ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಫೆಬ್ರವರಿ, 2026 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಬೋರನಕಣಿವೆ ಸಾಯಿಧಾಮದಲ್ಲಿ ನರ್ಮದೋದ್ಭವ ಕಣಿವೆ ಶಂಕರನ ಪ್ರಾಣ ಪ್ರತಿಷ್ಠಾಪನೆ: ಹ್ಯಾಟ್ರಿಕ್ ಹಿರೋ ಶಿವಣ್ಣ ದಂಪತಿ ಭಾಗಿ

ಬೋರನಕಣಿವೆ ಸಾಯಿಧಾಮದಲ್ಲಿ ನರ್ಮದೋದ್ಭವ ಕಣಿವೆ ಶಂಕರನ ಪ್ರಾಣ ಪ್ರತಿಷ್ಠಾಪನೆ: ಹ್ಯಾಟ್ರಿಕ್ ಹಿರೋ ಶಿವಣ್ಣ ದಂಪತಿ ಭಾಗಿ ಹುಳಿಯಾರು : ಹೋಬಳಿಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಬೋರನಕಣಿವೆಯ ಸಾಯಿಧಾಮದಲ್ಲಿ ಇಂದು ಭಕ್ತಿ ಸಂಭ್ರಮ ಮನೆಮಾಡಿತ್ತು. "ಶ್ರೀ ಶಿರಡಿ ಸಾಯಿಬಾಬಾ ಇಂಟರ್ ನ್ಯಾಷನಲ್ ಸರ್ವೀಸ್ ಫೌಂಡೇಷನ್ ಹಾಗೂ ಸೇವಾ ಚೇತನ" ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನರ್ಮದೋದ್ಭವ ಕಣಿವೆ ಶಂಕರನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವು ಅತ್ಯಂತ ವೈಭವದಿಂದ ನೆರವೇರಿತು. ಶಿವಣ್ಣ ದಂಪತಿಗಳ ಆಗಮನ :ಈ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಧ್ರುವತಾರೆ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ದಂಪತಿಗಳು ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.  ಕ್ಷೇತ್ರಕ್ಕೆ ಆಗಮಿಸಿದ ಅತಿಥಿಗಳನ್ನು ಟ್ರಸ್ಟಿನ ಕಾರ್ಯದರ್ಶಿ ವಿಟ್ಟಲ್ ಹಾಗೂ ಅವರ ಕುಟುಂಬದವರು ಗೌರವಪೂರ್ವಕವಾಗಿ ಬರಮಾಡಿಕೊಂಡರು. ಇದೇ ಸಂದರ್ಭದಲ್ಲಿ ಟ್ರಸ್ಟ್ ವತಿಯಿಂದ ಶಿವರಾಜ್ ಕುಮಾರ್ ದಂಪತಿಗಳನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು. ಸಾಯಿಬಾಬಾ ದರ್ಶನ :ಸಾಯಿ ಮಂದಿರಕ್ಕೆ ಭೇಟಿ ನೀಡಿದ ಶಿವರಾಜ್ ಕುಮಾರ್ ಅವರು ಸಾಯಿಬಾಬಾರ ದರ್ಶನ ಪಡೆದರು. ಬಾಬಾ ಅವರ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡಿ, ಸಾಂಪ್ರದಾಯಿಕವಾಗಿ ಚಾದರವನ್ನು ಬದಲಿಸುವ ಮೂಲಕ ಭಕ್ತಿಪೂರ್ವಕ ನಮನ ಸಲ್ಲಿಸಿದರು...

​ಬೋರನಕಣಿವೆ ಸಾಯಿಧಾಮದಲ್ಲಿ ಕಣಿವೆ ಶಂಕರನ ಪ್ರಾಣ ಪ್ರತಿಷ್ಠಾಪನೆ: ಉಪಲೋಕಾಯುಕ್ತ ಬಿ. ವೀರಪ್ಪ ಭಾಗಿ

​ಬೋರನಕಣಿವೆ ಸಾಯಿಧಾಮದಲ್ಲಿ ಕಣಿವೆ ಶಂಕರನ ಪ್ರಾಣ ಪ್ರತಿಷ್ಠಾಪನೆ: ಉಪಲೋಕಾಯುಕ್ತ ಬಿ. ವೀರಪ್ಪ ಭಾಗಿ ​ ಹುಳಿಯಾರು : ಸಮೀಪದ ಬೋರನಕಣಿವೆಯ ಸಾಯಿಧಾಮದಲ್ಲಿ ಶ್ರೀ ಶಿರಡಿ ಸಾಯಿಬಾಬಾ ಇಂಟರ್ ನ್ಯಾಷನಲ್ ಸರ್ವೀಸ್ ಫೌಂಡೇಷನ್ ಹಾಗೂ ಸೇವಾ ಚೇತನ ವತಿಯಿಂದ ಭಾನುವಾರ ' ನರ್ಮದೋದ್ಭವ ಕಣಿವೆ ಶಂಕರನ' ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಅತ್ಯಂತ ಸಡಗರದಿಂದ ನೆರವೇರಿತು. ಈ ಪವಿತ್ರ ಧಾರ್ಮಿಕ ಕಾರ್ಯಕ್ರಮದಲ್ಲಿ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಪಾಲ್ಗೊಂಡು ಶತ ನದಿಗಳ ಆವರಣ ಪೂಜೆಯನ್ನು ನೆರವೇರಿಸಿದರು.  ಬಳಿಕ ಭಕ್ತಾದಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, "ದೇವಸ್ಥಾನಗಳ ಸ್ಥಾಪನೆಯಿಂದ ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆ ನೆಲೆಸುತ್ತದೆ. ಶಿವನು ನಾಡಿನ ಜನತೆಗೆ ಉತ್ತಮ ಆರೋಗ್ಯ, ಸುಬುದ್ಧಿ ಹಾಗೂ ಐಶ್ವರ್ಯವನ್ನು ಕರುಣಿಸಲಿ" ಎಂದು ಹಾರೈಸಿದರು. ​ಇದೇ ಸಂದರ್ಭದಲ್ಲಿ ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಕಣಿವೆ ಶಂಕರನ ದರ್ಶನ ಪಡೆದರು.  ಕಾರ್ಯಕ್ರಮದಲ್ಲಿ ಸುತ್ತಮುತ್ತಲ ಗ್ರಾಮಗಳ  ಭಕ್ತರು ಪಾಲ್ಗೊಂಡು ಪುನೀತರಾದರು.