ಚಿಕ್ಕನಾಯಕನಹಳ್ಳಿ, ಏಪ್ರಿಲ್ 2 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರ ಹುಟ್ಟುಹಬ್ಬದ ಅಂಗವಾಗಿ ತಾಲೂಕಿನ ಮಾಸಾಶನ ಪಡೆಯುವ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಯೋಜನೆಯ ಸಿಬ್ಬಂದಿಗಳು ಪ್ರತಿ ಮನೆಗೆ ಭೇಟಿ ನೀಡಿ ಫಲಾನುಭವಿಗಳ ಕ್ಷೇಮ ಸಮಾಚಾರ ವಿಚಾರಿಸಿ, ಹಣ್ಣು ಹಂಪಲುಗಳನ್ನು ಹಂಚುವ ಮೂಲಕ ಮಾನವೀಯತೆ ಮೆರೆದರು.
ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಪ್ರೇಮಾನಂದ ಎಲ್.ಬಿ., ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷ ಪ್ರಕಾಶ್, ಸದಸ್ಯ ಉಮೇಶ್, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಕವಿತಾ, ಮೇಲ್ವಿಚಾರಕರಾದ ಆಶಾ, ಗಾಯತ್ರಿ, ವಸಂತ್ ಹಾಗೂ ಚೈತ್ರ ಸೇರಿದಂತೆ ಸೇವಾ ಪ್ರತಿನಿಧಿಗಳು, ಒಕ್ಕೂಟ ಪದಾಧಿಕಾರಿಗಳು ಮತ್ತು ಸಂಘಗಳ ಸದಸ್ಯರು ಉಪಸ್ಥಿತರಿದ್ದರು.
ಈ ವೇಳೆ ಎಲ್ಲರೂ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ