ವಿಷಯಕ್ಕೆ ಹೋಗಿ

ಕೆಂಕೆರೆಯಲ್ಲಿ ಇಂದಿನಿಂದ (ಏಪ್ರಿಲ್ 4ರಿಂದ) ಶ್ರೀ ಕಾಳಿಕಾಂಬಾ ದೇವಿ ಜಾತ್ರಾ ಮಹೋತ್ಸವ

ಕೆಂಕೆರೆಯಲ್ಲಿ ಇಂದಿನಿಂದ (ಏಪ್ರಿಲ್ 4ರಿಂದ) ಶ್ರೀ ಕಾಳಿಕಾಂಬಾ ದೇವಿ ಜಾತ್ರಾ ಮಹೋತ್ಸವ

-----------

​ವರದಿ :✍️ ನರೇಂದ್ರಬಾಬು-ಹುಳಿಯಾರು

-----------

ಹುಳಿಯಾರು ಹೋಬಳಿ ಕೆಂಕೆರೆ ಗ್ರಾಮದಲ್ಲಿ ನೆಲೆಸಿರುವ ಲೋಕಮಾತೆ ಶ್ರೀ ಕಾಳಿಕಾಂಬಾ ದೇವಿಯವರ ಜಾತ್ರಾ ಮಹೋತ್ಸವವು ಇಂದು ಏಪ್ರಿಲ್ 4ರಿಂದ 11ರವರೆಗೆ ಅತ್ಯಂತ ವೈಭವದಿಂದ ಜರುಗಲಿದೆ.


​ಎಂಟು ದಿನಗಳ ಕಾಲ ನಡೆಯುವ ಈ ಜಾತ್ರಾ ಮಹೋತ್ಸವದಲ್ಲಿ  ವಿವಿಧ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. 


ಜಾತ್ರೆಯ ಪ್ರಮುಖ ಆಕರ್ಷಣೆಯಾದ 'ಅಗ್ನಿಕುಂಡ ಸೇವೆ' ಏಪ್ರಿಲ್ 4, 5 ಹಾಗೂ 6ರಂದು (ಶನಿವಾರ, ಭಾನುವಾರ ಮತ್ತು ಸೋಮವಾರ) ಸತತ ಮೂರು ದಿನಗಳ ಕಾಲ ಸಂಜೆ ಜರುಗಲಿದೆ.


​ಕಾರ್ಯಕ್ರಮದ ವಿವರ:

​ಏಪ್ರಿಲ್ 07 (ಮಂಗಳವಾರ): ಅಂದು 'ದೊಡ್ಡಬಾನ' ಕಾರ್ಯಕ್ರಮ ನಡೆಯಲಿದ್ದು, ಬೆಳಿಗ್ಗೆ 11 ಗಂಟೆಗೆ ಶ್ರೀ ಕಾಳಿಕಾಂಬಾ ದೇವಿ, ಶ್ರೀ ಈರಬೊಮ್ಮಕ್ಕ ದೇವಿ, ಶ್ರೀ ದುರ್ಗಮ್ಮ ದೇವಿ ಹಾಗೂ ಶ್ರೀ ಅಂಬಿಕಾ ದೇವಿಯವರ ಆಗಮನ ಮತ್ತು  'ಕೂಡು ಭೇಟಿ'  ನಡೆಯಲಿದೆ. ದಮ್ಮಡಿಹಟ್ಟಿ ಗ್ರಾಮಸ್ಥರಿಂದ ಮದವಣಗಿತ್ತಿ ಕಾರ್ಯಕ್ರಮ ನಡೆಯಲಿದೆ.


​ಏಪ್ರಿಲ್ 08 (ಬುಧವಾರ): ಅಂದು ಮಡಿಲಕ್ಕಿ ಸೇವೆ ನೆರವೇರಲಿದ್ದು, ರಾತ್ರಿ 10 ಗಂಟೆಗೆ ಕೆಂಕೆರೆಯ ಶನೇಶ್ವರ ಕಲಾ ಸಂಘದ ವತಿಯಿಂದ 'ರಾಜ ಸತ್ಯವ್ರತ ಮತ್ತು ಶನಿ ಪ್ರಭಾವ' ಎಂಬ ಪೌರಾಣಿಕ ನಾಟಕ ಪ್ರದರ್ಶನಗೊಳ್ಳಲಿದೆ.


​ಏಪ್ರಿಲ್ 09 (ಗುರುವಾರ): ಬೆಳಿಗ್ಗೆ 5:30ಕ್ಕೆ ಪಟ್ಟದ ಕಲಶ ಸ್ಥಾಪನೆ ಹಾಗೂ ರಾತ್ರಿ 9 ಗಂಟೆಗೆ ಅಮ್ಮನವರ ಉಯ್ಯಾಲೆ ಉತ್ಸವ ಜರುಗಲಿದೆ.


​ಏಪ್ರಿಲ್ 10 (ಶುಕ್ರವಾರ): ಬೆಳಿಗ್ಗೆ ಅಮ್ಮನವರ ಉತ್ಸವ ಹಾಗೂ ಅಂದು ವಿಶೇಷವಾಗಿ 'ಸಿಡಿ ಕಾರ್ಯಕ್ರಮ' ಹಮ್ಮಿಕೊಳ್ಳಲಾಗಿದೆ. ಸಂಜೆ ಕುರಿಹಳ್ಳಿಗೆ ದಯಮಾಡಿಸಲಿದೆ.


​ಏಪ್ರಿಲ್ 11 (ಶನಿವಾರ): ಸಂಜೆ 4 ಗಂಟೆಗೆ ಓಕಳಿ ಸೇವೆಯೊಂದಿಗೆ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ.


​ಕೆಂಕೆರೆ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...