ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಮಾರ್ಚ್, 2026 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಹುಳಿಯಾರು ಪಟ್ಟಣದಲ್ಲಿ ಸಾರ್ವಜನಿಕ ಸಮಸ್ಯೆಗಳ ಸರಣಿ: ಮುಖ್ಯಾಧಿಕಾರಿಗೆ ನಾಗರಿಕ ಹಿತ ರಕ್ಷಣಾ ವೇದಿಕೆಯಿಂದ ಮೂರು ಮನವಿ ಪತ್ರ

ಹುಳಿಯಾರು ಪಟ್ಟಣದಲ್ಲಿ ಸಾರ್ವಜನಿಕ ಸಮಸ್ಯೆಗಳ ಸರಣಿ: ಮುಖ್ಯಾಧಿಕಾರಿಗೆ ನಾಗರಿಕ ಹಿತ ರಕ್ಷಣಾ ವೇದಿಕೆಯಿಂದ ಮೂರು ಮನವಿ ಪತ್ರ ---------- ಹುಳಿಯಾರು : ಪಟ್ಟಣದ ಬೀದಿ ಬದಿ ವ್ಯಾಪಾರಿಗಳು ಫುಟ್‌ಪಾತ್ ಮೇಲೆ ವ್ಯಾಪಾರ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಫುಟ್ಪಾತ್ ಮೇಲೆ ಸಾರ್ವಜನಿಕರಿಗೆ ಅಡ್ಡಿ ಮಾಡಿಕೊಂಡು ವ್ಯಾಪಾರ ನಡೆಸುತ್ತಿರುವ ವ್ಯಾಪಾರಿಗಳ ತೆರವು, ಪಟ್ಟಣ ಪಂಚಾಯಿತಿಯಲ್ಲಿನ ಸಿಬ್ಬಂದಿ ಕೊರತೆ ನೀಗಿಸುವುದು ಹಾಗೂ ಪ್ಲಾಸ್ಟಿಕ್ ಮುಕ್ತ ನಗರ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 'ಹುಳಿಯಾರು ನಾಗರಿಕ ಹಿತರಕ್ಷಣಾ ವೇದಿಕೆ'ಯಿಂದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಿಗೆ  ಮನವಿ ಸಲ್ಲಿಸಲಾಯಿತು. ವೇದಿಕೆಯ ಪ್ರಮುಖರಾದ ರಾಮಕೃಷ್ಣಪ್ಪ ಅವರ ನೇತೃತ್ವದ ನಿಯೋಗವು ಮುಖ್ಯಾಧಿಕಾರಿ ಎಲ್.ವಿ. ಮಂಜುನಾಥ್ ಅವರನ್ನು ಭೇಟಿ ಮಾಡಿ ಮೂರು ಪ್ರತ್ಯೇಕ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಸಿತು. ಫುಟ್‌ಪಾತ್ ತೆರವಿಗೆ ಆಗ್ರಹ : ಪಟ್ಟಣದ ಬಸ್ ನಿಲ್ದಾಣ ಸೇರಿದಂತೆ ಮುಖ್ಯ ರಸ್ತೆಗಳ ಫುಟ್‌ಪಾತ್‌ಗಳ ಮೇಲೆ ವ್ಯಾಪಾರ ವಹಿವಾಟು ನಡೆಯುತ್ತಿರುವುದರಿಂದ ಸಾರ್ವಜನಿಕರ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿದೆ. ಅಲ್ಲದೆ, ವ್ಯಾಪಾರಿಗಳು ಎಲ್ಲೆಂದರಲ್ಲಿ ಕಸ ಎಸೆಯುತ್ತಿರುವುದರಿಂದ ಅಶುಚಿತ್ವ ನಿರ್ಮಾಣವಾಗುತ್ತಿದೆ. ಆದ್ದರಿಂದ ಬೀದಿ ಬದಿ ವ್ಯಾಪಾರಿಗಳಿ...

ಸವಾಲುಗಳೇ ಇಂದಿನ ಯಶಸ್ಸಿಗೆ ಭದ್ರ ಬುನಾದಿ: ದೊಡ್ಡಬಿದರೆಯಲ್ಲಿ ಇಸ್ರೋ ವಿಜ್ಞಾನಿ ಡಾ. ಆರ್. ಶ್ರೀನಿವಾಸ್ ಸ್ಫೂರ್ತಿದಾಯಕ ನುಡಿ

ಸವಾಲುಗಳೇ ಇಂದಿನ ಯಶಸ್ಸಿಗೆ ಭದ್ರ ಬುನಾದಿ: ದೊಡ್ಡಬಿದರೆಯಲ್ಲಿ ಇಸ್ರೋ ವಿಜ್ಞಾನಿ ಡಾ. ಆರ್. ಶ್ರೀನಿವಾಸ್ ಸ್ಫೂರ್ತಿದಾಯಕ ನುಡಿ --------------------- ಹುಳಿಯಾರು : ಸಮೀಪದ ದೊಡ್ಡಬಿದರೆಯಲ್ಲಿರುವ ಜೆ.ಸಿ.ಎಂ. ಇಂಟರ್ನ್ಯಾಷನಲ್ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಪ್ರಯುಕ್ತ ತಾರಾ ಫೌಂಡೇಶನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 'ಬಾಹ್ಯಾಕಾಶ ವಿಜ್ಞಾನ ಜಾಗೃತಿ' ಕಾರ್ಯಕ್ರಮದಲ್ಲಿ ಹೈದರಾಬಾದಿನ ಇಸ್ರೋ ವಿಜ್ಞಾನಿ ಡಾ. ಆರ್. ಶ್ರೀನಿವಾಸ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಪ್ರೇರಣೆ ನೀಡಿದರು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು ಶಾಲೆಯಲ್ಲಿ ಆಯೋಜಿಸಲಾಗಿದ್ದ ವಿಜ್ಞಾನ ಪ್ರದರ್ಶನವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಇಸ್ರೋ ಪಯಣದ ರೋಚಕ ಇತಿಹಾಸ :ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಆರ್. ಶ್ರೀನಿವಾಸ್, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ISRO) ಅತ್ಯಂತ ಕಠಿಣ ಹಾದಿಯನ್ನು ದಾಟಿ ಇಂದು ಜಾಗತಿಕ ಮಟ್ಟದಲ್ಲಿ ಅಗ್ರಗಣ್ಯ ಸಂಸ್ಥೆಯಾಗಿ ಬೆಳೆದು ಬಂದ ಇತಿಹಾಸವನ್ನು ವಿವರಿಸಿದರು.  1963ರಲ್ಲಿ ಕೇರಳದ ತುಂಬಾದಲ್ಲಿರುವ ಒಂದು ಸಣ್ಣ ಚರ್ಚ್‌ನಲ್ಲಿ ಆರಂಭವಾದ ಭಾರತದ ಬಾಹ್ಯಾಕಾಶ ಪಯಣ, ಇಂದು ಚಂದ್ರಯಾನ ಮತ್ತು ಮಂಗಳಯಾನದಂತಹ ಬೃಹತ್ ಸಾಧನೆಗಳನ್ನು ಮಾಡಿದೆ ಎಂದು ಹೆಮ್ಮೆಯಿಂದ ಸ್ಮರಿಸಿದರು. ಆರಂಭದಲ್ಲಿ ವಿಜ್ಞಾನ...