಉನ್ನತ ವ್ಯಾಸಂಗಕ್ಕೆ ಆಯ್ಕೆಯಾಗಿದ್ದಾರೆ ಎಂದರು.

ಪವತಿ ಖಾತೆ ಆಂದೋಲನ:ಸಾರ್ವಜನಿಕರು ಅಲೆದಾಡುವುದನ್ನು ತಪ್ಪಿಸಲು ಕೇವಲ ೧೫ ದಿನಗಳಲ್ಲಿ ಪವತಿ ಖಾತೆ ಮಾಡಿಕೊಡುವ ವಿಶೇಷ ಅಭಿಯಾನ ಆಯೋಜಿಸಲಾಗಿದೆ.ಜನರು ಅಧಿಕಾರಿಗಳನ್ನು ಹುಡುಕಿಕೊಂಡು ಅಲೆದಾಡುವುದನ್ನು ತಪ್ಪಿಸಲು ಈ ಕಾರ್ಯಕ್ರಮ ರೂಪಿಸಲಾಗಿದೆ. ಇಲ್ಲಿ ಸಲ್ಲಿಕೆಯಾಗುವ ಪ್ರತಿ ಅರ್ಜಿಯ ವಿಲೇವಾರಿ ಬಗ್ಗೆ ನಿಗಾ ವಹಿಸಲಾಗುವುದು ಎಂದರು.

ಸ್ಥಳದಲ್ಲೇ ಕೆಎಸ್‌ಆರ್‌ಟಿಸಿ ಸಮಸ್ಯೆ ಬಗೆಹರಿಸಿದ ಶಾಸಕರು:ಸಭೆಯಲ್ಲಿ ಬಳ್ಳೆಕಟ್ಟೆ ಗ್ರಾಮದ ಬಳಿ ಕೆಎಸ್‌ಆರ್‌ಟಿಸಿ ಬಸ್ ನಿಲುಗಡೆಗೆ ಸಾರ್ವಜನಿಕರು ಮನವಿ ಮಾಡಿದರು. ತಕ್ಷಣವೇ ಕಾರ್ಯಪ್ರವೃತ್ತರಾದ ಶಾಸಕರು, ಕೆಎಸ್‌ಆರ್‌ಟಿಸಿ ಡಿಎಂ ಅವರಿಗೆ ದೂರವಾಣಿ ಕರೆ ಮಾಡಿ, ನಾಳೆಯಿಂದಲೇ ಬಸ್ ನಿಲುಗಡೆಗೆ ಕ್ರಮ ಕೈಗೊಳ್ಳಲು ಸೂಚಿಸಿದರು.

ತಾಂಡಾ ಅಭಿವೃದ್ಧಿ ನಿಗಮದ ಜಿಲ್ಲಾ ಅಧಿಕಾರಿ ಸಂಗಮೇಶ್ ಮಾತನಾಡಿ, ಇಂತಹ ವಿಭಿನ್ನ ಕಾರ್ಯಕ್ರಮ ರಾಜ್ಯದಲ್ಲಿಯೇ ಮೊದಲನೆಯದು ಎಂದು ಶ್ಲಾಘಿಸಿದರು. ನಿಗಮದ ಸ್ವಾವಲಂಬಿ ಮತ್ತು ಗಂಗಾ ಕಲ್ಯಾಣ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. 

ಪಶುವೈದ್ಯಾಧಿಕಾರಿ ಕಾಂತರಾಜು ಪ್ರಾಸ್ತಾವಿಕವಾಗಿ ಮಾತನಾಡಿ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅದರ ವಿಲೇವಾರಿ ತಿಳಿಯುವ ಬಗ್ಗೆ ಜನರಿಗೆ ಮಾಹಿತಿ ನೀಡಿದರು.

                    ಬಳ್ಳೆಕಟ್ಟೆ, ಪೋಚಕಟ್ಟೆ, ದೊಡ್ಡಬಿದರೆ ಸೇರಿದಂತೆ ವಿವಿಧ ಗ್ರಾಮಗಳ ಜನರು ನಿವೇಶನ, ಹಕ್ಕುಪತ್ರ, ಬೀದಿ ದೀಪ ಹಾಗೂ ಶೌಚಾಲಯದಂತಹ ಮೂಲಭೂತ ಸೌಕರ್ಯಗಳಿಗಾಗಿ ಅರ್ಜಿ ಸಲ್ಲಿಸಿದರು.

ಉಪಸ್ಥಿತಿ: ಸಭೆಯಲ್ಲಿ ದೊಡ್ಡಬಿದರೆ ಗ್ರಾ.ಪಂ ಅಧ್ಯಕ್ಷೆ ಶಾಲಿನಿ, ತಹಸೀಲ್ದಾರ್ ಮಮತಾ, ಗ್ರೇಡ್-೨ ತಹಸೀಲ್ದಾರ್ ರಂಗನಾಥ್, ಸಮಾಜ ಕಲ್ಯಾಣಾಧಿಕಾರಿ ಶ್ರೀಧರ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವರಾಜ್ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...