ವಿಷಯಕ್ಕೆ ಹೋಗಿ

ಹುಳಿಯಾರು ಪಟ್ಟಣದಲ್ಲಿ ಸಾರ್ವಜನಿಕ ಸಮಸ್ಯೆಗಳ ಸರಣಿ: ಮುಖ್ಯಾಧಿಕಾರಿಗೆ ನಾಗರಿಕ ಹಿತ ರಕ್ಷಣಾ ವೇದಿಕೆಯಿಂದ ಮೂರು ಮನವಿ ಪತ್ರ

ಹುಳಿಯಾರು ಪಟ್ಟಣದಲ್ಲಿ ಸಾರ್ವಜನಿಕ ಸಮಸ್ಯೆಗಳ ಸರಣಿ: ಮುಖ್ಯಾಧಿಕಾರಿಗೆ ನಾಗರಿಕ ಹಿತ ರಕ್ಷಣಾ ವೇದಿಕೆಯಿಂದ ಮೂರು ಮನವಿ ಪತ್ರ

----------

ಹುಳಿಯಾರು: ಪಟ್ಟಣದ ಬೀದಿ ಬದಿ ವ್ಯಾಪಾರಿಗಳು ಫುಟ್‌ಪಾತ್ ಮೇಲೆ ವ್ಯಾಪಾರ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಫುಟ್ಪಾತ್ ಮೇಲೆ ಸಾರ್ವಜನಿಕರಿಗೆ ಅಡ್ಡಿ ಮಾಡಿಕೊಂಡು ವ್ಯಾಪಾರ ನಡೆಸುತ್ತಿರುವ ವ್ಯಾಪಾರಿಗಳ ತೆರವು, ಪಟ್ಟಣ ಪಂಚಾಯಿತಿಯಲ್ಲಿನ ಸಿಬ್ಬಂದಿ ಕೊರತೆ ನೀಗಿಸುವುದು ಹಾಗೂ ಪ್ಲಾಸ್ಟಿಕ್ ಮುಕ್ತ ನಗರ ನಿರ್ಮಾಣ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 'ಹುಳಿಯಾರು ನಾಗರಿಕ ಹಿತರಕ್ಷಣಾ ವೇದಿಕೆ'ಯಿಂದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಿಗೆ  ಮನವಿ ಸಲ್ಲಿಸಲಾಯಿತು.

ವೇದಿಕೆಯ ಪ್ರಮುಖರಾದ ರಾಮಕೃಷ್ಣಪ್ಪ ಅವರ ನೇತೃತ್ವದ ನಿಯೋಗವು ಮುಖ್ಯಾಧಿಕಾರಿ ಎಲ್.ವಿ. ಮಂಜುನಾಥ್ ಅವರನ್ನು ಭೇಟಿ ಮಾಡಿ ಮೂರು ಪ್ರತ್ಯೇಕ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಸಿತು.

ಫುಟ್‌ಪಾತ್ ತೆರವಿಗೆ ಆಗ್ರಹ : ಪಟ್ಟಣದ ಬಸ್ ನಿಲ್ದಾಣ ಸೇರಿದಂತೆ ಮುಖ್ಯ ರಸ್ತೆಗಳ ಫುಟ್‌ಪಾತ್‌ಗಳ ಮೇಲೆ ವ್ಯಾಪಾರ ವಹಿವಾಟು ನಡೆಯುತ್ತಿರುವುದರಿಂದ ಸಾರ್ವಜನಿಕರ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿದೆ. ಅಲ್ಲದೆ, ವ್ಯಾಪಾರಿಗಳು ಎಲ್ಲೆಂದರಲ್ಲಿ ಕಸ ಎಸೆಯುತ್ತಿರುವುದರಿಂದ ಅಶುಚಿತ್ವ ನಿರ್ಮಾಣವಾಗುತ್ತಿದೆ. ಆದ್ದರಿಂದ ಬೀದಿ ಬದಿ ವ್ಯಾಪಾರಿಗಳಿಗೆ ಪ್ರತ್ಯೇಕ ಸ್ಥಳ ನಿಗದಿಪಡಿಸಿ, ಫುಟ್‌ಪಾತ್‌ಗಳನ್ನು ತಕ್ಷಣವೇ ತೆರವುಗೊಳಿಸಬೇಕು ಎಂದು ವೇದಿಕೆ ಒತ್ತಾಯಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಾಧಿಕಾರಿಗಳು, "ಶೀಘ್ರದಲ್ಲೇ ವ್ಯಾಪಾರಿಗಳ ಸಭೆ ಕರೆದು ತಿಳುವಳಿಕೆ ನೀಡಲಾಗುವುದು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು" ಎಂದರು.

ಸಿಬ್ಬಂದಿ ನೇಮಕ ಮತ್ತು ಸ್ವಚ್ಛತೆಗೆ : ಕಳೆದ ಹಲವು ವರ್ಷಗಳಿಂದ ಪಟ್ಟಣ ಪಂಚಾಯಿತಿಯಲ್ಲಿ ಅಗತ್ಯ ಸಿಬ್ಬಂದಿ ಮತ್ತು ಪೌರಕಾರ್ಮಿಕರ ಕೊರತೆ ಇರುವುದರಿಂದ ಆಡಳಿತಾತ್ಮಕ ಕೆಲಸಗಳು ಹಾಗೂ ಸ್ವಚ್ಛತಾ ಕಾರ್ಯ ಕುಂಠಿತಗೊಂಡಿದೆ. ಚರಂಡಿಗಳಲ್ಲಿ ನೀರು ನಿಂತು ರೋಗರುಜಿನಗಳು ಹರಡುವ ಭೀತಿ ಎದುರಾಗಿದೆ. ಕೂಡಲೇ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಪಟ್ಟಣದಾದ್ಯಂತ ಸ್ವಚ್ಛತೆ ಕಾಪಾಡಬೇಕು ಎಂದು ನಿಯೋಗ ಮನವಿ ಮಾಡಿತು. ಈ ಬಗ್ಗೆ ಮಾತನಾಡಿದ ಮುಖ್ಯಾಧಿಕಾರಿಗಳು, ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಈಗಾಗಲೇ ಚಾಲನೆಯಲ್ಲಿದೆ ಎಂದು ಭರವಸೆ ನೀಡಿದರು.

ಪ್ಲಾಸ್ಟಿಕ್ ಮುಕ್ತ ಹುಳಿಯಾರು : ಪಟ್ಟಣದಲ್ಲಿ 40 ಮೈಕ್ರಾನ್‌ಗಿಂತ ಕಡಿಮೆ ಇರುವ ಪ್ಲಾಸ್ಟಿಕ್ ಬಳಕೆ ಹೆಚ್ಚಾಗುತ್ತಿದ್ದು, ಇದರಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಹೋಟೆಲ್ ಮಾಲೀಕರು, ವ್ಯಾಪಾರಿಗಳು ಹಾಗೂ ಸಂಜೀವಿನಿ ಮಹಿಳಾ ಸಂಘಗಳ ಸಭೆ ನಡೆಸಿ ಪ್ಲಾಸ್ಟಿಕ್ ಬದಲಿ ವಸ್ತುಗಳ ಬಳಕೆಗೆ ಜಾಗೃತಿ ಮೂಡಿಸಬೇಕು ಎಂದು ವೇದಿಕೆ ಆಗ್ರಹಿಸಿತು. 

                         ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಾಧಿಕಾರಿಗಳು ಪಟ್ಟಣದಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆಯನ್ನು ತಡೆಯಲು ಈಗಾಗಲೇ ಕರಪತ್ರ ಹಂಚುವ ಮೂಲಕ ಅರಿವು ಮೂಡಿಸಲಾಗಿದ್ದು, ಹೋಟೆಲ್ ಮತ್ತು ಅಂಗಡಿ ಮಾಲೀಕರಿಗೆ ಪ್ಲಾಸ್ಟಿಕ್ ಬಳಸದಂತೆ ಸೂಚನೆ ನೀಡಲಾಗಿದೆ. ಸಂತೆ ವ್ಯಾಪಾರಿಗಳಿಗೆ ಸಹ ಎಚ್ಚರಿಕೆ ನೀಡಲಾಗಿದ್ದು, ಕೆಲವೆಡೆ ದಾಳಿ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು. ಸಾರ್ವಜನಿಕರು ಮತ್ತು ಸಂಘ-ಸಂಸ್ಥೆಗಳು ಸಹಕರಿಸಿದರೆ ಮಾತ್ರ ಸಂಪೂರ್ಣ ಪ್ಲಾಸ್ಟಿಕ್ ನಿಷೇಧ ಸಾಧ್ಯ ಎಂದು  ತಿಳಿಸಿದರು.

                        ಬಸ್ ನಿಲ್ದಾಣ, ಉಮಾ ಸ್ಟೋರ್ ಹಾಗೂ ಶಿಲ್ಪಾ ಸ್ಟೋರ್ ಮುಂಭಾಗದ ರಸ್ತೆಯಲ್ಲಿ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸುವುದರಿಂದ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಕೆರೆ ಅಂಗಳದಲ್ಲಿ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವ ಮೂಲಕ ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆ ಮಾಡಬೇಕು ಎಂದು ದಲಿತ ಸಹಾಯವಾಣಿಯ ಹನುಮಂತಪ್ಪ ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.

                  ಸಾರ್ವಜನಿಕ ಸಮಸ್ಯೆಗಳ ಪರಿಹಾರಕ್ಕಾಗಿ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಮುಖ್ಯ ಅಧಿಕಾರಿ ಮಂಜುನಾಥ್ ತಿಳಿಸಿದ್ದು, ಶೀಘ್ರವೇ ಇದಕ್ಕೆಲ್ಲ ಪರಿಹಾರ ಸೂಚಿಸುವುದಾಗಿ ತಿಳಿಸಿದರು.

                ಈ ಸಂದರ್ಭದಲ್ಲಿ ವೇದಿಕೆಯ  ಇಂದಿರಾ ಮೇಡಮ್, ಜಯಲಕ್ಷ್ಮಮ್ಮ, ಮಮತಾ ನಟರಾಜ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಎಚ್ ಎನ್ ಕುಮಾರ್ ,ನಂದಾವಾಡಗಿ, ದಲಿತ ಸಹಾಯವಾಣಿಯ ಹನುಮಂತಪ್ಪ, ಕಾಮನಬಿಲ್ಲು ಫೌಂಡೇಶನ್‌ನ ಚನ್ನಕೇಶವ, ಶಂಕರೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.  

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...